ಮೂಲಸೌಕರ್ಯಗಳ ಕೊರತೆ ಮತ್ತು ನವೀಕರಣ ಮಾಡದ ಕಾರಣ ಗಂಗಾವತಿಯ ಸಿಟಿ ಆಸ್ಪತ್ರೆ ಸೀಜ್
Team Udayavani, Sep 20, 2021, 7:46 PM IST
ಗಂಗಾವತಿ: ಮೂಲಸೌಕರ್ಯಗಳ ಕೊರತೆ ಮತ್ತು ಆಸ್ಪತ್ರೆಯನ್ನು ನವೀಕರಣ ಮಾಡದ ಕಾರಣ ಗಂಗಾವತಿ ನಗರದ ಕಂಪ್ಲಿ ರಸ್ತೆಯಲ್ಲಿರುವ ಸಿಟಿ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ ಸೀಜ್ ಮಾಡಿದೆ.
ವಲಯದ ಬಹುತೇಕ ರೋಗಿಗಳ ಶಸ್ತ್ರಚಿಕಿತ್ಸೆ ಮತ್ತು ಚಿಕಿತ್ಸೆಯನ್ನು ನೀಡಿದ ಹೆಸರಿನಲ್ಲಿ ಪ್ರವೀಣ್ ಎನ್ನುವ ವೈದ್ಯರ ಹೆಸರಿದ್ದು ಇವರು ಸರ್ಕಾರಿ ವೈದ್ಯರಾಗಿರುವ ಕಾರಣ ಮತ್ತು ಸಿಟಿ ಆಸ್ಪತ್ರೆಯಲ್ಲಿ ಸರಕಾರದ ನಿಯಮಾವಳಿ ಪ್ರಕಾರ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ವಿಫಲವಾಗಿದೆ .ಈಗಾಗಲೇ ಮೂಲ ಸೌಕರ್ಯ ಕಲ್ಪಿಸುವಂತೆ ಹಲವು ಬಾರಿ ನೋಟಿಸ್ ನೀಡಿದ್ದರೂ ಸಿಟಿ ಆಸ್ಪತ್ರೆ ವೈದ್ಯರು ನಿರ್ಲಕ್ಷ್ಯ ವಹಿಸಿದ್ದರು ಮತ್ತು ಜುಲೈ 2021 ಕ್ಕೆ ಆಸ್ಪತ್ರೆಯ ನವೀಕರಣದ ಸಮಯ ಮುಗಿದಿದ್ದು ನವೀಕರಣ ಇಲ್ಲದೆ ಆಸ್ಪತ್ರೆಯನ್ನು ನಡೆಸಲಾಗುತ್ತಿತ್ತು. ಆನ್ ಲೈನ್ ಮೂಲಕ ನವೀಕರಣಕ್ಕಾಗಿ ಆಸ್ಪತ್ರೆಯವರು ಅರ್ಜಿ ಸಲ್ಲಿಸಿದ್ದು ಜಿಲ್ಲಾಡಳಿತ ಈ ಆಸ್ಪತ್ರೆಯನ್ನು ಶಾಶ್ವತವಾಗಿ ಮುಚ್ಚುವಂತೆ ತಾಲ್ಲೂಕು ಆಡಳಿತಕ್ಕೆ ಮತ್ತು ಆರೋಗ್ಯ ಇಲಾಖೆಯ ತಾಲ್ಲೂಕು ಅಧಿಕಾರಿಗೆ ನೋಟಿಸ್ ನೀಡಿತ್ತು .
ಸೋಮವಾರ ತಾಲ್ಲೂಕು ಆರೋಗ್ಯಾಧಿಕಾರಿ ಡಾಕ್ಟರ್ ರಾಘವೇಂದ್ರ ತಹಸೀಲ್ದಾರ್ ಯು ನಾಗರಾಜ ನೇತೃತ್ವದ ತಾಲ್ಲೂಕು ಆಡಳಿತದ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಗೆ ಬೀಗ ಹಾಕಿ ಸೀಲ್ ಮಾಡಿದ್ದಾರೆ.
ಈ ಸಂದರ್ಭದಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಡಾ ರಾಘವೇಂದ್ರ ಉದಯವಾಣಿ ಜತೆ ಮಾತನಾಡಿ ಜಿಲ್ಲಾಡಳಿತದ ಸೂಚನೆ ಮೇರೆಗೆ ನವೀಕರಣ ಮಾಡದೇ ಇರುವ ಮತ್ತು ಮೂಲ ಸೌಕರ್ಯಗಳನ್ನು ಕಲ್ಪಿಸುವಲ್ಲಿ ವಿಫಲವಾದ ಸಿಟಿ ಆಸ್ಪತ್ರೆಯನ್ನು ಬೀಗ ಹಾಕಿ ಸೀಲ್ ಮಾಡಲಾಗಿದೆ.ಇಲ್ಲಿದ್ದ ರೋಗಿಗಳನ್ನು ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ .ಆಸ್ಪತ್ರೆಗೆ ಬೀಗ ಹಾಕಿದ ಬಗ್ಗೆ ಮುಂದಿನ ಕ್ರಮಕ್ಕಾಗಿ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ
ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು
Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.