![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Sep 18, 2021, 7:10 AM IST
ಹೊಸದಿಲ್ಲಿ: ದೇಶದ ವಿವಿಧ ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ ಪ್ರಕ್ರಿಯೆಯಲ್ಲಿ ಇಬ್ಬರು ಕನ್ನಡಿಗರಿಗೆ ಸ್ಥಾನ ಲಭಿಸಿದೆ. ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ| ಅರವಿಂದ ಕುಮಾರ್, ಮಧ್ಯಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ| ಆರ್.ವಿ. ಮಳೀಮಠ ಅವರನ್ನು ನೇಮಿಸಲು ಶಿಫಾರಸು ಮಾಡಲಾಗಿದೆ.
ಸಿಜೆಐ ಎನ್.ವಿ. ರಮಣ ನೇತೃತ್ವದ ಕೊಲೀಜಿಯಂ ಗುರುವಾರ ಮತ್ತು ಶುಕ್ರವಾರ ಸಭೆ ನಡೆಸಿ ಈ ನೇಮಕಗಳನ್ನು ಅಂತಿಮಗೊಳಿಸಿ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಿದೆ. ಜತೆಗೆ ಐದು ಹೈಕೋರ್ಟ್ ಗಳ ಮುಖ್ಯ ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಲಾಗಿದೆ.
ಕರ್ನಾಟಕ ಹೈಕೋರ್ಟ್‌ಗೆ ಮುಖ್ಯ ನ್ಯಾಯಮೂರ್ತಿಯಾಗಿ ಅಲಹಾಬಾದ್ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಅವರನ್ನು ನೇಮಿಸಲಾಗಿದೆ. ಈ ಮೂಲಕ ದೇಶದ ಹೈಕೋರ್ಟ್‌ಗಳಲ್ಲಿ ತೆರವಾಗಿದ್ದ ನ್ಯಾಯಮೂರ್ತಿಗಳ ಹುದ್ದೆ ತುಂಬಲು ಕೊಲೀಜಿಯಂ ಕ್ರಮ ಕೈಗೊಂಡಿದೆ.
ನ್ಯಾ| ಆರ್.ವಿ. ಮಳೀಮಠ
ನ್ಯಾ| ರವಿ ವಿಜಯ ಕುಮಾರ್ ಮಳೀಮಠ 2010ರಲ್ಲಿ ಕರ್ನಾಟಕ ಹೈಕೋರ್ಟ್‌ನ ಶಾಶ್ವತ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. 2019 ರಲ್ಲಿ ಹಿಮಾಚಲ ಹೈಕೋರ್ಟ್, ಇದೇ ಜುಲೈಯಲ್ಲಿ ಉತ್ತರಾಖಂಡ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿದ್ದರು.
ನ್ಯಾ| ಅರವಿಂದ್ ಕುಮಾರ್
ನ್ಯಾ| ಅರವಿಂದ ಕುಮಾರ್ ಸಿಬಿಐ ವಿಶೇಷ ವಕೀಲರಾಗಿದ್ದವರು. 2009ರಲ್ಲಿ ಹೆಚ್ಚುವರಿ ನ್ಯಾಯಮೂರ್ತಿಯಾಗಿ, 2012ರಲ್ಲಿ ಖಾಯಂ ನ್ಯಾಯಮೂರ್ತಿಯಾದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.