ಅ. 2ರಿಂದ ಕೇಂದ್ರದಿಂದ ದೂರುಗಳ ವಿಲೇವಾರಿ
Team Udayavani, Sep 21, 2021, 7:20 AM IST
ಹೊಸದಿಲ್ಲಿ: ಪ್ರಧಾನಿ ಮೋದಿಯವರು ಪ್ರಸಕ್ತ ವರ್ಷದ ಗಾಂಧಿ ಜಯಂತಿ, ಅ. 2ರಿಂದ ಒಂದು ತಿಂಗಳ ಒಳಗೆ ಕೇಂದ್ರದ ಎಲ್ಲ ಸಚಿವಾಲಯಗಳಲ್ಲಿ ಬಾಕಿ ಉಳಿದಿರುವ ದೂರುಗಳನ್ನು ಇತ್ಯರ್ಥಗೊಳಿಸಲು ಮುಂದಾಗಿದ್ದಾರೆ.
ಸಂಸತ್ ಸದಸ್ಯರು, ರಾಜ್ಯ ಸರಕಾರ ಗಳಿಂದ ದೂರು ವಿಲೇವಾರಿ, ಸಂಸದೀಯ ಸಮಿತಿ ಗಳು ನೀಡಿದ ಭರವಸೆಗಳ ಬಾಕಿ ಅನುಷ್ಠಾನ, ಸಾರ್ವಜನಿಕರು ಸಲ್ಲಿಸಿರುವ ದೂರುಗಳನ್ನು ಇತ್ಯರ್ಥ ಗೊಳಿಸಲು ವಿಶೇಷ ಆಂದೋಲನ ನಡೆಸಲು ನಿರ್ಧರಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಎಲ್ಲ ಸಚಿವಾಲಯಗಳ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಆಂದೋಲನವನ್ನು ಯಶಸ್ವಿಗೊಳಿಸಲು ಅಗತ್ಯ ಕ್ರಮಗಳನ್ನುಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.
ಕೇಂದ್ರ ಸರಕಾರದ ಸಿಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಸಚಿವಾಲಯದ ಮೂಲಕ ಸರಕಾರಕ್ಕೆ ಸಲ್ಲಿಕೆಯಾಗುವ ಸಲಹೆ-ದೂರುಗಳನ್ನು ಇತ್ಯರ್ಥಗೊಳಿಸಲಾಗುತ್ತದೆ. ಈ ಉದ್ದೇಶಕ್ಕಾಗಿ ಸೆ. 13ರಿಂದಲೇ ಎಲ್ಲ ಸಚಿವಾಲಯಗಳಲ್ಲಿ ಯಾವ ರೀತಿಯ ದೂರುಗಳನ್ನು ಇತ್ಯರ್ಥಪಡಿಸಬೇಕು ಎಂಬ ಬಗ್ಗೆ ಪರಾಮರ್ಶೆ ನಡೆಯುತ್ತಿದೆ. ಸೆ. 29ರ ವರೆಗೆ ಈ ಪ್ರಕ್ರಿಯೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.