ಬಿಲ್ಲವ ಸಮಾಜದ ಹಿತಚಿಂತನೆ ಮುಖ್ಯ ಉದ್ದೇಶ: ಹರೀಶ್‌ ಜಿ. ಅಮೀನ್‌

ಬಿಲ್ಲವರ ಅಸೋಸಿಯೇಶನ್‌ ಮುಂಬಯಿ 88, 89ನೇ ವಾರ್ಷಿಕ ಮಹಾಸಭೆ

Team Udayavani, Sep 15, 2021, 2:35 PM IST

ಬಿಲ್ಲವ ಸಮಾಜದ ಹಿತಚಿಂತನೆ ಮುಖ್ಯ ಉದ್ದೇಶ: ಹರೀಶ್‌ ಜಿ. ಅಮೀನ್‌

ಸಾಂತಾಕ್ರೂಜ್‌: ಸಮಾಜಕ್ಕೆ ಒಳ್ಳೆಯ ಕೆಲಸವಾಗಬೇಕೆಂಬ ಉದ್ದೇ ಶದಿಂದ ಅಸೋಸಿಯೇಶನ್‌ನಲ್ಲಿ ಸಕ್ರಿಯನಾಗಿ ಕೆಲಸ ಮಾಡಲು ಪ್ರಾರಂಭಿಸಿದೆ. ಪ್ರಸ್ತುತ ಅಸೋಸಿ ಯೇಶನ್‌ನ ಅಧ್ಯಕ್ಷನಾಗಿ ಉತ್ತಮ ಕಾರ್ಯಕರ್ತರೊಂದಿಗೆ ನಮ್ಮ ಸಮಾಜವನ್ನು ದಿ| ಜಯ ಸಿ. ಸುವರ್ಣರ ಪ್ರೇರಣೆ ಹಾಗೂ ಮಾರ್ಗ ದರ್ಶನದಲ್ಲಿ ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಮುಂದಾಗಿದ್ದೇವೆ. ಈ ಮಹತ್ಕಾರ್ಯಕ್ಕೆ ಎಲ್ಲರ ಸಹಕಾರ, ಬೆಂಬಲ ಹಾಗೂ ಪ್ರೋತ್ಸಾಹದ ಅಗತ್ಯವಿದೆ. ಸಂಘಟನೆಯ ಬಲವ ರ್ಧನೆಯೊಂದಿಗೆ ಸಮಾಜದ ಹಿತಚಿಂತನೆ ನಮ್ಮ ಮುಖ್ಯ ಉದ್ದೇ ಶವಾಗಿದೆ ಎಂದು ಬಿಲ್ಲವರ ಅಸೋಸಿ ಯೇಶನ್‌ ಮುಂಬಯಿ ಅಧ್ಯಕ್ಷ ಹರೀಶ್‌ ಜಿ. ಅಮೀನ್‌ ತಿಳಿಸಿದರು.

ಸೆ. 12ರಂದು ಸಾಂತಾಕ್ರೂಜ್‌ ಪೂರ್ವದ ಬಿಲ್ಲವ ಭವನದಲ್ಲಿ ಜರಗಿದ ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ 88ನೇ ಹಾಗೂ 89ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಬಾರಿ ಹೆಚ್ಚಿನ ಸಂಖ್ಯೆ ಯಲ್ಲಿ ಯುವಕರು ಸಮಾಜದ ಸಂಘಟನೆಯಲ್ಲಿ ಕೆಲಸ ಮಾಡಲು ಮುಂದೆ ಬಂದಿದ್ದಾರೆ. ಸಮಾಜಪರ ಕೆಲಸ ಮಾಡಲು ಎಲ್ಲರಿಗೂ ಅವಕಾಶ ನೀಡುತ್ತೇವೆ ಎಂದರು.

ರಾಷ್ಟ್ರೀಯ ಬಿಲ್ಲವರ ಮಹಾಮಂ ಡಲದ ಅಧ್ಯಕ್ಷ ಡಾ| ರಾಜಶೇಖರ್‌ ಕೋಟ್ಯಾನ್‌ ಶುಭ ಹಾರೈಸಿದರು. ಈ ಸಂದರ್ಭ ನಿಕಟಪೂರ್ವ ಅಧ್ಯಕ್ಷ ಚಂದ್ರಶೇಖರ ಪೂಜಾರಿ ಅವರನ್ನು ಪ್ರಸ್ತುತ ಅಧ್ಯಕ್ಷ ಹರೀಶ್‌ ಜಿ. ಅಮೀನ್‌ ಪುಷ್ಪಗುತ್ಛವನ್ನಿತ್ತು ಗೌರವಿಸಿದರು. ಹರೀಶ್‌ ಜಿ. ಅಮೀನ್‌ ಅವರಿಗೆ ಚಂದ್ರಶೇಖರ ಎಸ್‌. ಪೂಜಾರಿ ಅವರು ಪುಷ್ಪಗುತ್ಛವನ್ನಿತ್ತು ಅಭಿನಂದಿಸಿದರು.

