ಲಸಿಕಾ ಅಭಿಯಾನದ ವೇಳೆ ನರ್ಸ್ ಮೇಲೆ ಮಹಿಳೆ ಹಲ್ಲೆ
Team Udayavani, Sep 18, 2021, 1:06 PM IST
ಹುಬ್ಬಳ್ಳಿ: ಇಲ್ಲಿನ ಹಳೇ ಹುಬ್ಬಳ್ಳಿ ನ್ಯೂ ಇಂಗ್ಲಿಷ್ ಸ್ಕೂಲ್‌ನಲ್ಲಿ ಹಮ್ಮಿಕೊಂಡಿದ್ದ ಕೋವಿಡ್ ಲಸಿಕಾಕರಣ ಅಭಿಯಾನದ ವೇಳೆ ಮಹಿಳೆಯೊಬ್ಬಳು ಲಸಿಕೆಗೆ ಸಂಬಂಧಿಸಿ ಆರೋಗ್ಯ ಸಿಬ್ಬಂದಿಯೊಂದಿಗೆ ಗಲಾಟೆ ಮಾಡಿ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ಈ ಕುರಿತು ಕಸಬಾಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಲ್ಲೆಯಲ್ಲಿ ಬೃಹತ್ ಲಸಿಕಾಕರಣ ಅಭಿಯಾನದ ಅಂಗವಾಗಿ ಆರೋಗ್ಯ ಇಲಾಖೆ ಸಿಬ್ಬಂದಿ ಜನರಿಗೆ ಲಸಿಕೆ ನೀಡುತ್ತಿದ್ದರು. ಈ ವೇಳೆ ಲಸಿಕೆ ವಿಚಾರವಾಗಿ ಎಎನ್ ಎಂಐ ನರ್ಸ್ ನಂದಿನಿ ಚುಂಚಾ ಜೊತೆ ಅಂಬಿಕಾ ಜರತಾರಘರ ಎಂಬುವರು ಕೋವಿಡ್ ಲಸಿಕೆ ಪಡೆದ ನಂತರ ಮೊಬೈಲ್‌ಗೆ ಸಂದೇಶ ಬಾರದಿರುವ ಕುರಿತು ಜಗಳ ತೆಗೆದಿದ್ದಾರೆ. ಆಗ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಅದು ವಿಕೋಪಕ್ಕೆ ಹೋದಾಗ ಮಹಿಳೆ ನರ್ಸ್‌ಗೆ ಮೊಬೈಲ್ ಫೋನ್‌ನಿಂದ ಮುಖದ ಮೇಲೆ ಹಲ್ಲೆ ಮಾಡಿದಾಗ ತೀವ್ರ ಗಾಯವಾಗಿ ರಕ್ತಸ್ರಾವವಾಗಿದೆ.
ಸ್ಥಳಕ್ಕೆ ಕಸಬಾಪೇಟೆ ಠಾಣೆ ಇನ್ಸ್‌ಪೆಕ್ಟರ್ ರತನಕುಮಾರ ಜಿರಗ್ಯಾಳ ಹಾಗೂ ಸಿಬ್ಬಂದಿ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿ, ಮಹಿಳೆಯನ್ನು ಠಾಣೆಗೆ ಕರೆದೊಯ್ದು ಅವರ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.