“ಚಡ್ಡಿದೋಸ್ತ್ ಕಡ್ಡಿಅಲ್ಲಾಡುಸ್ಬುಟ್ಟ’: ಪ್ರೀತಿ ಪ್ರೇಮದ ನಡುವೆ ದೋಸ್ತಿ ಮಸ್ತಿ

Team Udayavani, Sep 20, 2021, 9:11 AM IST

“ಚಡ್ಡಿದೋಸ್ತ್ ಕಡ್ಡಿಅಲ್ಲಾಡುಸ್ಬುಟ್ಟ’: ಪ್ರೀತಿ ಪ್ರೇಮದ ನಡುವೆ ದೋಸ್ತಿ ಮಸ್ತಿ

ತನ್ನ ವಿಭಿನ್ನ ಟೈಟಲ್‌ ಮೂಲಕವೇ ಒಂದಷ್ಟು ಮಂದಿಯ ಗಮನ ಸೆಳೆದಿದ್ದ “ಚಡ್ಡಿದೋಸ್ತ್ ಕಡ್ಡಿಅಲ್ಲಾಡುಸ್ಬುಟ್ಟ’ ಚಿತ್ರ ಈ ವಾರ ತೆರೆಗೆ ಬಂದಿದೆ. ಇನ್ನು “ಚಡ್ಡಿದೋಸ್ತ್ ಕಡ್ಡಿಅಲ್ಲಾಡುಸ್ಬುಟ್ಟ’ ಚಿತ್ರದ ಟೈಟಲ್ಲೇ ಹೇಳುವಂತೆ ಇದು ಇಬ್ಬರು ಚಡ್ಡಿದೋಸ್ತ್ಗಳ ನಡುವೆ ನಡೆಯುವಂಥ ಕಥೆ. ಎರಡು ವಿಭಿನ್ನ ಮನಸ್ಥಿತಿಯ

ಸ್ನೇಹಿತರ ನಡುವೆ ಒಬ್ಬಳು ಹುಡುಗಿ, ಮತ್ತೂಬ್ಬ ವಿಲನ್‌ ಅಚಾನಕ್ಕಾಗಿ ಎಂಟ್ರಿಯಾದರೆ ಏನೇನಾಗುತ್ತದೆ ಅನ್ನೋದು ಚಿತ್ರದ ಕಥೆಯ ಒಂದು ಎಳೆ.

ಫ್ರೆಂಡ್‌ಶಿಪ್‌, ಲವ್‌, ಸೆಂಟಿಮೆಂಟ್‌, ಕಾಮಿಡಿ ಜೊತೆಗೆ ಒಂದಷ್ಟು ಪೋಲಿಯಾಟದ ನಡುವೆ ನಡೆಯುವ ಚಡ್ಡಿದೋಸ್ತ್ಗಳ ಕಥೆಯಲ್ಲಿ ಕಡ್ಡಿ ಅಲ್ಲಾಡುಸುಟ್ಟವರು ಯಾರು ಅನ್ನೋದು ಚಿತ್ರದ ಕ್ಲೈಮ್ಯಾಕ್ಸ್‌ನಲ್ಲಿ ಗೊತ್ತಾಗುತ್ತದೆ. ಅದು ಹೇಗೆ ಅನ್ನೋದನ್ನು ನೋಡುವ ಕುತೂಹಲವಿದ್ದರೆ, “ಚಡ್ಡಿದೋಸ್ತ್ ಕಡ್ಡಿಅಲ್ಲಾಡುಸ್ಬುಟ್ಟ’ ಚಿತ್ರವನ್ನು ನೋಡಬಹುದು.

