ಬೆಳಗಾವಿ ವಿಭಾಗಕ್ಕೆ ರಾಷ್ಟ್ರಮಟ್ಟದ ಇನ್ಸ್ಪೈರ್ ಅವಾರ್ಡ್ ಗರಿ
Team Udayavani, Sep 20, 2021, 5:12 PM IST
ಧಾರವಾಡ: ರಾಷ್ಟ್ರಮಟ್ಟದ ಇನ್ಸ್ಪೈರ್ ಅವಾರ್ಡ್ ಸ್ಪರ್ಧೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ವಾಯವ್ಯ ಕರ್ನಾಟಕ ಬೆಳಗಾವಿ ವಿಭಾಗ ವ್ಯಾಪ್ತಿಯ ವಿಜಯಪೂರ ಜಿಲ್ಲೆ ಇಂಡಿ ತಾಲೂಕಿನ ನಾದ ಕೆ.ಡಿ.ಗ್ರಾಮದ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ ದೇವೇಂದ್ರ ಬಿರಾದಾರ ಮತ್ತು ಕಾರ್ತಿಕ್ ನರಳೆ ಸಿದ್ಧಪಡಿಸಿ ಪ್ರಸ್ತುತಪಡಿಸಿದ ಕೃಷಿ ಯಂತ್ರಕ್ಕೆ ರಾಷ್ಟ್ರಮಟ್ಟದ ಇನ್ಸ್ಪೈರ್ ಅವಾರ್ಡ್ ಲಭಿಸಿದೆ.
ಇತ್ತೀಚಿನ ದಿನಗಳಲ್ಲಿ ಕೃಷಿ ಕಾರ್ಮಿಕರ ತೀವ್ರ ಕೊರತೆ ಒಂದೆಡೆಯಾದರೆ, ಇನ್ನೊಂದೆಡೆ ಟ್ರ್ಯಾಕ್ಟರ್ ಗಳ ವೆಚ್ಚವನ್ನು ನಿಭಾಯಿಸುವ ಶಕ್ತಿ ಮಧ್ಯಮ ವರ್ಗದ ರೈತ ಸಂಕುಲಕ್ಕೆ ಸಾಧ್ಯವಾಗುತ್ತಿಲ್ಲ. ಈ ಪ್ರಮುಖ ಅಂಶಗಳನ್ನು ಗಮನದಲ್ಲಿರಿಸಿಕೊಂಡು ಈ ವಿದ್ಯಾರ್ಥಿಗಳು ಅಲ್ಲಿಯ ವಿಜ್ಞಾನ ಅಧ್ಯಾಪಕಿ ಶಶಿಕಲಾ ಬಡಿಗೇರ ಅವರ ಮಾರ್ಗದರ್ಶನದಲ್ಲಿ ಕೃಷಿ ಯಂತ್ರ ಅಭಿವೃದ್ಧಿ ಪಡಿಸಿದ್ದು, ಪ್ರಸ್ತುತ ಇದಕ್ಕೆ ರಾಷ್ಟ್ರ ಮಟ್ಟದ ಪ್ರಶಸ್ತಿಯ ಗರಿ ಪ್ರಾಪ್ತವಾಗಿದೆ.
ಭೀಮ ಸಲಗ: ಶಾಲೆಯ ವಿದ್ಯಾರ್ಥಿ ದೇವೇಂದ್ರ ಬಿರಾದಾರ ತನ್ನ ಸಹಪಾಠಿ ಕಾರ್ತಿಕ್ ನರಳೆ ಜೊತೆಗೂಡಿ ಅನ್ವೇಷಣೆ ಮಾಡಿರುವ ಕೃಷಿ ಯಂತ್ರ ಕ್ರಾಪ್ ಕಟರ್ ಗೆ ಭೀಮ ಸಲಗ ಎಂದು ಹೆಸರಿಸಿದ್ದು, ಇದು ರೈತರಿಗೆ ಬಹುಪಯೋಗಿ ಉಪಕರಣವಾಗಿದೆ. ಕೃಷಿ ಭೂಮಿಯಲ್ಲಿ ಇದೊಂದೇ ಉಪಕರಣ ಬಳಕೆ ಮಾಡಿ ವಿವಿಧ ಕಾರ್ಯಗಳನ್ನು ಮಾಡಬಹುದಾಗಿದೆ. ಗಳೆ ಹೊಡೆಯುವುದು, ಕಳೆ ತೆಗೆಯುವುದು, ಬೀಜ ಬಿತ್ತನೆ, ನೀರು ಮತ್ತು ಕೀಟನಾಶಕ ಸಿಂಪರಣೆ, ಬೆಳೆ ಕಟಾವು, ಹುಲ್ಲು ಕತ್ತರಿಸುವುದು (ಗ್ರಾಸ್ ಕಟಿಂಗ್), ಹೂದೋಟದ ಬಾರ್ಡರ್ ಸಸಿಗಳ ಚೌಕಾಕಾರದ ಕಟಿಂಗ್ ಮಾಡಲು, ಮರದ ರೆಂಬೆ-ಕೊಂಬೆಗಳನ್ನು ಕತ್ತರಿಸುವುದು, ಲಿಂಬೆ ಸಸಿಯಂತಹ ಸಣ್ಣ ಸಸಿಗಳನ್ನು ನೆಡಲು ನೆಲ ಅಗೆಯುವುದು ಸೇರಿದಂತೆ ರೈತರು ತಮಗೆ ಸರಿಹೊಂದುವ ಸಾಗುವಳಿ ಕೆಲಸಗಳಿಗೆ ಈ ಉಪಕರಣವನ್ನು ವಿಭಿನ್ನ ನೆಲೆಗಳಲ್ಲಿ ಬಳಕೆ ಮಾಡಿಕೊಳ್ಳಬಹುದಾಗಿದೆ.
