![1-dee](https://www.udayavani.com/wp-content/uploads/2025/02/1-dee-1-415x221.jpg)
![1-dee](https://www.udayavani.com/wp-content/uploads/2025/02/1-dee-1-415x221.jpg)
Team Udayavani, Sep 19, 2021, 9:44 AM IST
ಹಲವು ದಿನಗಳ ಬಳಿ ರಶ್ಮಿಕಾ ಮಂದಣ್ಣ ಮತ್ತು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ತಮ್ಮಿಬ್ಬರ ನಡುವೆ ಮನಸ್ತಾಪ ಬಂದ ಕಾರಣ ಕೆಲವು ತಿಂಗಳು ರಶ್ಮಿಕಾ ಮತ್ತು ರಕ್ಷಿತ್ ಶೆಟ್ಟಿ ಜೊತೆಯಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಈ ಇಬ್ಬರೂ ಒಂದೇ ಕಾರ್ಯಕ್ರಮದಲ್ಲಿ ಕಾಣಿಸಿದ್ದಾರೆ.
ಈ ಬಾರಿಯ ಸೈಮಾ ಕಾರ್ಯಕ್ರಮದಲ್ಲಿ ರಕ್ಷಿತ್ ಶೆಟ್ಟಿಗೆ ‘ಅತ್ಯುತ್ತಮ ನಟ’ ಪ್ರಶಸ್ತಿ ಸಿಕ್ಕಿದೆ. ಅಲ್ಲದೆ ‘ಯಜಮಾನ’ ಹಾಗೂ ‘ಡಿಯರ್ ಕಾಮ್ರೇಡ್’ ಚಿತ್ರಗಳ ನಟನೆಗಾಗಿ ರಶ್ಮಿಕಾ ಮಂದಣ್ಣ ಅವರಿಗೆ ‘ಅತ್ಯುತ್ತಮ ನಟಿ’ ಪ್ರಶಸ್ತಿ ಸಿಕ್ಕಿದೆ. ಸೈಮಾ ಕಾರ್ಯಕ್ರಮ ಶನಿವಾರ ರಾತ್ರಿ ನಡೆದಿದ್ದು, ಕಾರ್ಯಕ್ರಮದಲ್ಲಿ ರಕ್ಷಿತ್ ಮತ್ತು ರಕ್ಮಿಕಾ ಕಾಣಿಸಿಕೊಂಡಿದ್ದಾರೆ.
ಕಾರ್ಯಕ್ರಮ ಹೈದರಾಬಾದ್ ನಲ್ಲಿ ನಡೆದಿದ್ದು, ರಕ್ಷಿತ್ ಶೆಟ್ಟಿ ನಟನೆಯ ‘ಅವನೇ ಶ್ರೀಮನ್ನಾರಾಯಣ’ ಸಿನಿಮಾಕ್ಕೆ ಅತ್ಯುತ್ತಮ ನಟ ಪ್ರಶಸ್ತಿಯನ್ನು ಪಡೆದಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.