ಸ್ವಯಂ ನಿವೃತ್ತಿ ಕೋರಿ ಸರ್ಕಾರಕ್ಕೆ ಮನವಿ ಮಾಡಿದ ಎಡಿಜಿಪಿ ಭಾಸ್ಕರ್ ರಾವ್
Team Udayavani, Sep 16, 2021, 9:45 PM IST
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಹಿರಿಯ ಪೊಲೀಸ್ ಅಧಿಕಾರಿ, ರೈಲ್ವೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಭಾಸ್ಕರ್ ರಾವ್ ತಮ್ಮ ಹುದ್ದೆಗೆ ರಾಜೀನಾಮೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಮೂರು ದಶಕಗಳ ಕಾಲ ರಾಜ್ಯ ಪೊಲೀಸ್ ಇಲಾಖೆಯ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿರುವ ಅವರು ನಿವೃತ್ತಿಗೆ ಮೂರು ವರ್ಷ ಬಾಕಿ ಇರುವಂತೆಯೇ ವೈಯಕ್ತಿಕ ಕಾರಣಕ್ಕೆ ರಾಜೀನಾಮೆ (ಸ್ವಯಂ ನಿವೃತ್ತಿ) ನೀಡುತ್ತಿರುವುದಾಗಿ ಪತ್ರವನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಮತ್ತು ರಾಜ್ಯ ಮುಖ್ಯ ಕಾರ್ಯದರ್ಶಿ ಬಿ.ರವಿಕುಮಾರ್ ಅವರಿಗೆ ಸಲ್ಲಿಸಿದ್ದಾರೆ. ಆದರೆ ರಾಜೀನಾಮೆ ಇನ್ನೂ ಅಂಗೀಕಾ ರವಾಗಿಲ್ಲ.
ಬೆಂಗಳೂರು ಮೂಲದ ಭಾಸ್ಕರ್ ರಾವ್ 1990ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದು, ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಜಿಲ್ಲಾವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಬೆಂಗಳೂರು ದಕ್ಷಿಣ, ಉತ್ತರ ವಿಭಾಗ ಡಿಸಿಪಿಯಾಗಿದ್ದರು. ಬಳಿಕ ಸಾರಿಗೆ ಇಲಾಖೆ ಆಯುಕ್ತ, ಕೆಎಸ್‌ಆರ್‌ಟಿಸಿಯ ಭದ್ರತಾ ವಿಭಾಗ ನಿರ್ದೇಶಕ, ಬೆಳಗಾವಿ, ಮೈಸೂರು ಪೊಲೀಸ್ ಆಯುಕ್ತರಾಗಿಯೂ ಸೇವೆ ಸಲ್ಲಿಸಿದ್ದಾರೆ. 2019ರ ಆಗಸ್ಟ್‌ನಲ್ಲಿ ಬೆಂಗಳೂರು ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿದ್ದರು.
ಇದನ್ನೂ ಓದಿ:ಚಾರ್ಮಾಡಿ ಘಾಟ್ ಕಂದಕಕ್ಕೆ ಉರುಳಿದ ಕಾರು
ರಾಜಕೀಯ ಸೇರ್ಪಡೆ?
ಭಾಸ್ಕರ್ ರಾವ್ ರಾಜಕೀಯ ಪ್ರವೇಶಿಸಲಿದ್ದಾರೆ ಎಂದು ಹೇಳಲಾಗಿದೆ. ಅವರು ಆಮ್ ಆದ್ಮಿ ಪಾರ್ಟಿ (ಆಪ್) ಅಥವಾ ಕಾಂಗ್ರೆಸ್ ಸೇರಿ ಬಸ ವನಗುಡಿ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಸರಕಾರದಿಂದ ಅವಗಣನೆ?
ಈ ನಡುವೆ ಕನ್ನಡಿಗ ಐಪಿಎಸ್ ಅಧಿಕಾರಿಗಳನ್ನು ಸರಕಾರ ಅವಗಣಿಸುತ್ತಿದೆ ಹಾಗೂ ಅವರಿಗೆ ಸೂಕ್ತ ಉನ್ನತ ಹುದ್ದೆ ನೀಡುತ್ತಿಲ್ಲ ಎಂಬ ಆರೋಪವೂ ಕೇಳಿ ಬರುತ್ತಿದೆ. ಮೂರು ದಶಕಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಭಾಸ್ಕರ್‌ರಾವ್ ಅವರು ಎಕ್ಸಿಕ್ಯೂಟಿವ್ ಸೇವೆಗಿಂತ ನಾನ್ ಎಕ್ಸಿಕ್ಯೂಟಿವ್ ವಿಭಾಗದಲ್ಲಿಯೇ ಹೆಚ್ಚು ಸೇವೆ ಸಲ್ಲಿಸಿದ್ದರು. ಒಂದೂವರೆ ವರ್ಷದಿಂದ ಅವರನ್ನು ಸರಕಾರ ಅವಗಣಿಸುತ್ತಿದ್ದು, ಅದೇ ಕಾರಣದಿಂದ ರಾಜೀನಾಮೆ ನೀಡಿದ್ದಾರೆ ಎಂಬ ಮಾತೂ ಕೇಳಿ ಬರುತ್ತಿದೆ.
ವೈಯಕ್ತಿಕ ಕಾರಣಕ್ಕೆ ರಾಜೀನಾಮೆ ನೀಡಿದ್ದೇನೆ. ರಾಜಕೀಯ ಸೇರುವ ಬಗ್ಗೆ ಸದ್ಯಕ್ಕೆ ಯೋಚನೆ ಇಲ್ಲ. ಯಾವುದೇ ಪಕ್ಷದ ಜತೆಯೂ ಚರ್ಚಿಸಿಲ್ಲ. ಮುಂದಿನ ನಿರ್ಧಾರ ಏನು ಎಂಬುದು ನಿರ್ಧರಿಸಿಲ್ಲ.
-ಭಾಸ್ಕರ್ ರಾವ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.