ವೃತ್ತಿಪರ ವಿದ್ಯಾರ್ಥಿಗಳಿಗೆ ಶುಲ್ಕ ಮನ್ನಾ
Team Udayavani, Sep 21, 2021, 6:51 AM IST
ಚೆನ್ನೈ: ವೃತ್ತಿಪರ ಕೋರ್ಸ್ಗಳ ವಿದ್ಯಾರ್ಥಿಗಳಿಗೆ ತಮಿಳುನಾಡು ಸರಕಾರ ಬಂಪರ್ ಗಿಫ್ಟ್ ಘೋಷಿಸಿದೆ. ಸರ್ಕಾರಿ ಶಾಲೆಗಳಲ್ಲಿ ಓದಿದವರಿಗೆ ಇರುವ ಶೇ. 7.5ರಷ್ಟು ಮೀಸಲಾತಿ ಅನ್ವಯ ವಿವಿಧ ವೃತ್ತಿಪರ ಕೋರ್ಸ್ಗಳಿಗೆ ಸೇರ್ಪಡೆಗೊಂಡಿರುವ ವಿದ್ಯಾರ್ಥಿಗಳ ಶಿಕ್ಷಣ ವೆಚ್ಚವನ್ನು ರಾಜ್ಯ ಸರಕಾರವೇ ಭರಿಸುವುದಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಘೋಷಿಸಿದ್ದಾರೆ.
ಅಣ್ಣಾ ವಿವಿಯ ವಿವಿಧ ವೃತ್ತಿಪರ ಕೋರ್ಸ್ಗಳಿಗೆ ಸರ್ಕಾರಿ ಶಾಲೆ ಕೋಟಾದಡಿ ದಾಖಲಾಗಿರುವ ವಿದ್ಯಾರ್ಥಿಗಳಿಗೆ “ಸೀಟು ಹಂಚಿಕೆ ಪ್ರಮಾಣ ಪತ್ರ’ವನ್ನು ವಿತರಿಸಿ ಮಾತನಾಡಿದ ಸ್ಟಾಲಿನ್, ವಿದ್ಯಾರ್ಥಿಗಳ ಕೌನ್ಸೆಲಿಂಗ್, ಟ್ಯೂಷನ್, ಹಾಸ್ಟೆಲ್ ಶುಲ್ಕಗಳನ್ನು ಸರಕಾರವೇ ಭರಸಲಿದೆ ಎಂದಿದ್ದಾರೆ. ಇದರಿಂದ, 10,350 ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ ಎಂದು ಹೇಳಲಾಗಿದೆ.
ಸದ್ಯದಲ್ಲೇ ಅವರ ತರಗತಿಗಳು ಆರಂಭಗೊಳ್ಳಲಿವೆ. ಇದಲ್ಲದೆ, ಸದ್ಯದಲ್ಲೇ 350 ವಿದ್ಯಾರ್ಥಿಗಳು ಕೃಷಿ, ಮೀನು ಸಾಕಾಣಿಕೆ ಹಾಗೂ ಕಾನೂನು ವ್ಯಾಸಂಗಕ್ಕೆ ಇದೇ ಕೋಟಾದಡಿ ಸೇರಲಿದ್ದಾರೆ. ಇವರೆಲ್ಲರಿಗೂ ಸರಕಾರದ ಸವಲ ತ್ತಿನಿಂದ ಪ್ರಯೋಜನವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.