ಮಹಿಳೆಯರ ಸುರಕ್ಷತೆಗೆ ಸರಕಾರ ಕಠಿಣ ಕ್ರಮ
ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆ ಹಲವು ಕಠಿಣ ಕ್ರಮ ಕೈಗೊಂಡಿದ್ದಾರೆ.
Team Udayavani, Sep 16, 2021, 6:24 PM IST
ಯಾದಗಿರಿ: ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ಪ್ರಕರಣಗಳು ರಾಜ್ಯದಲ್ಲಿಯೇ ಬೆಂಗಳೂರು ಮೊದಲ ಸ್ಥಾನದಲ್ಲಿದ್ದು, ಕೌಟುಂಬಿಕ ಹಿಂಸೆ ಪ್ರಕರಣಗಳು ಮೈಸೂರು ಜಿಲ್ಲೆಯಲ್ಲಿ ಹೆಚ್ಚಾಗಿ ದಾಖಲಾಗಿವೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಆರ್. ಪ್ರಮೀಳಾ ನಾಯ್ಡು ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗ ಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಅವರು, ಬೆಂಗಳೂರಿನಲ್ಲಿ ಆದ ಕಹಿ ಘಟನೆಗಳಿಗೆ ತಿಲಾಂಜಲಿ ಇಡಲು ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆ ಹಲವು ಕಠಿಣ ಕ್ರಮ ಕೈಗೊಂಡಿದ್ದಾರೆ. ರಾಜ್ಯ ಮಹಿಳಾ ಆಯೋಗ ಸದಾ ಕ ಣ್ಗಾವಲಿಟ್ಟಿದೆ ಎಂದು ತಿಳಿಸಿದ್ದರು.
ರಾಜ್ಯದಲ್ಲಿ ಇಲ್ಲಿಯವರೆಗಿನ 2,200 ಪ್ರಕರಣಗಳಲ್ಲಿ ಇಲ್ಲಿಯವರೆಗೆ 1,600 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ ಎಂದು ತಿಳಿಸಿದರು. ಮಾರ್ಚ್ 2020ರಿಂದ 416 ಮಹಿಳಾ ದೌರ್ಜನ್ಯ ಪ್ರಕರಣಗಳು ಜರುಗಿದ್ದು, ಅವುಗಳಲ್ಲಿ ನಾವೇ ಸ್ವತಃ ಸೋಮುಟೋ ಪ್ರಕರಣಗಳನ್ನು ದಾಖಲಿಸಿದ್ದೇವೆ.
ಹೆಚ್ಚಾಗಿ ಮಹಿಳೆಯರು ಭಯದಿಂದ ಪ್ರಕರಣ ದಾಖಲಿಸುವಲ್ಲಿ ಹಿಂದೆ ಸರಿಯುತ್ತಿರುವುದರಿಂದ ಹಲವು ಪ್ರಕರಣಗಳ ದಾಖಲಾಗುತ್ತಿಲ್ಲ. ಆದ್ದರಿಂದ ನಮ್ಮ ಆಯೋಗದ ಗಮನಕ್ಕೆ ಬಂದ ನಂತರ ನಾವೇ ಪ್ರಕರಣ ದಾಖಲಿಸಿಕೊಂಡು ಪೊಲೀಸ್‌ಇಲಾಖೆಯ ಸಹಾಯದೊಂದಿಗೆ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ತಿಳಿಸಿದರು. ಯಾದಗಿರಿ ಮಹಿಳೆಯ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ಥ ಮಹಿಳೆಯನ್ನು ಭೇಟಿ ಮಾಡಿ ಅವರಿಗೆ ಧೈರ್ಯ ತುಂಬಿದ್ದೇನೆ.
ಯಾದಗಿರಿ ಜಿಲ್ಲಾಡಳಿತದಿಂದ ಅವರಿಗೆ ಸಹಾಯಧನ ಕೂಡ ನೀಡಲಾಗಿದೆ. ಇನ್ನೂ ಆರೋಪಿಗಳನ್ನು ಬಂಧಿಸಿದ್ದು, ಅವರಿಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಇನ್ನೂ ಸಂತ್ರಸ್ಥೆ ಮಾನಸಿಕವಾಗಿ ಸದೃಢವಾಗಿ ಬದುಕಲು ಅವರಿಗೆ ಜೀವನ ನಿರ್ವಹಣೆ ಕೈಗೊಳ್ಳು ಸಣ್ಣ ಉದ್ಯಮ ಅಥವಾ ವ್ಯಾಪಾರ ಸ್ಥಾಪಿಸಲು ಸರ್ಕಾರದೊಂದಿಗೆ ಚರ್ಚಿಸಿ ಸಹಾಯಧನ ಕೊಡಿಸಲು ಕ್ರಮ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.