ಬಿಲ್ಲವರ ಅಸೋಸಿಯೇಶನ್‌ ಮಾಜಿ ಅಧ್ಯಕ್ಷ ವರದ ಉಲ್ಲಾಳ್‌ ಮಾತನಾಡಿ, ಅಸೋಸಿಯೇಶನ್‌ನ ಕಾರ್ಯ ಚಟುವಟಿಕೆಗಳಲ್ಲಿ ಕೆಲವು ಬದಲಾವಣೆಗಳ ಅಗತ್ಯವಿದೆ. ಇದನ್ನು ಸಂಬಂಧಪಟ್ಟವರು ಚರ್ಚಿಸಿ ಬದಲಾವಣೆ ಮಾಡಬೇಕಾಗಿದೆ. ಹಿರಿಯರು ಹೊಸ ಮುಖಗಳಿಗೆ ಹಾಗೂ ಯುವಕರಿಗೆ ಅವಕಾಶ ನೀಡಬೇಕು. ಈ ಸಂಸ್ಥೆಗೆ ಅನೇಕ ಮಹನೀಯರು ಹಲವು ವರ್ಷಗಳ ಹಿಂದಿನಿಂದಲೇ ಪರಿಶ್ರಮ ಪಟ್ಟಿ¨ªಾರೆ. ಅಂಥವರನ್ನು ಮರೆಯುವಂತಿಲ್ಲ ಎಂದರು.

ಇದನ್ನೂ ಓದಿ:ಹೈಟೆಕ್‌ ಪ್ರವಾಸಿ ಮಂದಿರ ನಿರ್ಮಾಣ ಶೀಘ್ರ: ರೇಣುಕಾಚಾರ್ಯ

ಮಾಜಿ ಅಧ್ಯಕ್ಷ ಎಲ್‌. ವಿ. ಅಮೀನ್‌ ಮಾತನಾಡಿ, ನಾರಾಯಣ ಗುರು ಹಾಗೂ ಜಯ ಸುವರ್ಣ ಅವರು ಹಾಕಿಕೊಟ್ಟ ದಾರಿಯಲ್ಲಿ ನಮ್ಮ ಸಮಾಜವನ್ನು ಮುನ್ನಡೆಸಬೇಕಾಗಿದೆ ಎಂದರು.

ಮಾಜಿ ಅಧ್ಯಕ್ಷ ನಿತ್ಯಾನಂದ ಎನ್‌. ಕೋಟ್ಯಾನ್‌ ಮಾತನಾಡಿ, ಸಮಾಜಕ್ಕೆ ಹಿರಿಯರು ಮಾಡಿದ ಕೆಲಸವನ್ನು ಮರೆಯದೆ ಅವರಿಗೆ ಸರಿಯಾದ ಗೌರವ ನೀಡುತ್ತಾ ಬರಬೇಕು ಎಂದವರು ಹೇಳಿದರು.

ಬಿಲ್ಲವ ಛೇಂಬರ್‌ ಆಫ್‌ ಕಾಮರ್ಸ್‌ ಎಂಡ್ ಇಂಡಸ್ಟ್ರೀಸ್‌ನ ಕಾರ್ಯಾಧ್ಯಕ್ಷ ಎನ್‌. ಟಿ. ಪೂಜಾರಿ ಮಾತನಾಡಿ, ಪ್ರಸ್ತುತ ಹರೀಶ್‌ ಅಮೀನ್‌ ಅವರಿಗೆ ಸಂಸ್ಥೆಯನ್ನು ಮುನ್ನಡೆಸುವ ಜವಾಬ್ದಾರಿ ದೊರೆತಿದೆ. ಅವರಿಗೆ ನಾವೆಲ್ಲರೂ ಸಂಪೂರ್ಣ ಸಹಕಾರ ನೀಡೋಣ. ಸಮಾಜ ಬಾಂಧವರಿಗೆ ಸಹಾಯವಾಗುವ ಕೆಲಸ ನಮ್ಮಿಂದಾಗಲಿ. ಇದಕ್ಕಾಗಿ ನಾವೆಲ್ಲರೂ ಪ್ರಯತ್ನಿಸೋಣ ಎಂದು ಹೇಳಿದರು.

