ಹಿಂದೂ ಸಂಸ್ಕೃತಿ ಸಂಸ್ಕಾರ ಗಳು ತಳಮಟ್ಟದಲ್ಲಿ ಬಲಗೊಳ್ಳಬೇಕು : ಕೇಶವ ಹೆಗಡೆ
Team Udayavani, Sep 14, 2021, 1:13 PM IST
ಶಿರಸಿ: ಹಿಂದೂ ಸಂಸ್ಕೃತಿ ಸಂಸ್ಕಾರ ಗಳು ತಳಮಟ್ಟದಲ್ಲಿ ಬಲಗೊಳ್ಳಬೇಕು, ಮೊದಲು ನಾವು ಆಚರಿಸಿ ನಂತರ ಕಿರಿಯರಿಗೆ ಕಲಿಸಿಕೊಡಬೇಕು ಎಂದು ವಿಶ್ವ ಹಿಂದೂ ಪರಿಷತ್ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ ಹೇಳಿದರು.
ತಾಲೂಕಿನ ದೇವತೇಮನೆ ಶ್ರೀ ಲಲಿತಾ ಭಧ್ರಕಾಳಿ ದೇವಸ್ಥಾನ ದಲ್ಲಿ ವಿಶ್ವ ಹಿಂದೂ ಪರಿಷತ್ತಿನ ಸಾಪ್ತಾಹಿಕ ಸತ್ಸಂಗಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇಂದಿನ ವಿಷಮ ಪರಿಸ್ಥಿತಿಯಲ್ಲಿ ನಮ್ಮ ಆಚಾರ, ವಿಚಾರ, ನಡೆ, ನುಡಿ ಹಾಗೂ ಜೀವನ ಆದರ್ಶಗಳನ್ನು ಮನೆ ಮನೆಗಳಲ್ಲಿ ಗಟ್ಟಿಗೊಳಿಸುವದು ಅಗತ್ಯವಿದೆ. ಇಂತಹ ನಂಬಿಕೆ ಗಟ್ಟಿಗೊಳಸಿ ಬದುಕು ನಡೆಸಲು ಪ್ರತಿ ಹಿಂದೂವಿನಲ್ಲಿ ದೇಶಭಕ್ತಿ, ದೈವ ಭಕ್ತಿ, ಹಾಗೂ ಸಂಘಟನಾ ಶಕ್ತಿಯನ್ನು ಬಲಗೊಳಿಸಲು ವಿಶ್ವ ಹಿಂದೂ ಪರಿಷತ್ತು ದೇಶಾದ್ಯಂತ 25 ಸಾವಿರ ಸ್ಥಾನಗಳಲ್ಲಿ ಸಾಪ್ತಾಹಿಕ ಸತ್ಸಂಗಗಳನ್ನು ನಡೆಸುತ್ತಿದೆ ಎಂದರು.
ಪ್ರತಿಯೊಬ್ಬರೂ ಇಂತಹ ಸತ್ಸಂಗ ಚಟುವಟಿಕೆಗಳಲ್ಲಿ ಭಾಗವಹಿಸಿ ನಮ್ಮ ಪವಿತ್ರವಾದ ಧರ್ಮ, ಸಂಸ್ಕೃತಿಯ ರಕ್ಷಣೆಗೆ ಮುಂದಾಗಬೇಕಿದೆ ಎಂದೂ ಮನವಿ ಮಾಡಿದರು.
ಇದನ್ನೂ ಓದಿ :ಅಪ್ರಾಪ್ತರನ್ನು ಬಳಸಿ ಭಿಕ್ಷಾಟನೆ : ಚೈಲ್ಡ್ ಲೈನ್ ಅಧಿಕಾರಿಗಳಿಂದ ಮಕ್ಕಳ ರಕ್ಷಣೆ
ಪ್ರಾಂತೀಯ ಉಪಾಧ್ಯಕ್ಷ ಗಂಗಾಧರ ಹೆಗಡೆ ಕಡಕಿನಬಯಲು, ಶಿರಸಿ ಜಿಲ್ಲಾ ಸೇವಾ ಪ್ರಮುಖ ಶ್ರೀಧರ ಭಟ್ ಉಪಸ್ಥಿತರಿದ್ದರು. ಮೇಲಿನೋಣಿಕೇರಿ ದೇವತೇಮನೆ ಸುತ್ತಲಿನ ಭಾಗಗಳಿಂದ ಮಹಿಳೆಯರು, ಯುವಕರೂ ಸೇರಿದಂತೆ 40 ಕ್ಕೂ ಹೆಚ್ಚು ಮಂದಿ ಸತ್ಸಂಗದಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.