ಶನಿವಾರದ ರಾಶಿಫಲ : ಇಲ್ಲಿದೆ ನಿಮ್ಮ ಗ್ರಹಬಲ
Team Udayavani, Sep 18, 2021, 8:06 AM IST
ಮೇಷ: ವಿದ್ಯಾ ಜ್ಞಾನ ವೃದ್ಧಿ. ನಾಯಕತ್ವ ಗುಣಗಳಿಂದ ಕಾರ್ಯ ಕ್ಷೇತ್ರದಲ್ಲಿ ಸಾರ್ವಜನಿಕರಿಂದ ಗೌರವ. ಭಾೃತೃ, ಮಾತೃ ಸಮಾನರಿಂದ ಪ್ರೋತ್ಸಾಹ. ಪಾಲುದಾರಿಕಾ ವ್ಯವಹಾರದಲ್ಲಿ ಅಭಿವೃದ್ಧಿ. ಪ್ರಯಾಣ ಸುಖಕರ. ಭೂ ವ್ಯವಹಾರಕ್ಕೆ ಯೋಗ್ಯ.
ವೃಷಭ: ಉದ್ಯೋಗದಲ್ಲಿ ಉತ್ತಮ ಬದಲಾವಣೆಗೆ ಅವಕಾಶ. ಸ್ವಾವಲಂಬಿಗಳಾಗಿ ಕಾರ್ಯ ಸಾಧಿಸುವ ಕಾಲ. ನೂತನ ಮಿತ್ರರ ಸಮಾಗಮ. ಗೃಹೋಪವಸ್ತು ಸಂಗ್ರಹ. ವಿದ್ಯಾರ್ಥಿಗಳಿಗೆ, ದಂಪತಿಗಳಿಗೆ, ಕೃಷಿ ಹೈನುಗಾರರಿಗೆ ಶುಭ ಫಲ.
ಮಿಥುನ: ಸಂಚಾರದಿಂದ ನಿರೀಕ್ಷಿತ ಸಫಲತೆ. ಉತ್ತಮ ಧನಾರ್ಜನೆ. ದಂಪತಿಗಳಲ್ಲಿ ಅನುರಾಗ ಪ್ರೋತ್ಸಾಹ. ಉದಾರತೆಯಿಂದ ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪರಾಕ್ರಮ ಪ್ರದರ್ಶನದಿಂದ ಜನಮನ್ನಣೆ ಗೌರವ ಪ್ರಾಪ್ತಿ.
ಕರ್ಕ: ಧಾರ್ಮಿಕ ಸಾಮಾಜಿಕ ಆರ್ಥಿಕ ವಿಚಾರದಲ್ಲಿ ಚರ್ಚೆಗೆ ಅವಕಾಶ ನೀಡದೇ ತಾಳ್ಮೆ ಸಮಾಧಾನದಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಆರೋಗ್ಯದ ಕಡೆಗೆ ಗಮನ ಹರಿಸಿ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮ.
ಸಿಂಹ: ದೈಹಿಕ ಮಾನಸಿಕ ಒತ್ತಡವಿದ್ದರೂ ಕಾರ್ಯಕ್ಷೇತ್ರದಲ್ಲಿ ಸಫಲತೆ. ನಿರೀಕ್ಷಿತ ಧನಾಗಮ, ಸಹೋದರಾದಿ ಸಮಾನರಿಂದಲೂ, ಕಾರ್ಮಿಕರಿಂದಲೂ ಸುಖ ಲಭಿಸುವ ದಿನ. ಸಹಾಯ ಮಾಡುವಾಗ ಎಚ್ಚರಿಕೆ. ವಿದ್ಯಾರ್ಥಿಗಳಿಗೆ ಅನುಕೂಲಕರ.
ಕನ್ಯಾ: ಉತ್ತಮ ಅಭಿವೃದ್ಧಿ ಇದ್ದರೂ ಆರ್ಥಿಕ ವಿಚಾರದಲ್ಲಿ ಹಿಡಿತವಿರಲಿ. ದಾಕ್ಷಿಣ್ಯ ಪ್ರವೃತ್ತಿಯಿಂದ ಧನ ನಷ್ಟವಾಗುವ ಸಂಭವ. ಪಾಲುದಾರಿಕೆ ವ್ಯವಹಾರಸ್ಥರಿಗೆ ಉತ್ತಮ ಫಲಿತಾಂಶ ಲಭಿಸುವ ಅವಕಾಶ. ಸಾಂಸಾರಿಕ ಸುಖ.