ಹಿರಿಯರಾದ ಕೆ. ಎಂ. ಮಾಬಿಯನ್‌, ನ್ಯಾಯವಾದಿ ರಾಜ ವಿ. ಸಾಲ್ಯಾನ್‌, ಭಾರತ್‌ ಬ್ಯಾಂಕ್‌ನ ನಿರ್ದೇಶಕರಾದ ಭಾಸ್ಕರ್‌ ಎಂ. ಸಾಲ್ಯಾನ್‌, ಪುರುಷೋತ್ತಮ ಕೋಟ್ಯಾನ್‌, ನವಿಮುಂಬಯಿ ಸ್ಥಳೀಯ ಕಚೇರಿಯ ಕಾರ್ಯಾಧ್ಯಕ್ಷ ಧರ್ಮದರ್ಶಿ ರಮೇಶ್‌ ಎಂ. ಪೂಜಾರಿ, ಉಮೇಶ ಅಂಚನ್‌, ಡಿ. ಎಂ. ಅಮೀನ್‌ ಮೊದಲಾದವರು ಸಲಹೆ-ಸೂಚನೆ ನೀಡಿದರು.

ಸಭೆಯಲ್ಲಿ ನೂತನ ಕಾರ್ಯ ಕಾರಿ ಸಮಿತಿಯ ಸದಸ್ಯರ ಹೆಸರನ್ನು ಘೋಷಿಸಲಾಯಿತು. ಗುರುನಾರಾಯಣ ರಾತ್ರಿ ಶಾಲೆಯಲ್ಲಿ ಈ ಬಾರಿ ಎಸ್‌ಎಸ್‌ಸಿ ಪರೀಕ್ಷೆಯಲ್ಲಿ ಶೇ. 92 ಅಂಕಗಳನ್ನು ಪಡೆದ ಐಶ್ವರ್ಯಾ ಪೂಜಾರಿ ಅವರನ್ನು ಎಂ. ಬಿ. ಕುಕ್ಯಾನ್‌ ಬಂಗಾರದ ಪದಕ ನೀಡಿ ಗೌರವಿಸಲಾಯಿತು.

ವಿಧಿತಾ ಆನಂದ್‌ ಪೂಜಾರಿ ಪ್ರಾರ್ಥನೆಯೊಂದಿಗೆ ಮಹಾಸಭೆ ಆರಂಭಗೊಂಡಿತು. ಉಪಾಧ್ಯಕ್ಷರಾದ ಶಂಕರ್‌ ಡಿ. ಪೂಜಾರಿ, ದಯಾನಂದ ಆರ್‌. ಪೂಜಾರಿ, ಶ್ರೀನಿವಾಸ ಆರ್‌. ಕರ್ಕೇರ, ಗೌರವ ಪ್ರಧಾನ ಕಾರ್ಯದರ್ಶಿ ಧನಂಜಯ ಶಾಂತಿ, ಜತೆ ಕಾರ್ಯದರ್ಶಿಗಳಾದ ಹರೀಶ್‌ ಜಿ. ಸಾಲ್ಯಾನ್‌, ಧರ್ಮೇಶ್‌ ಎಸ್‌. ಸಾಲ್ಯಾನ್‌, ಕೇಶವ ಕೆ. ಕೋಟ್ಯಾನ್‌, ಅಕ್ಷಯ್‌ ಪೂಜಾರಿ, ಗೌರವ ಪ್ರಧಾನ ಕೋಶಾಧಿಕಾರಿ ರಾಜೇಶ್‌ ಜೆ. ಬಂಗೇರ, ಜತೆ ಕೋಶಾಧಿಕಾರಿಗಳಾದ ಶಿವರಾಮ್‌ ಎಸ್‌. ಪೂಜಾರಿ, ಸದಾಶಿವ ಎ. ಕರ್ಕೇರ, ಮೋಹನ್‌ ಡಿ. ಪೂಜಾರಿ, ಜಯ ಎಸ್‌. ಸುವರ್ಣ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಜಯಂತಿ ವರದ ಉಲ್ಲಾಳ್‌, ಯುವ ಅಭ್ಯುದಯ ಸಮಿತಿಯ ಕಾರ್ಯಾಧ್ಯಕ್ಷ ನಾಗೇಶ್‌ ಎಂ. ಕೋಟ್ಯಾನ್‌, ಸೇವಾದಳದ ದಳಪತಿ ಗಣೇಶ್‌ ಕೆ. ಪೂಜಾರಿ, ಸದಸ್ಯರಾದ ಮೋಹನ್‌ದಾಸ್‌ ಜಿ. ಪೂಜಾರಿ, ಧರ್ಮಪಾಲ್‌ ಜಿ. ಅಂಚನ್‌, ಮಹೇಶ್‌ ಕಾರ್ಕಳ, ಹರೀಶ್‌ ಹೆಜಮಾಡಿ, ಬಿ. ರವೀಂದ್ರ ಅಮೀನ್‌, ನೀಲೇಶ್‌ ಪೂಜಾರಿ ಪಲಿಮಾರ್‌, ವಿಶ್ವನಾಥ್‌ ಆರ್‌. ತೋನ್ಸೆ, ಅಶೋಕ್‌ ಕೆ. ಕುಕ್ಯಾನ್‌, ಸುಮಿತ್ರಾ ಎಸ್‌. ಬಂಗೇರ, ಶಕುಂತಲಾ ಕೆ. ಕೋಟ್ಯಾನ್‌, ಹರೀಶ್‌ ಜಿ ಪೂಜಾರಿ, ಬಬಿತಾ ಜೆ. ಕೋಟ್ಯಾನ್‌, ನವೀನ್‌ ಎಲ್‌. ಬಂಗೇರ, ಜಗನ್ನಾಥ್‌ ಎಂ. ಅಮೀನ್‌, ಕೇಶವ ಎಸ್‌. ಪೂಜಾರಿ, ಡಾ| ಗೀತಾಂಜಲಿ ಎಲ್‌. ಸಾಲ್ಯಾನ್‌, ವಿಶೇಷ ಆಮಂತ್ರಿತರಾದ ಶಂಕರ ಎಸ್‌. ಸುವರ್ಣ, ಆಂತರಿಕ ಲೆಕ್ಕಪರಿಶೋಧಕರಾದ ಸಚಿನ್‌ ಎಸ್‌. ಪೂಜಾರಿ, ದಿವಾಕರ್‌ ಎಂ. ಪೂಜಾರಿ, ಹಾಗೂ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷರು ಉಪಸ್ಥಿತರಿದ್ದರು.

