25 ವರ್ಷ ನಂತರ ಕಲಬುರಗಿಯಲ್ಲಿ 36ನೇ ಪತ್ರಕರ್ತರ ರಾಜ್ಯ ಸಮ್ಮೇಳನ


Team Udayavani, Sep 19, 2021, 12:35 PM IST

25 ವರ್ಷ ನಂತರ ಕಲಬುರಗಿಯಲ್ಲಿ 36ನೇ ಪತ್ರಕರ್ತರ ರಾಜ್ಯ ಸಮ್ಮೇಳನ

ಕಲಬುರಗಿ: 25 ವರ್ಷಗಳ ನಂತರ ಕಲ್ಯಾಣ ಕರ್ನಾಟಕದ ವಿಭಾಗೀಯ ಕೇಂದ್ರ ಕಲಬುರಗಿಯಲ್ಲಿ ಕರ್ನಾಟಕ ರಾಜ್ಯ 36 ನೇ ಪತ್ರಕರ್ತರ ಸಮ್ಮೇಳನ ನಡೆಸಲು ಸಿದ್ದತೆಗಳನ್ನು ಆರಂಭಿಸಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದರು.

ಪತ್ರಿಕಾ ಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನ ಉದ್ಘಾಟನೆ ನೆರವೇರಿಸುವಂತೆ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಲಾಗಿದೆ. ವಾರದೊಳಗೆ ದಿನಾಂಕ ನಿಗದಿ ಮಾಡಲಿದ್ದಾರೆ. ಅಕ್ಟೋಬರ್ ಕೊನೆ ವಾರ ಇಲ್ಲವೇ ನವೆಂಬರ್ ಎರಡನೇ ವಾರದಲ್ಲಿ ಸಮ್ಮೇಳನ ನಡೆಯವ ಸಾಧ್ಯತೆಗಳಿವೆ ಎಂದರು.

ಈ ಹಿಂದೆ 1996ರಲ್ಲಿ ಕಲಬುರಗಿಯಲ್ಲಿ 20 ನೆಯ ರಾಜ್ಯ ಸಮ್ಮೇಳನ ನಡೆದಿತ್ತು. ಆಗಿನ ಕಾಲಕ್ಕೂ ಈಗಿನ ಕಾಲಕ್ಕೂ ಸಾಕಷ್ಟು ಬದಲಾವಣೆಗಳಾಗಿವೆ. ಆಗ ವಿದ್ಯುನ್ಮಾನ ಕಡಿಮೆ ಇದ್ದವು. ಈಗ ಮಾಧ್ಯಮ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಈಗ ಬಹು ಸಮ್ಮೇಳನ ಎಲ್ಲರನ್ನು ವಿಶ್ವಾಸ ತೆಗೆದುಕೊಂಡು ನಡೆಸಲಾಗುವುದು.‌ ವೃತ್ತಿ ಆಧಾರಿತ ಮೇಲೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ ಸಮ್ಮೇಳನ ಸಂಘಟಿಸಲಾಗುತ್ತಿದೆ.‌ ಮೊದಲನೇಯದಾಗಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ, ಹಾಗೂ ಶರಣಬಸವೇಶ್ವರರ ವಿದ್ಯಾವರ್ಧಕ ಸಂಘದ ಅಧ್ಯಕ್ಷರೂ ಹಾಗೂ ಶರಣಬಸವೇಶ್ವರರ ಮಹಾದಾಸೋಹಿ ಸಂಸ್ಥಾನದ ಅಧ್ಯಕ್ಷರಾದ ಶರಣಬಸವಪ್ಪ  ಅವರ ಸಾನ್ನಿದ್ಯದಲ್ಲಿ ಸ್ವಾಗತ ಸಮಿತಿ ರಚಿಸಲಾಗುವುದು ಎಂದು ತಗಡೂರು ವಿವರಿಸಿದರು.

ಕೋವಿಡ್ ಸೋಂಕು ಆತಂಕದ ಹಿನ್ನೆಲೆಯಲ್ಲಿ ಸಮ್ಮೇಳನ ಎರಡು ದಿನದ ಬದಲು ಒಂದು ದಿನ ಮಾತ್ರ ಆಯೋಜಿಸಲು ಉದ್ದೇಶಿಸಲಾಗಿದೆ. ಬೆಳಿಗ್ಗೆ ಉದ್ಘಾಟನೆ, ತದನಂತರ ಗೋಷ್ಠಿ, ಸಂಜೆ ಸಮಾರೋಪ ನಡೆಸಲು ಉದ್ದೇಶಿಸಲಾಗಿದೆ. ಮರು ದಿನ ಪ್ರವಾಸ ಆಯೋಜಿಸಲಾಗುವುದು. ಸಮ್ಮೇಳನ ಅಂಗವಾಗಿ ಅರ್ಥಪೂರ್ಣ ಲೇಖನಗಳನ್ನು ಒಳಗೊಂಡ ಸ್ಮರಣ ಸಂಚಿಕೆ ಹೊರಲಾಗುವುದು. ಒಟ್ಟಾರೆ ಸಮ್ಮೇಳನ ಯಶಸ್ವಿಗೆ ವಿವಿಧ ಸಮಿತಿಗಳನ್ನು ರಚಿಸಲಾಗುವುದು ಎಂದು ತಿಳಿಸಿದರು.

