ರಾಷ್ಟ್ರೀಯ ಶಿಕ್ಷಣ ನೀತಿಯ ಮುಕ್ತ ಚರ್ಚೆಗೆ ಸಿದ್ಧ: ಸಿಎಂ ಬೊಮ್ಮಾಯಿ
Team Udayavani, Sep 16, 2021, 8:00 AM IST
ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಮುಕ್ತವಾಗಿ ಚರ್ಚಿಸಲು ಸರಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬುಧವಾರ ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರ 161ನೇ ಜಯಂತಿ ಅಂಗವಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದ ಅನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದರು.
ಇಂದಿನ ಕಾಲಕ್ಕೆ ತಕ್ಕ ಹಾಗೆ ಪ್ರಸ್ತುತ ವಾಗುವಂತೆ, ಯುವಕರಿಗೆ ಉತ್ತಮ ಭವಿಷ್ಯ ನೀಡುವಂತೆ ಶಿಕ್ಷಣ ನೀತಿಯನ್ನು ಜಾರಿಗೆ ತರುವ ಸದುದ್ದೇಶವಿದೆ. ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತರಲಾಗುವುದು ಎಂದು ತಿಳಿಸಿದರು.
ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣದ ಬಗ್ಗೆಯೂ ಸಮಿತಿ ರಚಿಸಿ ಅನುಷ್ಠಾನದ ಬಗ್ಗೆ ತೀರ್ಮಾನಿಸಲಾಗುವುದು. ಸರಕಾರ ಎಲ್ಲ ವಿಚಾರದಲ್ಲೂ ಮುಕ್ತವಾಗಿರಲಿದೆ ಎಂದೂ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.