ನಿಮಿಷಕ್ಕೆ 26 ಸಾವಿರ ಮಂದಿಗೆ ಲಸಿಕೆ !
Team Udayavani, Sep 19, 2021, 7:20 AM IST
ಹೊಸದಿಲ್ಲಿ/ಬೆಂಗಳೂರು: ಪ್ರಧಾನಿ ಮೋದಿ ಜನ್ಮದಿನದಂದು ದೇಶದಲ್ಲಿ ದಾಖಲೆ ಸಂಖ್ಯೆಯಲ್ಲಿ ಕೊರೊನಾ ಲಸಿಕೆ ಡೋಸ್ಗಳನ್ನು ನೀಡಲಾಗಿದ್ದು, ಪ್ರತೀ ನಿಮಿಷಕ್ಕೆ 26 ಸಾವಿರ ಮಂದಿಯಂತೆ ಲಸಿಕೆ ನೀಡಲಾಗಿದೆ.
ಒಟ್ಟು 2.50 ಕೋಟಿಗೂ ಹೆಚ್ಚು ಜನರಿಗೆ ಲಸಿಕೆ ನೀಡಲಾಗಿದ್ದು, ಈ ಬಗ್ಗೆ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.
ಲಸಿಕೆ ಮೇಳ ಯಶಸ್ವಿಯಾಗಲು ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸುತ್ತೇನೆ. ಈ ಸಾಧನೆಯಿಂದ ನನಗೆ ಇನ್ನೂ ಹೆಚ್ಚು ಕೆಲಸ ಮಾಡಲು ಶಕ್ತಿ ಬಂದಂತಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.
ರಾಜ್ಯದಲ್ಲೂ ದಾಖಲೆ:
ರಾಜ್ಯದಲ್ಲಿ ಶುಕ್ರವಾರ ತಡರಾತ್ರಿಯ ವರೆಗೂ ಲಸಿಕೆ ನೀಡಲಾಗಿದ್ದು, 31.43 ಲಕ್ಷ ಮಂದಿ ಲಸಿಕೆ ಪಡೆದಿದ್ದಾರೆ.
ನಗರ ಪ್ರದೇಶ, ಸಾರ್ವಜನಿಕ ಸ್ಥಳಗಳಲ್ಲಿ ಶುಕ್ರವಾರ ತಡರಾತ್ರಿ 12ರವರೆಗೂ ಲಸಿಕೆ ನೀಡಲಾಗಿದೆ. 12 ಜಿಲ್ಲೆಗಳಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಲಸಿಕೆ ಪಡೆದಿದ್ದಾರೆ. ಅತೀ ಹೆಚ್ಚು ಬೆಂಗಳೂರಿನಲ್ಲಿ 5.13 ಲಕ್ಷ ಮಂದಿ, ಬೆಳಗಾವಿಯಲ್ಲಿ 2.74 ಲಕ್ಷ ಮಂದಿ, ದಕ್ಷಿಣಕನ್ನಡದಲ್ಲಿ 1.38 ಲಕ್ಷ, ತುಮಕೂರಿನಲ್ಲಿ 1.35 ಲಕ್ಷ, ಮಂಡ್ಯದಲ್ಲಿ 1.24 ಲಕ್ಷ ಮಂದಿ ಲಸಿಕೆ ಪಡೆದಿದ್ದಾರೆ. ಮುಂದಿನ ಬುಧವಾರ ಮತ್ತೆ ಲಸಿಕೆ ಮೇಳ ನಡೆಯಲಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ 30 ಲಕ್ಷ ಡೋಸ್ ಲಸಿಕೆ ಹಾಕುವ ಗುರಿ ಇರಿಸಿಕೊಳ್ಳಲಾಗಿತ್ತು. ಇದಕ್ಕೆ ಸಂಬಂಧಿಸಿ ಎಲ್ಲ ಜಿಲ್ಲಾಧಿಕಾರಿ ಗಳ ಜತೆ ಸಭೆ ನಡೆಸಿ ಲಸಿಕೆ ಅಭಿಯಾನದ ಬಗ್ಗೆ ಮಾಹಿತಿ ನೀಡಲಾಗಿತ್ತು. ಪ್ರಧಾನಿ ಮೋದಿ ಅವರ ನಿರಂತರ ಸಹಕಾರದಿಂದ ಗುರಿ ಮುಟ್ಟಲು ಸಾಧ್ಯವಾಗಿದೆ. –ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
MUST WATCH
ಹೊಸ ಸೇರ್ಪಡೆ
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.