ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: 20 ವರ್ಷ ಜೈಲು ಶಿಕ್ಷೆ
Team Udayavani, Sep 14, 2021, 9:32 PM IST
ಸಾಂದರ್ಭಿಕ ಚಿತ್ರ
ಚಾಮರಾಜನಗರ: ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುತ್ತಿದ್ದೇನೆ, ಮದುವೆಯಾಗುತ್ತೇನೆಂದು ಹೇಳಿ ನಂಬಿಸಿ, ಸಂಬಂಧಿಕರ ಮನೆಯಲ್ಲಿ ಇರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜಿಲ್ಲಾ ಸೆಷೆನ್‌ಸ್ ನ್ಯಾಯಾಲಯ 20 ವರ್ಷಗಳ ಜೈಲು ಶಿಕ್ಷೆ ಹಾಗೂ 6.25 ಲಕ್ಷ ರೂ. ದಂಡ ವಿಧಿಸಿದೆ.
ತಮ್ಮ ಮನೆಯಲ್ಲಿ ಇರಿಸಿಕೊಂಡು ಕೃತ್ಯಕ್ಕೆ ಸಹಕರಿಸಿದ ಕಾರಣ ಮಹಿಳೆಗೂ ಐದು ವರ್ಷಗಳ ಜೈಲು ಶಿಕ್ಷೆ, 2 ಲಕ್ಷ ದಂಡ ವಿಧಿಸಲಾಗಿದೆ.
ನಗರದ ನಿವಾಸಿ ಚಂದ್ರು ಅಲಿಯಾಸ್ ಚಂದ್ರಶೇಖರ್ (21) ಹಾಗೂ ಆತನ ಬಂಧು ಮಹದೇವಮ್ಮ ಶಿಕ್ಷೆಗೆ ಗುರಿಯಾದವರು.
ಅಪರಾಧಿ ಚಂದ್ರು ನಗರದ ಬೈಕ್ ಶೋರೂಂ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ, ಅಪ್ರಾಪ್ತ ಬಾಲಕಿ ಶಾಲೆಗೆ ಹೋಗುತ್ತಿದ್ದು, ಬಸ್ ನಿಲ್ದಾಣದಲ್ಲಿ ಅವಳನ್ನು ಪರಿಚಯ ಮಾಡಿಕೊಂಡು ಪ್ರೀತಿಸಿ ಮದುವೆಯಾಗುತ್ತೇನೆ ಎಂದು ಆಕೆಯನ್ನು ನಂಬಿಸಿದ್ದ.
2018ರ ಜುಲೈ 11ರಂದು ಬೆಳಿಗ್ಗೆ 8.45ರಲ್ಲಿ ಬಾಲಕಿ ಖಾಸಗಿ ಬಸ್‌ನಲ್ಲಿ ಹೋಗುತ್ತಿದ್ದಾಗ, ತಾನು ಸಹ ಬಸ್ ಹತ್ತಿ , ನಿನ್ನನ್ನು ಮದುವೆಯಾಗುತ್ತೇನೆ ಎಂದು ಪುಸಲಾಯಿಸಿ, ಆ ಬಾಲಕಿಯನ್ನು ಸ್ಕೂಲ್ ಬಳಿ ಇಳಿಯಲು ಬಿಡದೇ ಜೊತೆಯಲ್ಲಿ ಕರೆದುಕೊಂಡು ಹೋಗಿ, ತಾಲೂಕಿನ ಗ್ರಾಮವೊಂದರಲ್ಲಿ, ತನ್ನ ಬಂಧುವಾದ ಮಹದೇವಮ್ಮ ಅವರ ಮನೆಯಲ್ಲಿ ಇರಿಸಿದ್ದ. ಈ ಸಂದರ್ಭದಲ್ಲಿ ಆರು ದಿನಗಳ ಕಾಲ ಆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ.
ಹಿಗಾಗಿ ಬಾಲಕಿಯ ತಾಯಿ ಚಾ.ನಗರ ಪಟ್ಟಣ ಠಾಣೆಯಲ್ಲಿ ಚಂದ್ರು ಹಾಗೂ ಮಹದೇವಮ್ಮ ವಿರುದ್ಧ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಇನ್‌ಸ್ಪೆಕ್ಟರ್ ಮಹದೇವಯ್ಯ ಅವರು, ಆರೋಪಿಗಳ ವಿರುದ್ಧ ಪೋಕ್ಸೊ ಕಾಯ್ದೆ ಹಾಗೂ ವಿವಿಧ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಸೆಷೆನ್‌ಸ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದು ಸಾಕ್ಷ್ಯಾಧಾರಗಳಿಂದ ಹಾಗೂ ವೈದ್ಯಕೀಯ ಪರೀಕ್ಷೆಗಳಿಂದ ದೃಢಪಟ್ಟ ಕಾರಣ, ಮಂಗಳವಾರ ತೀರ್ಪು ನೀಡಿದ ನ್ಯಾಯಾಧೀಶರಾದ ಸದಾಶಿವ ಸುಲ್ತಾನಪುರಿ ಅವರು, ಆರೋಪಿ ಚಂದ್ರುವಿಗೆ 20 ವರ್ಷ ಕಠಿಣ ಶಿಕ್ಷೆ, 6.25 ಲಕ್ಷ ದಂಡ ಹಾಗೂ ಕೃತ್ಯಕ್ಕೆ ಸಹಕರಿಸಿದ ಕಾರಣ ಮಹದೇವಮ್ಮ ಅವರಿಗೆ 5 ವರ್ಷ ಶಿಕ್ಷೆ ಹಾಗೂ 2 ಲಕ್ಷ ದಂಡ ವಿಧಿಸಿದ್ದಾರೆ.
ಪ್ರಕರಣದ ಸಂತ್ರಸ್ತ ಬಾಲಕಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ 7.50 ಲಕ್ಷ ಮೊತ್ತವನ್ನು ಪರಿಹಾರ ರೂಪದಲ್ಲಿ ನೀಡಬೇಕು ಎಂದು ನ್ಯಾಯಾಧೀಶರು ಆದೇಶಿಸಿದ್ದಾರೆ.
ಸರ್ಕಾರದ ಪರವಾಗಿ ಪೋಕ್ಸೋ ಕಾಯ್ದೆಯ ವಿಶೇಷ ಸರ್ಕಾರಿ ಅಭಿಯೋಜಕ ಕೆ.ಯೋಗೇಶ್ ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.