ತುಲಾ: ಆರೋಗ್ಯ ವೃದ್ಧಿ. ವಿದ್ಯಾರ್ಥಿಗಳಿಗೆ ವ್ಯಾಪಾರಸ್ಥರಿಗೆ, ಉದ್ಯೋಗಸ್ಥರಿಗೆ ಸರಿಯಾದ ಮನ್ನಣೆ ದೊರೆತು ಸುಖ ಸಂತೋಷದಿಂದ ಸಂಭ್ರಮಿಸುವ ಸಮಯ. ನೂತನ ಮಿತ್ರರ ಸಮಾಗಮ. ಅವಿವಾಹಿತರಿಗೆ ಕಂಕಣಭಾಗ್ಯ.
ವೃಶ್ಚಿಕ: ಉದಾರತೆ ದೈರ್ಯ ವಿವೇಚನೆ ಪರಾಕ್ರಮ ನಾಯಕತ್ವ ಗುಣದಿಂದ ಜನಮನ್ನಣೆ. ಉದ್ಯೋಗಸ್ಥರಿಗೆ ವ್ಯವಹಾರಸ್ಥರಿಗೆ ಪ್ರಗತಿ. ಎಲ್ಲರ ಪ್ರೀತಿ ಸಂಪಾದಿಸುವ ಸಮಯ. ನಿರೀಕ್ಷಿತ ಧನ ಸಂಪಾದನೆ. ಅಧ್ಯಯನಶೀಲರಿಗೆ ಅನುಕೂಲ.
ಧನು: ಆರೋಗ್ಯ ವಿಚಾರದಲ್ಲಿ ಗಮನಿಸಿ. ಗುರುಹಿರಿಯರೊಂದಿಗೆ ತಾಳ್ಮೆ ಸಮಾಧಾನದಿಂದ ವ್ಯವಹರಿಸಿ ಪ್ರಯಾಣದಿಂದ ಶುಭ ಫಲ. ಗೃಹೋಪಕರಣಗಳಿಗೆ ಧನ ವ್ಯಯ. ವ್ಯಾಪಾರಿಗಳಿಗೆ, ಉದ್ಯೋಗಸ್ಥರಿಗೆ ತೃಪ್ತಿದಾಯಕ.
ಮಕರ: ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ತಿಳಿದು ಕಾರ್ಯ ನಿರ್ವಹಿಸಿ. ದೂರ ಪ್ರಯಾಣ ಅನಾನುಕೂಲ. ಖರ್ಚಿನಲ್ಲಿ ಹಿಡಿತವಿರಲಿ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಸಫಲತೆ. ವಿದೇಶದಲ್ಲಿ ವ್ಯವಹರಿಸುವಾಗ ಜಾಗ್ರತೆ.
ಕುಂಭ: ನಿರೀಕ್ಷಿತ ಧನಾಗಮವಿದ್ದರೂ ಖರ್ಚಿಗೆ ಹಲವಾರು ದಾರಿಗಳು ತೋರೀತು. ನೂತನ ಮಿತ್ರರ ಸಂಪರ್ಕವನ್ನು ಸರಿಯಾಗಿ ಉಪಯೋಗಿಸಿದರೆ ಪ್ರಗತಿ. ಪ್ರಯಾಣ ಲಾಭಕರ. ಆಹಾರೋದ್ಯಮಕ್ಕೆ ಅನುಕೂಲಕರ ಸಮಯ.
ಮೀನ: ಮಾನಸಿಕ ಆರೋಗ್ಯ ಸದೃಢವಾಗಿದ್ದರೂ ದೈಹಿಕ ಆರೋಗ್ಯದ ಬಗ್ಗೆ ಗಮನವಿರಲಿ. ದಾಂಪತ್ಯದಲ್ಲಿ ಸುಖ, ತೃಪ್ತಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ನಿರಂತರ ಧನಾರ್ಜನೆ, ಆಲೋಚನೆಗೆ ತಕ್ಕಂತೆ ಕಾರ್ಯ ನಿರ್ವಹಿಸಿ ಸಫಲತೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ
2025 ರ ವರ್ಷ ಫಲ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
Daily Horoscope; ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಕಸ್ಮಾತ್ ಧನಾಗಮ
Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.