“ಚಡ್ಡಿದೋಸ್ತ್ ಕಡ್ಡಿಅಲ್ಲಾಡುಸ್ಬುಟ್ಟ’ ಚಿತ್ರದ ಕಥೆ ಮತ್ತು ಚಿತ್ರಕಥೆ, ಸಂಭಾಷಣೆ ಎಲ್ಲವೂ ಅಚ್ಚುಕಟ್ಟಾಗಿದ್ದು, ನೋಡುಗರಿಗೆ ಕನೆಕ್ಟ್ ಆಗುವಂತಿದೆ. ಚಿತ್ರದ ಕೆಲವು ದೃಶ್ಯಗಳಿಗೆ ಕತ್ತರಿ ಹಾಕಿದ್ದರೆ, ಚಿತ್ರಕಥೆಗೆ ಇನ್ನಷ್ಟು ವೇಗ ಸಿಗುವ ಸಾಧ್ಯತೆಗಳಿದ್ದವು. ಚಿತ್ರದಲ್ಲಿ ಒಬ್ಬ ನಾಯಕ ನಟ ಆಸ್ಕರ್‌ ಕೃಷ್ಣ ಗಂಭೀರ ಸ್ವಭಾವದ ಸ್ನೇಹಿತನಾಗಿ ಕಾಣಿಸಿಕೊಂಡರೆ, ಮತ್ತೂಬ್ಬ ನಾಯಕ ಲೋಕೇಂದ್ರ ಸೂರ್ಯ ಅಷ್ಟೇ ಪೋಲಿ ಸ್ವಭಾವದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಚಿತ್ರದ ಉದ್ದಕ್ಕೂ ಲವಲವಿಕೆಯ ಅಭಿನಯ ನೀಡಿರುವ ಲೋಕೇಂದ್ರ ಸೂರ್ಯ, ತಮ್ಮ ಡೈಲಾಗ್ಸ್‌ ಮತ್ತು ಮ್ಯಾನರಿಸಂ ಮೂಲಕ ನೋಡುಗರಿಗೆ ಕೂತಲ್ಲೇ ಕಚಗುಳಿ ನೀಡುತ್ತಾರೆ. ಉಳಿದಂತೆ ಮೋಸ ಹೋದ ಹುಡುಗಿಯ ಪಾತ್ರದಲ್ಲಿ ನಾಯಕಿಯಾಗಿ ಗೌರಿ ನಾಯರ್‌ ಅವರದ್ದು ಅಚ್ಚುಕಟ್ಟು ಅಭಿನಯ. ಇನ್ನು ಚಿತ್ರದಲ್ಲಿ ವಿಲನ್‌ ರೋಲ್‌ನಲ್ಲಿ ಕಾಣಿಸಿಕೊಂಡಿರುವ ನಿರ್ಮಾಪಕ ಸೆವೆನ್‌ ರಾಜ್‌, ತಮ್ಮ ಪಾತ್ರದ ಮೂಲಕ ಒಂದಷ್ಟು ಗಮನ ಸೆಳೆಯುತ್ತಾರೆ. ಅದನ್ನು ಹೊರತುಪಡಿಸಿದರೆ, ಚಿತ್ರದಲ್ಲಿ ಇತರ ಪಾತ್ರಗಳಿಗೆ ಹೆಚ್ಚು ಮಹತ್ವವಿಲ್ಲದಿರುವುದರಿಂದ, ಯಾವ ಪಾತ್ರಗಳೂ ಅಷ್ಟಾಗಿ ಮನಸ್ಸಿನಲ್ಲಿ ಉಳಿಯುವುದಿಲ್ಲ.

ಇದನ್ನೂ ಓದಿ:ತಂದೆ-ತಾಯಿ ವಿರುದ್ಧ ದೂರು ನೀಡಿದ ನಟ ದಳಪತಿ ವಿಜಯ್ ​​

ಇನ್ನು ಚಿತ್ರದ ತಾಂತ್ರಿಕ ವಿಷಯಗಳ ಬಗ್ಗೆ ಹೇಳುವುದಾದರೆ, ಚಿತ್ರದ ಮೂರು ಹಾಡುಗಳು ಗುನುಗುವಂತಿದೆ. ಹಿನ್ನೆಲೆ ಸಂಗೀತ ಪರವಾಗಿಲ್ಲ ಎನ್ನಬಹುದು. ಆದರೆ ಒಳ್ಳೆಯ ಕಥೆ, ಉತ್ತಮ ನಿರೂಪಣೆ ಇದ್ದರೂ ಅದನ್ನು ಅಚ್ಚುಕಟ್ಟಾದ ಫ್ರೆಮ್‌ನೊಳಗೆ ಕಲರ್‌ಫ‌ುಲ್‌ ಆಗಿ ಕಟ್ಟಿಕೊಡುವಲ್ಲಿ ಚಿತ್ರದ ಛಾಯಾಗ್ರಹಣ ಎಡವಿದಂತಿದೆ.

ಚಿತ್ರದ ಸಂಕಲನ, ಕಲರಿಂಗ್‌ ಹೀಗೆ ಒಂದಷ್ಟು ತಾಂತ್ರಿಕ ಕಾರ್ಯದ ಕಡೆಗೆ ನಿರ್ದೇಶಕರು ಹೆಚ್ಚಿನ ಗಮನ ಕೊಟ್ಟಿದ್ದರೆ, “ಚಡ್ಡಿದೋಸ್ತ್’ ಗಳ ಕಮಾಲ್‌ ಅನ್ನು ಇನ್ನೂ ರಂಗಾಗಿಸಬಹುದಿತ್ತು.

ಜಿ.ಎಸ್‌.ಕಾರ್ತಿಕ ಸುಧನ್‌

ಟಾಪ್ ನ್ಯೂಸ್

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prabhutva movie review

Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

Love Reddy Movie Review

Love Reddy Movie Review: ಕಾಡುವ ಪ್ರೀತಿ ಹೊಸ ರೀತಿ

Tenant Movie Review

Tenant Movie Review: ಅಕ್ರಮ-ಸಕ್ರಮದಲ್ಲೊಂದು ಸಂಗ್ರಾಮ!

Aaram Aravinda Swamy Movie Review

Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫ‌ನ್‌ರೈಡ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.