ನೀಲಿ ಸಿನಿಮಾ ನಿರ್ಮಾಣ ಪ್ರಕರಣ : ರಾಜ್ ಕುಂದ್ರಾ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಕೆ
Team Udayavani, Sep 16, 2021, 2:15 PM IST
ಮುಂಬೈ : ನೀಲಿ ಸಿನಿಮಾ ನಿರ್ಮಾಣ ಪ್ರಕರಣದಡಿ ಬಂಧಿತರಾಗಿರುವ ಬಾಲಿವುಡ್ ನಟಿ ಶಿಲ್ಫಾ ಶೆಟ್ಟಿ ಪತಿ ಹಾಗೂ ಉದ್ಯಮಿ ರಾಜ್ ಕುಂದ್ರಾ ವಿರುದ್ಧ 1500 ಪುಟಗಳ ಚಾರ್ಜ್‍ಶೀಟ್‍ನ್ನು ಮುಂಬೈ ಪೊಲೀಸರು ಇಂದು (ಸೆ.16) ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ರಾಷ್ಟ್ರೀಯ ಸುದ್ದಿ ಸಂಸ್ಥೆ ಎಎನ್‍ಐ ವರದಿಗಳ ಪ್ರಕಾರ ನ್ಯಾಯಾಲಯಕ್ಕೆ ಇಂದು ಸಲ್ಲಿಸಲಾಗಿರುವ ಸುಮಾರು 1500 ಪುಟಗಳ ದೋಷಾರೋಪ ಪಟ್ಟಿಯಲ್ಲಿ ಕುಂದ್ರಾ ಪತ್ನಿ ಶಿಲ್ಪಾ ಶೆಟ್ಟಿ ಸೇರಿದಂತೆ 43 ಸಾಕ್ಷಿಗಳ ಹೇಳಿಕೆ ದಾಖಲಾಗಿದೆ. ನಟಿ ಶರ್ಲಿನ್ ಚೋಪ್ರಾ, ಸೆಜಲ್ ಶಾ ಹಾಗೂ ಸಾಕಷ್ಟು ಮಾಡೆಲ್ ಗಳು ಮತ್ತು ಕುಂದ್ರಾ ಕಂಪನಿಯ ಉದ್ಯೋಗಿಗಳ ಹೇಳಿಕೆಗಳು ಚಾರ್ಜ್ ಶೀಟ್‍ನಲ್ಲಿ ದಾಖಲಾಗಿವೆ. ಅದರ ಜೊತೆ ಮತ್ತಿಬ್ಬರ ಆರೋಪಿಗಳ ಹೆಸರುಗಳು ಕೂಡ ಚಾರ್ಜ್ ಶೀಟ್‍ನಲ್ಲಿ ಉಲ್ಲೇಖಗೊಂಡಿವೆ ಎಂದು ವರದಿಗಳು ತಿಳಿಸಿವೆ.
ನೀಲಿ ಸಿನಿಮಾ ನಿರ್ಮಾಣ ಹಾಗೂ ಆ್ಯಪ್ ಗಳ ಮೂಲಕ ಅವುಗಳ ಬಿಡುಗಡೆ ಆರೋಪದಲ್ಲಿ ರಾಜ್ ಕುಂದ್ರಾ ಅವರನ್ನು ಮುಂಬೈನ ಕ್ರೈಂ ಬ್ರ್ಯಾಂಚ್‍ನ ಪೊಲೀಸರು ಜುಲೈ 19 ರಂದು ಬಂಧಿಸಿದ್ದಾರೆ. ಸದ್ಯಕ್ಕೆ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.
ರಾಜ್ ಕುಂದ್ರಾ ಬಂಧನದ ಬಳಿಕ ಅವರ ಪತ್ನಿ ಶಿಲ್ಪಾ ಶೆಟ್ಟಿಯವರನ್ನೂ ಪೊಲೀಸರು ವಿಚಾರಣೆಗೆ ಒಳಪಡಿಸಿದರು. ಕುಂದ್ರಾ ವಿರುದ್ಧ ನಟಿ ಶರ್ಲಿನ್ ಚೋಪ್ರಾ ಅವರು ಬಹಿರಂಗ ಅರೋಪ ಮಾಡಿದರು. ಇದರ ಜೊತೆಗೆ ಹಲವು ಮಾಡೆಲ್‍ಗಳು ಕೂಡ ಈತನ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.