ಎಟಿಎಂನಲ್ಲಿ ಹಣವಿಲ್ಲದಿದ್ದರೆ ಬ್ಯಾಂಕ್‌ಗಳಿಗೆ ದಂಡ

ಶಾಖೆಗಳಿಂದ ನಗದು ವಿಥ್‌ಡ್ರಾ ಪ್ರಮಾಣ ಕಡಿಮೆ ಗೊಳ್ಳಲಿದೆ ಎಂಬ ಲೆಕ್ಕಾಚಾರ ಆರ್‌ಬಿಐನದ್ದಾಗಿದೆ. 

Team Udayavani, Sep 20, 2021, 9:20 AM IST

ಎಟಿಎಂನಲ್ಲಿ ಹಣವಿಲ್ಲದಿದ್ದರೆ ಬ್ಯಾಂಕ್‌ಗಳಿಗೆ ದಂಡ

ನಷ್ಟದಲ್ಲಿರುವ ಕೆಲವೊಂದು ಬ್ಯಾಂಕ್‌ಗಳನ್ನು ಲಾಭದಲ್ಲಿರುವ ಬ್ಯಾಂಕ್‌ಗಳೊಂದಿಗೆ ವಿಲೀನಗೊಳಿಸಿದ ಬಳಿಕ ಎಟಿಎಂಗಳು ಕೂಡ ಬರಿದಾಗತೊಡಗಿವೆ. ಹಣದ ತುರ್ತು ಆವಶ್ಯಕತೆ ಇದ್ದಾಗ ಎಟಿಎಂ ಕೇಂದ್ರಕ್ಕೆ ತೆರಳಿದ ವೇಳೆ ಹಣವಿಲ್ಲ ಎಂಬ ಬೋರ್ಡ್‌ ಗಳು ಮಾಮೂಲಿಯಾಗಿವೆ. ಇದರಿಂದಾಗಿ ಜನರು ಹಣಕ್ಕಾಗಿ ಒಂದು ಎಟಿಎಂನಿಂದ ಇನ್ನೊಂದು ಎಟಿಎಂಗಳಿಗೆ ಅಲೆದಾಡುವಂತಾಗಿದೆ. ಈ ಸಂಬಂಧ ಬ್ಯಾಂಕ್‌ಗಳ ಗ್ರಾಹಕರಿಂದ ವ್ಯಾಪಕ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ  ಭಾರತೀಯ ರಿಸರ್ವ್‌ ಬ್ಯಾಂಕ್‌ ಎಟಿಎಂಗಳಿಗೆ ಹಣ ತುಂಬಲು ವಿಫ‌ಲವಾದ ಬ್ಯಾಂಕ್‌ಗಳಿಗೆ ದಂಡ ವಿಧಿಸಲು ನಿರ್ಧರಿಸಿದೆ.

ಗ್ರಾಹಕರಿಗೆ ಏನು ಲಾಭ?: 

ಬ್ಯಾಂಕ್‌ಗಳು ಮತ್ತು ಎಟಿಎಂಗಳಿಗೆ ನಗದು ತುಂಬಿಸುವ ಸೇವೆಯನ್ನು ನಿರ್ವಹಿಸುತ್ತಿರುವ ಸಂಸ್ಥೆ ಅಥವಾ ಕಂಪೆನಿಗಳು ಎಟಿಎಂಗಳ ಮರುಪೂರಣದ ಕುರಿತು ಆರ್‌ಬಿಐನ ಹೊಸ ಮಾರ್ಗಸೂಚಿಯನ್ನು ಅನುಸರಿ ಸಲೇಬೇಕಿದೆ. ಸಾರ್ವಜನಿಕರಿಗೆ ಅಡೆತಡೆಯಿಲ್ಲದೆ ಸಾಕಷ್ಟು ಪ್ರಮಾಣದಲ್ಲಿ ನಗದು ಲಭ್ಯತೆಯನ್ನು ಖಚಿತಪಡಿಸಿಕೊಳ್ಳಬೇಕಾಗುತ್ತದೆ. ಇದಕ್ಕಾಗಿ ಎಟಿಎಂಗಳಲ್ಲಿ ನಗದು ನಿರ್ವಹಣೆಯನ್ನು ಮುನ್ಸೂಚಿಸಲು ಬ್ಯಾಂಕ್‌ಗಳು ಡೇಟಾ ಚಾಲಿತ ವಿಧಾನವನ್ನು ಅಳವಡಿಸಿಕೊಳ್ಳಬೇಕಾಗುತ್ತದೆ.

