![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 14, 2021, 8:46 PM IST
ಬೆಂಗಳೂರು: ದೇವಸ್ಥಾನ ತೆರವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಮುಂದಿಟ್ಟುಕೊಂಡು ಅವಸರದಿಂದ ತುರ್ತು ಕ್ರಮ ಜರುಗಿಸಿ ದೇವಸ್ಥಾನಗಳನ್ನು ಒಡೆಯಬೇಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಮಂಗಳವಾರ ಬೆಂಗಳೂರಿನಲ್ಲಿ ಕೋವಿಡ್ ಲಸಿಕೆ ಅಭಿಯಾನದ ಹಿನ್ನೆಲೆಯಲ್ಲಿ ಸಭೆ ನಡೆಸಿದ ಬಳಿಕ ವಿಧಾನಸೌಧ ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.
ಮೈಸೂರಿನ ದೇವಾಲಯಗಳ ತೆರವಿನ ಕುರಿತಂತೆ ಎಲ್ಲ ವಿವರಗಳನ್ನು ಸದನದಲ್ಲಿ ನೀಡುತ್ತೇನೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಯಾಕೆ ಕ್ರಮ ಕೈಗೊಂಡಿದ್ದೀರಿ ಎಂದು ಜಿಲ್ಲಾಧಿಕಾರಿ ಹಾಗೂ ತಹಸೀಲ್ದಾರರಿಗೆ ನೋಟಿಸ್ ನೀಡಲಾಗಿದೆ ಎಂದು ಅವರು ಹೇಳಿದರು.
ಇಡೀ ಕರ್ನಾಟಕದಲ್ಲಿ ಅವಸರದ ತೀರ್ಮಾನ ತೆಗೆದುಕೊಂಡು ದೇವಸ್ಥಾನಗಳನ್ನು ಒಡೆಯುವ ಕೆಲಸ ಮಾಡಬಾರದು. ಸರ್ವೋಚ್ಛ ನ್ಯಾಯಾಲಯದ ಆದೇಶವನ್ನು ಸಮಗ್ರವಾಗಿ ಅಧ್ಯಯನ ಮಾಡಿ, ಸಚಿವ ಸಂಪುಟ ಸಭೆಯಲ್ಲಿಯೂ ಚರ್ಚಿಸಿ ಎರಡು ದಿನಗಳಲ್ಲಿ ನಿರ್ದಿಷ್ಟ ಸೂಚನೆ ನೀಡಲಾಗುವುದು. ಸದನ ನಡೆಯುತ್ತಿರುವುದರಿಂದ ಎಲ್ಲ ವಿವರಗಳನ್ನು ಸದನಕ್ಕೆ ಒದಗಿಸಲಾಗುವುದು ಎಂದು ತಿಳಿಸಿದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.