ಹೊಸ ಜೆರ್ಸಿಯೊಂದಿಗೆ ಯುಎಇ ಚರಣದ ಮೊದಲ ಪಂದ್ಯವಾಡಲಿದೆ ಆರ್ ಸಿಬಿ ತಂಡ
Team Udayavani, Sep 14, 2021, 10:50 AM IST
ದುಬೈ: ಬಹುನಿರೀಕ್ಷಿತ ಐಪಿಎಲ್ ಕೂಟದ ಯುಎಇ ಚರಣ ಸನ್ನಿಹಿತವಾಗಿದೆ. ಇನ್ನು ಕೆಲವೇ ದಿನಗಳಲ್ಲಿ ವರ್ಣರಂಜಿತ ಚುಟುಕು ಕ್ರಿಕೆಟ್ ಕೂಟ ಮತ್ತೆ ಆರಂಭವಾಗಲಿದೆ. ಈಗಾಗಲೇ ತಂಡಗಳು ಯುಎಇ ಗೆ ತೆರಳಿದ್ದು ತಾಲೀಮಿನಲ್ಲಿ ಭಾಗಿಯಾಗಿವೆ.
ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೆ.20ರಂದು ಪುನರಾರಂಭದ ತನ್ನ ಮೊದಲ ಪಂದ್ಯವಾಡಲಿದೆ. ಅಬುಧಾಬಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೆಣಸಾಡಲಿದೆ. ಈ ಪಂದ್ಯದ ಮತ್ತೊಂದು ವಿಶೇಷವೆಂದರೆ ಆರ್ ಸಿಬಿ ಹೊಸ ಜರ್ಸಿಯೊಂದಿಗೆ ಆಡಲಿದೆ.
ಕೋವಿಡ್ ವೈರಸ್ ವಿರುದ್ಧ ಹೋರಾಡುತ್ತಿರುವ ಮುಂಚೂಣಿ ಯೋಧರಿಗೆ ಗೌರವ ಮತ್ತು ಬೆಂಬಲ ನೀಡುವ ಉದ್ದೇಶದಿಂದ ಆರ್ ಸಿಬಿ ತಂಡವು ತಿಳಿ ನೀಲಿ ಬಣ್ಣದ ಜೆರ್ಸಿಯೊಂದಿಗೆ ಕಣಕ್ಕಿಳಿಯಲಿದೆ.
ಐಪಿಎಲ್ 2021 ರ ಮೊದಲ ಹಂತದಲ್ಲಿ, ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ ಕೋವಿಡ್ ಸಮಯದಲ್ಲಿ ಮುಂಚೂಣಿ ಕೆಲಸಗಾರರಿಗೆ ಫ್ರಾಂಚೈಸಿಯ ವತಿಯಿಂದ ತಮ್ಮ ಬೆಂಬಲ ಸೂಚಿಸಿದ್ದರು. ಕೋವಿಡ್ ಸಮಯದಲ್ಲಿ ಬೆಂಗಳೂರು ಮತ್ತು ದೇಶದ ಇತರ ನಗರಗಳಲ್ಲಿ ಆಮ್ಲಜನಕ ಬೆಂಬಲಕ್ಕೆ ಸಂಬಂಧಿಸಿದ ಆರೋಗ್ಯ ರಕ್ಷಣೆಯ ಮೂಲಸೌಕರ್ಯಕ್ಕೆ ಸಹಾಯ ಮಾಡಲು ತಮ್ಮ ಫ್ರ್ಯಾಂಚೈಸಿ ಆರ್ಥಿಕ ಕೊಡುಗೆ ನೀಡುವುದಾಗಿ ಕೊಹ್ಲಿ ಘೋಷಿಸಿದ್ದರು.
ಇದನ್ನೂ ಓದಿ:ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಬ್ರೆಂಡನ್ ಟೇಲರ್
ಆರ್‌ಸಿಬಿ ಫ್ರಾಂಚೈಸಿಯು ಗಿವ್ ಇಂಡಿಯಾ ಫೌಂಡೇಶನ್‌ನೊಂದಿಗೆ ಕೈಜೋಡಿಸಿ, ಬೆಂಗಳೂರು ಮತ್ತು ಇತರ ನಗರಗಳಲ್ಲಿ ಸುಮಾರು 100 ಯೂನಿಟ್‌ಗಳಷ್ಟು ಆಮ್ಲಜನಕ ಕಾನ್ಸನ್ಟ್ರೇಟರ್ ಗಳನ್ನು ಒದಗಿಸಿತ್ತು. ಆರ್‌ಸಿಬಿಯ ಮಾತೃ ಸಂಸ್ಥೆ ಡಿಯಾಜಿಯೊ ಇಂಡಿಯಾ 3 ಲಕ್ಷ ಲೀಟರ್ ಸ್ಯಾನಿಟೈಜರ್‌ಗಳನ್ನು ತಯಾರಿಸಿ ವಿತರಿಸಿದೆ.
ಕಳೆದ ಏಪ್ರಿಲ್ ನಲ್ಲಿ ಆರಂಭವಾಗಿದ್ದ 14ನೇ ಆವೃತ್ತಿಯ ಐಪಿಎಲ್ ಕೂಟ ಕೋವಿಡ್ ಕಾರಣದಿಂದ ಮುಂದೂಡಿಕೆಯಾಗಿತ್ತು. ಹೀಗಾಗಿ ಸೆ.19ರಂದು ದುಬೈನಲ್ಲಿ ಮತ್ತೆ ಕೂಟ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.