ಸ್ಥಳೀಯ ಸಂಸ್ಥೆ ಚಾಲಕ-ಕಾರ್ಮಿಕರ ಸೇವೆ ಕಾಯಂಗೆ ಆಗ್ರಹ

ಮಕ್ಕಳ ಶಿಕ್ಷಣ, ಆರೋಗ್ಯ ಚಿಕಿತ್ಸೆ ಪಡೆಯುವುದು ದುಸ್ತರವಾಗುತ್ತಿದೆ.

Team Udayavani, Sep 17, 2021, 6:40 PM IST

ಸ್ಥಳೀಯ ಸಂಸ್ಥೆ ಚಾಲಕ-ಕಾರ್ಮಿಕರ ಸೇವೆ ಕಾಯಂಗೆ ಆಗ್ರಹ

ವಿಜಯಪುರ: ನಗರ ಸ್ಥಳೀಯ ಸಂಸ್ಥೆಗಳ ಹೊರ ಗುತ್ತಿಗೆಯಲ್ಲಿ ಸೇವೆ ಸಲ್ಲಿಸುವ ಚಾಲಕ-ಕಾರ್ಮಿಕರ ಸೇವೆ ಕಾಯಂಗೆ ಆಗ್ರಹಿಸಿ ವಿಜಯಪುರ ಮಹಾನಗರ ಪಾಲಿಕೆ, ವಾಹನ ಚಾಲಕರ ಮತ್ತು ನಿರ್ವಾಹಕರ ಕ್ಷೇಮಾಭಿವೃದ್ಧಿ ಸಂಘದಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಸಂಘದ ಅಧ್ಯಕ್ಷ ಶಂಕರ ಚಲವಾದಿ ಮಾತನಾಡಿ, ರಾಜ್ಯದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಪಂನಲ್ಲಿ ಕಳೆದ ಹಲವು ವರ್ಷಗಳಿಂದ ರಾಜ್ಯಾದ್ಯಂತ 8000 ತ್ಯಾಜ್ಯ ಸಾಗಿಸುವ ವಾಹನ ಚಾಲಕರು ಸೇವೆಯಲ್ಲಿ ತೊಡಗಿದ್ದಾರೆ. ಆ ಮೂಲಕ ನಗರ ಪಟ್ಟಣಗಳ ಸ್ವತ್ಛತೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಆದರೆ ಸೇವಾನಿರತ ಸಾವಿರಾರು ವಾಹನ ಚಾಲಕರಿಗೆ ಕನಿಷ್ಟ ಕೂಲಿಯಾಗಲಿ, ನ್ಯಾಯೋಜಿತ ಸಂವಿಧಾನ ಬದ್ಧ ಕನಿಷ್ಟ ಸೌಕರ್ಯಗಳಾಗಲಿ ಇದುವರೆಗೂ ದೊರೆಯುತ್ತಿಲ್ಲ. ಇದರಿಂದ ಅವರ ಜೀವನ ನಿರ್ವಹಣೆ ಕಷ್ಟವಾಗುತ್ತಿದೆ ಎಂದು ದೂರಿದರು.

ರಾಜ್ಯಾದ್ಯಂತ ತ್ಯಾಜ್ಯ ಸಾಗಿಸುವ ವಾಹನ ಚಾಲಕರ ಸಮಸ್ಯೆ, ಸಂಕಷ್ಟ, ವೇತನ ಗುತ್ತಿಗೆ ಪದ್ಧತಿಯಿಂದ ಆಗುತ್ತಿರುವ ಅನ್ಯಾಯ ಆಹಾರ, ವಸತಿ ಹಾಗೂ ಆರೋಗ್ಯ ಸೌಕರ್ಯ ಪಡೆಯಲು ಹಾಗೂ ಜೀವನ ನಿರ್ವಹಣೆ ಮಾಡುತ್ತಿದ್ದಾರೆ. ಇಷ್ಟೆಲ್ಲ ಕಷ್ಟ ಸಹಿಸಿಕೊಂಡು ನಿತ್ಯ ತ್ಯಾಜ್ಯ ವಿಲೇವಾರಿ ಮಾಡುವ ಮೂಲಕ ನಗರ ಪಟ್ಟಣಗಳ ಸ್ವತ್ಛತೆಗೆ ಕಾರ್ಯ ನಿರ್ವಹಿಸುತ್ತಿದ್ದಾರೆ.

ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕಾದ ಸರ್ಕಾರ ಅನ್ಯಾಯ ಮಾಡುತ್ತಿದೆ. ಇದರಿಂದ ಶ್ರಮಕ್ಕೆ ಸರಿಯಾದ ವೇತನ ದೊರೆಯದೇ ಇರುವುದರಿಂದ ವಾಹನ ಚಾಲಕರ ಜೀವನ ನಿರ್ವಹಣೆ ಕಷ್ಟವಾಗುತ್ತಿದೆ ಎಂದರು. ಸದ್ಯ ಅಗತ್ಯ ವಸ್ತುಗಳ ಬೆಲೆಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಕುಟುಂಬ ನಿರ್ವಹಣೆ, ಮಕ್ಕಳ ಶಿಕ್ಷಣ, ಆರೋಗ್ಯ ಚಿಕಿತ್ಸೆ ಪಡೆಯುವುದು ದುಸ್ತರವಾಗುತ್ತಿದೆ. ಕೋವಿಡ್‌ ಸಂದರ್ಭದಲ್ಲಿ ಜೀವ ಪಣಕ್ಕಿಟ್ಟು ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಯಾವುದೇ ಸೌಲಭ್ಯ ದೊರೆಯದಿರುವುದು ದುರ್ದೈವ ಎಂದರು.

ಮಹಾನಗರ ಪಾಲಿಕೆ ಚಾಲಕರಾದ ಸತೀಶ ಚಲವಾದಿ ಮಾತನಾಡಿ, ಸರ್ಕಾರ ಕಡಿಮೆ ವೇತನಕ್ಕೆ ದುಡಿಸಿಕೊಳ್ಳುವ ಮೂಲಕ ಚಾಲಕರಿಗೆ ನ್ಯಾಯಯುವಾಗಿ ದೊರೆಯಬೇಕಾದ ಹಕ್ಕು ಹಾಗೂ ಸೌಕರ್ಯ ನೀಡದೇ ಸರ್ಕಾರ ವಂಚಿಸುತ್ತಿದೆ. ನೌಕರರಿಗೆ ಸರ್ಕಾರ ನ್ಯಾಯಸಮ್ಮತ ಸೌಲಭ್ಯ ಒದಗಿಸಿಕೊಡಬೇಕು ಎಂದರು. ಪ್ರತಿಯೊಬ್ಬ ಚಾಲಕರು, ಕಾರ್ಮಿಕರು ಮನೆ-ಮನೆಯಿಂದ ತ್ಯಾಜ್ಯ ಸಾಗಾಣಿಕೆ ಮಾಡಿ ಜನರ ಆರೋಗ್ಯ ಕಾಪಾಡುವಲ್ಲಿ ಶ್ರಮಿಸಿದ ಶ್ರಮ ಸರ್ಕಾರ ಮರೆಯಬಾರದು. ಆದ್ದರಿಂದ ಸರ್ಕಾರ ಪ್ರತಿಯೊಬ್ಬ ನೌಕರರಿಗೆ 8 ಗಂಟೆಗಳ ಕಾಲ ಕಾಲಮಿತಿ ಸೀಮಿತಗೊಳಿಸಬೇಕು.

18ರಿಂದ 20 ಸಾವಿರವರೆಗೆ ವೇತನ ಹೆಚ್ಚು ಮಾಡಬೇಕು. ಚಾಲಕರಿಗೆ 5 ಲಕ್ಷ ರೂ. ವಿಮೆ ಪಾಲಿಸಿ ಮಾಡಿಸಬೇಕು. ಕರ್ತವ್ಯ ನಿರತ ಚಾಲಕರ ಮರಣ ಹೊಂದಿದ್ದಲ್ಲಿ ಆತನಿಗೆ ಸರ್ಕಾರ 10 ಲಕ್ಷ ರೂ. ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.