ಕೆಯುಡಬ್ಲ್ಯೂಜೆ ಪ್ರಶಸ್ತಿ:  ಸಮ್ಮೇಳನ ಸಮಾರೋಪದಲ್ಲಿ ಸಂಘದಿಂದ 19 ವಾರ್ಷಿಕ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತಿದೆ. 2 ವರ್ಷಗಳಿಂದ ಸಂಘದಿಂದ ವಾರ್ಷಿಕ ಪ್ರಶಸ್ತಿ ನೀಡಿಲ್ಲ. ಈಗ ಕಲಬುರಗಿ ಸಮ್ಮೇಳನದಲ್ಲಿ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಹೀಗಾಗಿ ಪತ್ರಕರ್ತರು ತಮ್ಮ ಸಾಮಾಜಿಕ ಪರಿಣಾಮದ ಜತೆಗೆ ಇತರ ವೈವಿದ್ಯಮಯದ ವಿಶೇಷ ವರದಿಗಳ ಪ್ರತಿಯನ್ನು ಹಾಗೂ ತಮ್ಮ ಸೇವೆಯ ವಿಶಿಷ್ಟತೆಯನ್ನು ಒಳಗೊಂಡಂತೆ ಕುರಿತ ಅರ್ಜಿಯನ್ನು ಪತ್ರಕರ್ತರು ಇದೇ ಸೆ.30 ರೊಳಗೆ ಅರ್ಜಿ ಸಲ್ಲಿಸಬೇಕೆಂದು ಶಿವಾನಂದ ತಗಡೂರು ಇದೇ ಸಂದರ್ಭದಲ್ಲಿ ಪ್ರಕಟಿಸಿದರು.

ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಭವಾನಿಸಿಂಗ್ ಠಾಕೂರ್ ಮಾತನಾಡಿ, ಸಮ್ಮೇಳನ ಎಲ್ಲರೂ ಒಗ್ಗೂಡಿ ಕನ್ನಡ ಸಾಹಿತ್ಯ ಸಮ್ಮೇಳನದಂತೆ ಯಶಸ್ವಿ ಗೊಳಿಸೋಣ ಕಲಬುರಗಿ ಗೆ ಕೀರ್ತಿ ತರೋಣ ಎಂದು. ಸಂಘದ ಪ್ರಧಾನ ಕಾರ್ಯದರ್ಶಿ ದೇವಿಂದ್ರಪ್ಪ ಅವಂಟಿ, ರಾಜ್ಯ ಸಮಿತಿ ಸದಸ್ಯರಾದ ಹಣಮಂತರಾವ ಭೈರಾಮಡಗಿ, ದೇವಿಂದ್ರಪ್ಪ ಕಪನೂರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌

doctor 2

America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ

UGC

UGC; ಪದವಿ ಕಲಿಕೆ ಅವಧಿ ನಿರ್ಧಾರ ಆಯ್ಕೆ ಶೀಘ್ರ: ಚೇರ್ಮನ್‌ ಹೇಳಿದ್ದೇನು?

1-chinn

Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್‌ ಸ್ಪಷ್ಟನೆ

Ashwin Vaishnav

Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ

Farmer

Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್‌ ಇಳುವರಿ!

1-aaasas

Team Indiaಕ್ಕೆ ಆಸೀಸ್‌ ಪ್ರಧಾನಿ ಔತಣ: ಆಟದಲ್ಲಿ ಸ್ವಲ್ಪ ಮಸಾಲೆ ಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌

doctor 2

America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ

UGC

UGC; ಪದವಿ ಕಲಿಕೆ ಅವಧಿ ನಿರ್ಧಾರ ಆಯ್ಕೆ ಶೀಘ್ರ: ಚೇರ್ಮನ್‌ ಹೇಳಿದ್ದೇನು?

1-chinn

Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್‌ ಸ್ಪಷ್ಟನೆ

Ashwin Vaishnav

Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.