ವಿಶ್ವಕ್ಕೆ ಭಾರತೀಯ ಸಂಸ್ಕೃತಿ ಪ್ರತಿಬಿಂಬಿಸಿದ್ದೇ ಸ್ವಾಮಿ ವಿವೇಕಾನಂದ
ಭಾರತೀಯರಾದ ನಮಗೆಲ್ಲ ಸ್ವಾಮಿ ವಿವೇಕಾನಂದರ ಬದುಕು ಆದರ್ಶಮಯ
Team Udayavani, Sep 16, 2021, 6:36 PM IST
ವಿಜಯಪುರ: ಸ್ವಾಮಿ ವಿವೇಕಾನಂದರು ಚಿಕಾಗೋ ಉಪನ್ಯಾಸದಿಂದ ಭಾರತದ ದೃಷ್ಠಿಕೋನವನ್ನು ವಿಶ್ವದ ಮುಂದೆ ವಿಶಿಷ್ಟ ರೀತಿಯಲ್ಲಿ ಪ್ರದರ್ಶಿಸಿದ್ದು, ನಮ್ಮ ದೇಶದ ಸಂಸ್ಕೃತಿ ಅನಾವರಣಗೊಳಿಸಿದ ಹಿರಿಮೆಯ ಭಾಷಣವಾಗಿತ್ತು ಎಂದು ಭಾರತೀಯ ಶಿಕ್ಷಣ ಮಂಡಳಿ ಕರ್ನಾಟಕ ಉತ್ತರ ಪ್ರಾಂತದ ರಾಜ್ಯಾಧ್ಯಕ್ಷ ಡಾ| ಸತೀಶ ಜಿಗಜಿನ್ನಿ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕನ್ನಡ ಸಭಾ ಭವನದಲ್ಲಿ ಸ್ವಾಮಿ ವಿವೇಕಾನಂದರ ಚಿಕಾಗೋ ಭಾಷಣದಿಂದಾದ ಭಾರತದ ಮರು ನಿರ್ಮಾಣದ ಕುರಿತು ಹಮ್ಮಿಕೊಂಡಿದ್ದ ಭಾರತ ದಿಗ್ವಿಜಯ ದಿನಾಚರಣೆಗೆ ಚಾಲನೆ ನೀಡಿ ಮಾನಾಡಿದ ಅವರು, ವಿವೇಕಾನಂದರ ಭಾಷಣದಿಂದಲೇ ಭಾರತೀಯರ ಕುರಿತು ವಿಶ್ವಕ್ಕೆ ಮಾದರಿಯಾದ ಧರ್ಮ, ಸಂಸ್ಕೃತಿ ಸಮಾಜ ನೀಡಿರುವ ದೇಶ ಎಂಬುದನ್ನು ಸಾರಿತು ಎಂದು ಬಣ್ಣಿಸಿದರು.
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಭಾರತ ಶಿಕ್ಷಣ ಮಂಡಲದ ಅಖೀಲ ಭಾರತ ಸಹ ಕಾರ್ಯದರ್ಶಿ ಪ್ರೊ| ಮೀನಾ ಚಂದಾವರಕರ್ ಮಾತನಾಡಿ, ವಿವೇಕಾನಂದರ ಚಿಕಾಗೋ ಭಾಷಣದಲ್ಲಿ ಭಾರತದ ಮಹಿಳಾ ಶಕ್ತಿ, ಮಾತೃ ಶಕ್ತಿ, ಗುರು ಶಕ್ತಿ ಸಾರಿದೆ. ಭಾರತೀಯರಲ್ಲಿರುವ ವಸುದೈವ ಕುಟುಂಬಕಂ, ಜಗತ್ತು ಒಂದು ಕುಟುಂಬ ಎಂಬ ಸತ್ಯ ಜಗತ್ತಿಗೆ ಮನವರಿಕೆ ಮಾಡಿಕೊಡುವ ಐತಿಹಾಸಿಕ ದಿನವಾಗಿತ್ತು
ಎಂದು ವಿಶ್ಲೇಷಿಸಿದರು.
ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ| ಕೆ. ರಮೇಶ ಮಾತನಾಡಿ, ವಿಶ್ವ ಮಟ್ಟದಲ್ಲಿ ಭಾರತ ಹಾಗೂ ಭಾರತೀಯರ ಬಗ್ಗೆ ವಿಶಿಷ್ಟ ಗೌರವ ಮೂಡಿಸುವ ಕೆಲಸ ಸ್ವಾಮಿ ವಿವೇಕಾನಂದರಿಂದ ಆಗಿದೆ. ಇದು ಭಾರತೀಯರಾದ ನಮಗೆಲ್ಲ ಹೆಮ್ಮೆ ಹಾಗೂ ಗೌರವ ತರುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಹೀಗಾಗಿ ಭಾರತೀಯರಾದ ನಮಗೆಲ್ಲ ಸ್ವಾಮಿ ವಿವೇಕಾನಂದರ ಬದುಕು ಆದರ್ಶಮಯವಾಗಿದ್ದು, ನಿತ್ಯ ಅವರನ್ನು ಸ್ಮರಿಸುವುದು ನಮ್ಮ ಕರ್ತವ್ಯವೂ ಹೌದು ಎಂದರು.
ಕುಲಪತಿ ಪ್ರೊ| ಬಿ.ಕೆ. ತುಳಿಸಿಮಾಲಾ ಅಧ್ಯಕ್ಷತೆ ವಹಿಸಿ ಮಾತನಾಡಿ, ಭಾರತ ವಿಶ್ವಗುರು ಆಗುವ ನಿಟ್ಟಿನಲ್ಲಿ ಸಾಗುತ್ತಿದೆ. ಇದಕ್ಕೆ ಭದ್ರ ಬುನಾದಿ ಹಾಕಿದ್ದೇ ಸ್ವಾಮಿ ವಿವೇಕಾನಂದರ ಚಿಕ್ಯಾಗೋ ಭಾಷಣ. ಪ್ರಸ್ತುತ ಭಾರತವು ಅಭಿವೃದ್ಧಿಯತ್ತ ಹೆಚ್ಚಿನ ಗಮನ ನೀಡಿ ಆರ್ಥಿಕ ಸಬಲೀಕರಣ ಹೊಂದುತ್ತಿದೆ. ಹೀಗಾಗಿ ಇಂದಿನ ಪೀಳಿಗೆ ಅದರಲ್ಲೂ ವಿದ್ಯಾರ್ಥಿಗಳು ಅನೇಕ ಸಂದೇಶ ಅರಿಯುವ ಹಾಗೂ ಆಚರಿಸುವ ಕೆಲಸ ಮಾಡಬೇಕು ಎಂದು ಹೇಳಿದರು. ದೈಹಿಕ ಶಿಕ್ಷಣ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ| ರಾಜಕುಮಾರ ಮಾಲಿಪಾಟೀಲ ಪ್ರಾಸ್ತಾವಿಕ ಮಾತನಾಡಿದರು. ಕಾರ್ಯಕ್ರಮ ಸಂಯೋಜಕ ಡಾ| ದೀಪಕ ಶಿಂಧೆ ಪರಿಚಯಿಸಿದರು. ದೈಹಿಕ ಶಿಕ್ಷಣ ವಿಭಾಗ ಸಹಾಯಕ ಪ್ರಾಧ್ಯಾಪಕ ಡಾ| ಹನುಮಂತಯ್ಯ ಪೂಜಾರಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.