ಸಮಾಜದ ಅಭಿವೃದ್ಧಿಗೆ ಶ್ರಮಿಸೋಣ
ಸಮಾಜದ ಅಭಿವೃದ್ಧಿಗಾಗಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕಾಗಿದೆ. ಆಗ ಮಾತ್ರ ನಮ್ಮ ಜನನಾಯಕ ಜಯ ಸಿ. ಸುವರ್ಣ ಅವರ ಕನಸನ್ನು ನನಸು ಮಾಡಲು ಸಾಧ್ಯ. ನಾವೆಲ್ಲರೂ ಒಂದೇ ತಾಯಿಯ ಮಕ್ಕಳಂತೆ ಸೇರಿ ಸಮಾಜದ ಅಭಿವೃದ್ಧಿಗಾಗಿ ನಿರಂತರ ಕೆಲಸ ಮಾಡಬೇಕು. ನಮಗೆ ಸಮಾಜ ಸೇವೆ ಮಾಡಲು ಸಿಕ್ಕಿದ ಅವಕಾಶ ಗುರುದೇವರ ಆಶೀರ್ವಾದದಿಂದಾಗಿದೆ. ಸಮಾಜವನ್ನು ಎಲ್ಲ ಕ್ಷೇತ್ರಗಳಲ್ಲಿ ಮುಂಚೂಣಿಗೆ ತರುವಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು.
-ಡಾ| ರಾಜ್‌ಶೇಖರ್‌ ಕೋಟ್ಯಾನ್‌ ಅಧ್ಯಕ್ಷರು, ರಾಷ್ಟ್ರೀಯ ಬಿಲ್ಲವರ ಮಹಾಮಂಡಲ

ಸಮಾಜಕ್ಕೆ ಒಳಿತಾಗಲಿ
ಕಳೆದ ಮೂವತ್ತು ವರ್ಷಗಳಿಂದ ದಿ| ಜಯ ಸಿ. ಸುವರ್ಣ ಅವರ ಮಾರ್ಗದರ್ಶನದಂತೆ ಬಿಲ್ಲವರ ಅಸೋಸಿಯೇಶನ್‌ನಲ್ಲಿ ಸಮಾಜಪರ ಕೆಲಸದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದೇನೆ. ಜಯ ಸಿ. ಸುವರ್ಣರ ಆಸೆಯಂತೆ ಸಮಾಜದ ಉದ್ಧಾರವಾಗಬೇಕು. ಸಮಾಜಕ್ಕೆ ಎಲ್ಲ ರೀತಿಯಿಂದಲೂ ಒಳಿತಾಗಲಿ ಎಂಬುವುದೇ ನನ್ನ ಆಶಯ.
-ಚಂದ್ರಶೇಖರ್‌ ಎಸ್‌. ಪೂಜಾರಿ
ನಿಕಟಪೂರ್ವ ಅಧ್ಯಕ್ಷರು, ಬಿಲ್ಲವರ ಅಸೋಸಿಯೇಶನ್‌ ಮುಂಬಯಿ

ಚಿತ್ರ -ವರದಿ: ಸುಭಾಷ್‌ ಶಿರಿಯ

ಟಾಪ್ ನ್ಯೂಸ್

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.