ಡ್ರಗ್ ಮಾರಾಟ: ಆರು ಮಂದಿ ಬಂಧನ
32 ಲಕ್ಷ ರೂ. ಮೌಲ್ಯದ ಮಾದಕ ವಸ್ತು ಮಾತ್ರೆಗಳ ವಶ ಕೃತ್ಯದಲ್ಲಿ ನೈಜೀರಿಯಾ ಪ್ರಜೆಗಳೇ ಹೆಚ್ಚು
Team Udayavani, Sep 15, 2021, 3:02 PM IST
ಬೆಂಗಳೂರು: ಪ್ರತ್ಯೇಕ ಪ್ರಕರಣಗಳಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆಗಳು ಸೇರಿ ಆರು ಮಂದಿಯನ್ನು ಬಂಧಿಸಲಾಗಿದೆ.
ಕಾಲೇಜು ವಿದ್ಯಾರ್ಥಿಗಳು, ಟೆಕ್ಕಿಗಳು, ಉದ್ಯಮಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ನೈಜೀರಿಯಾ ಪ್ರಜೆಗಳು ಮತ್ತು
ಕೇರಳ ಮೂಲದ ವ್ಯಕ್ತಿಯನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಸುಮಾರು 30
ಲಕ್ಷ ರೂ. ಮೌಲ್ಯದ 500 ಎಂಡಿಎಂಎ, ಮಾತ್ರೆಗಳು, 30 ಮೊಬೈಲ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರು ವಶಪಡಿಸಿಕೊಳ್ಳಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.
ಆರೋಪಿಗಳು ನಗರದ ಕೊಡಿಗೇಹಳ್ಳಿಯಲ್ಲಿ ಎಂಡಿಎಂಎ ಮಾತ್ರೆಗಳನ್ನು ಐಟಿ-ಬಿಟಿ ಕಂಪನಿ ಉದ್ಯೋಗಿಗಳಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದರು. ಈ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಲಾಗಿದೆ. ಆರೋಪಿಗಳು ಬೇರೆ ಬೇರೆ ರಾಜ್ಯಗಳು ಹಾಗೂ ವಿದೇಶಗ ಳಿಂದ ಮಾದಕ ವಸ್ತು ತರಿಸಿಕೊಂಡು ಮಾರಾಟ ಮಾಡುತ್ತಿದ್ದರು. ಹೀಗಾಗಿ, ಆರೋಪಿಗಳು ಮಾದಕ ವಸ್ತು ಸಾ ಗಣೆ ಹಾಗೂ ಮಾರಾಟ ಮಾಡುತ್ತಿರುವುದು ವಿಚಾರಣೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದರು. ಕೊಡಿಗೇಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖ ಲಾಗಿದೆ.
ಇದನ್ನೂ ಓದಿ:ಫ್ಯಾಶನ್ ಶೋ ‘ಮೆಟ್ ಗಾಲಾ’ದಲ್ಲಿ ಗಣೇಶ ಮೂರ್ತಿ ಜೊತೆ ಕಾಣಿಸಿಕೊಂಡ ಸುಧಾ ರೆಡ್ಡಿ
ಕಾಡುಗೊಂಡನಹಳ್ಳಿಯಲ್ಲಿ ಮೂವರ ಸೆರೆ:
ಮತ್ತೊಂದು ಪ್ರಕರಣದಲ್ಲಿ ಬಟ್ಟೆ ವ್ಯಾಪಾರದ ಜತೆಗೆ ಮಾದಕ ವಸ್ತು ದಂಧೆಯಲ್ಲಿ ತೊಡ ಗಿದ್ದ ನೈಜಿರಿಯಾ ಪ್ರಜೆ ಸೇರಿ ಮೂವರನ್ನು ಕಾಡು ಗೊಂಡನ ಹಳ್ಳಿ ಬಂಧಿಸಿದ್ದಾರೆ. ನೈಜಿರಿಯಾ ಮೂಲದ ನಡುಬಾ (30), ಶಿವಾಜಿನಗರದ ಶಕೀರ್ (30) ಮತ್ತು ಹೆಣ್ಣೂರಿನ ರವಿಕುಮಾರ್
(29) ಬಂಧಿ ತರು. ಆರೋಪಿಗಳಿಂದ 2.5 ಲಕ್ಷ ರೂ. ಮೌಲ್ಯದ ಐದು ಗ್ರಾಂ ಎಂಡಿ ಎಂಎ, 150 ಮಾತ್ರೆ ಗಳು, ಒಂದು ಮೊಬೈಲ್, 2 ಸಾವಿರ ರೂ. ನಗದು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.
ಆರೋಪಿಗಳ ಪೈಕಿ ನೈಜಿರಿಯಾ ಪ್ರಜೆ ನಡುಬಾ, ವ್ಯವಹಾರಿಕ ವೀಸಾ ಪಡೆದು ಬೆಂಗಳೂರಿಗೆ ಬಂದಿದ್ದು, ಬಟ್ಟೆ ವ್ಯಾಪಾರ ಮಾಡಿಕೊಂಡಿದ್ದ. ಇತರೆ ಇಬ್ಬರು ಆರೋಪಿಗಳು ಟೀ ಅಂಗಡಿಗಳಲ್ಲಿ ಕೆಲಸ ಮಾಡಿ ಕೊಂಡಿದ್ದರು. ಈ ಮಧ್ಯೆ ನಡುಬಾ, ವಿದೇಶದಿಂದ ಮಾದಕ ವಸ್ತು ತರಿಸಿ
ಅವುಗಳನ್ನು ಶಕೀರ್ ಮತ್ತು ರವಿ ಕುಮಾರ್ ಮೂಲಕ ಮಾರಾಟ ಮಾಡಿಸುತ್ತಿದ್ದ. ಇತ್ತೀಚೆಗೆ ನಡುಬಾ, ಎಚ್‌ಬಿಆರ್ ಲೇಔಟ್‌ನ ರಸ್ತೆಯಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಸಿಕ್ಕಿ ಬಿದ್ದಿದ್ದಾನೆ. ಈತನ ವಿಚಾರಣೆಯಲ್ಲಿ ಇತರೆ ಇಬ್ಬರು ಆರೋಪಿಗಳ ಹೆಸರು ಬಾಯಿಬಿಟ್ಟಿದ್ದ. ಈ
ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.