ಯಾಕಾಗಿ ಈ ನಿಯಮ? :

ಎಟಿಎಂ ಯಂತ್ರಗಳಿಗೆ ನಗದು ತುಂಬಿಸಲು ಆರ್‌ಬಿಐ ರೂಪಿಸಿರುವ ಹೊಸ ನಿಯಮಗಳನ್ನು ಬ್ಯಾಂಕ್‌ಗಳು ಪಾಲನೆ ಮಾಡದೇ ಇದ್ದಲ್ಲಿ ದಂಡ ತೆರಬೇಕಾಗುತ್ತದೆ. ಈ ಹೊಸ ನಿಯಮವು ಅಕ್ಟೋಬರ್‌ 1ರಂದು ಜಾರಿಯಾಗಲಿದ್ದು, ಎಟಿಎಂಗಳಲ್ಲೇ ಸಾಕಷ್ಟು ನಗದು ಸಾರ್ವಜನಿಕರಿಗೆ ಲಭ್ಯವಾಗಲಿದೆ. ಈ ಮೂಲಕ ಬ್ಯಾಂಕ್‌ ಶಾಖೆಗಳಿಂದ ನಗದು ವಿಥ್‌ಡ್ರಾ ಪ್ರಮಾಣ ಕಡಿಮೆ ಗೊಳ್ಳಲಿದೆ ಎಂಬ ಲೆಕ್ಕಾಚಾರ ಆರ್‌ಬಿಐನದ್ದಾಗಿದೆ.  ಅಷ್ಟು ಮಾತ್ರವಲ್ಲದೆ ದೇಶ ದಲ್ಲಿ ಡಿಜಿಟಲ್‌ ವ್ಯವಹಾರಕ್ಕೆ ಸರಕಾರ ಹೆಚ್ಚಿನ ಉತ್ತೇಜನ ನೀಡುತ್ತಿರುವುದರಿಂದ ಇದರ ಭಾಗವಾಗಿ ಎಟಿಎಂ ಕೇಂದ್ರಗಳನ್ನು ಮುಚ್ಚಲು ಸರಕಾರ ಮುಂದಾಗಿದೆ ಎಂಬ ಅನುಮಾನ ಜನರನ್ನು ಕಾಡತೊಡಗಿತ್ತು. ಇದೀಗ ಆರ್‌ಬಿಐ ಎಟಿಎಂಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ನಗದು ಲಭ್ಯವಿರುವುದನ್ನು ಖಾತರಿಪಡಿಸಬೇಕು ಎಂದು ಕಟ್ಟಾಜ್ಞೆ ಹೊರಡಿಸುವ ಮೂಲಕ ಜ®‌ರಲ್ಲಿನ ಅನುಮಾನವನ್ನು ದೂರ ಮಾಡಿದೆ.

ದಂಡದ ಪ್ರಮಾಣ ಎಷ್ಟು? :

ಅ. 1ರಿಂದ ಒಂದು ತಿಂಗಳಲ್ಲಿ ಎಟಿಎಂಗಳು ಒಟ್ಟು 10 ಗಂಟೆಗಳ ಕಾಲ ನಗದು ರಹಿತವಾಗಿದ್ದರೆ ಆರ್‌ಬಿಐ ಬ್ಯಾಂಕ್‌ಗಳಿಗೆ ದಂಡ ವಿಧಿಸುತ್ತದೆ. ದಂಡದ ಪ್ರಮಾಣಕ್ಕೆ ಸಂಬಂಧಿಸಿ ತಿಂಗಳಲ್ಲಿ 10 ಗಂಟೆಗಳಿಗಿಂತ ಹೆಚ್ಚಿನ ಅವಧಿಯಲ್ಲಿ ಯಾವುದೇ ಎಟಿಎಂನಲ್ಲಿ ನಗದು ಇಲ್ಲದೇ ಇದ್ದರೆ ಆಗ 10 ಸಾವಿರ ರೂ. ದಂಡ ವಿಧಿಸಲಾಗುವುದು ಎಂದು ಆರ್‌ಬಿಐ ಸ್ಪಷ್ಟ ಸೂಚನೆಯನ್ನು ನೀಡಿದೆ.

ಟಾಪ್ ನ್ಯೂಸ್

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.