ಮೇಜರ್ ಅಭಿನಂದನೆ: ತಮ್ಮ ವಾಯವ್ಯ ಕರ್ನಾಟಕ ಬೆಳಗಾವಿ ವ್ಯಾಪ್ತಿಗೆ ಒಳಪಟ್ಟಿರುವ ಇಂಡಿ ತಾಲೂಕಿನ ನಾದ ಕೆ.ಡಿ. ಗ್ರಾಮದ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಇನ್ಸ್ಪೈರ್ ಅವಾರ್ಡ ಪಡೆದಿರುವುದಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತ ಮೇಜರ್ ಸಿದ್ಧಲಿಂಗಯ್ಯ ಹಿರೇಮಠ ಅವರು ವಿದ್ಯಾರ್ಥಿಗಳನ್ನು, ಮಾರ್ಗದರ್ಶನ ಮಾಡಿದ ವಿಜ್ಞಾನ ಶಿಕ್ಷಕಿಯನ್ನು ಹಾಗೂ ಶಾಲಾ ಮುಖ್ಯಾಧ್ಯಾಪಕರನ್ನು ಹಾರ್ದಿಕವಾಗಿ ಅಭಿನಂದಿಸಿದ್ದಾರೆ. ನಮ್ಮ ವಿಭಾಗದ ಪ್ರೌಢ ಶಾಲಾ ವಿದ್ಯಾರ್ಥಿಗಳ ಈ ಸಾಧನೆಯು ಭವಿಷ್ಯದಲ್ಲಿ ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ಹಾಗೂ ಕೃಷಿಯ ಹಲವಾರು ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಒದಗಿಸಬಲ್ಲದು. ಜತೆಗೆ ಅವರ ಈ ಸಾಧನೆ ಇತರೇ ಜಿಲ್ಲೆಗಳ ಎಲ್ಲಾ ವಿದ್ಯಾರ್ಥಿಗಳಿಗೂ ಸ್ಪೂರ್ತಿದಾಯಕವಾಗಿದೆ ಎಂದು ಶ್ಲಾಘಿಸಿದ್ದಾರೆ.
2019-20ನೇ ಶೈಕ್ಷಣಿಕ ವರ್ಷಕ್ಕಾಗಿ ಜರುಗಿದ ಸ್ಪರ್ಧೆಗಳು ಕೋವಿಡ್ ಲಾಕ್ಡೌನ್ ಕಾರಣದಿಂದಾಗಿ ನಡೆದಿರಲಿಲ್ಲ. ಪ್ರಸ್ತುತ ಆನ್ ಲೈನ್ ಮೂಲಕ ಈ ಸ್ಪರ್ಧೆಗಳನ್ನು ಜರುಗಿಸಿ ಫಲಿತಾಂಶವನ್ನು ಘೋಷಣೆ ಮಾಡಲಾಗಿದೆ. ರಾಷ್ಟ್ರಮಟ್ಟದ ಇನ್ಸ್ಪೈರ್ ಅವಾರ್ಡಗೆ ದೇಶದ ಒಟ್ಟು 60 ವಿಜ್ಞಾನ ಮಾದರಿಗಳು ಮಾತ್ರ ಆಯ್ಕೆ ಆಗಿದ್ದು, ಈ ಪೈಕಿ ಕರ್ನಾಟಕದಿಂದ ವಿಜಯಪೂರ ಸೇರಿದಂತೆ ಬೀದರ್, ದಾವಣಗೆರೆ, ರಾಮನಗರ ಹಾಗೂ ಬೆಂಗಳೂರು ಜಿಲ್ಲೆಯ 5 ಶಾಲೆಗಳ ಮಾದರಿಗಳು ಸ್ಥಾನ ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.