ಸಾರ್ವಜನಿಕ ದೂರುಗಳ ವಿಲೇವಾರಿಯಲ್ಲಿ ಅಸಡ್ಡೆ ಬೇಡ 


Team Udayavani, Sep 22, 2021, 6:00 AM IST

ಸಾರ್ವಜನಿಕ ದೂರುಗಳ ವಿಲೇವಾರಿಯಲ್ಲಿ ಅಸಡ್ಡೆ ಬೇಡ 

ಕೇಂದ್ರ ಸರಕಾರ ಗಾಂಧಿ ಜಯಂತಿಯಿಂದ ತಿಂಗಳ ಕಾಲ ಎಲ್ಲ ಸಚಿ ವಾಲಯಗಳು ಮತ್ತು ಇಲಾಖೆಗಳಲ್ಲಿ ಬಾಕಿ ಇರುವ ದೂರುಗಳನ್ನು ವಿಲೇವಾರಿಗೊಳಿಸಲು ಅಭಿಯಾನವೊಂದನ್ನು ಹಮ್ಮಿಕೊಳ್ಳಲು ನಿರ್ಧರಿಸಿದೆ. ಈ ಅಭಿಯಾನದಡಿಯಲ್ಲಿ  ಸಂಸತ್‌ ಸದಸ್ಯರು, ರಾಜ್ಯ ಸರಕಾರಗಳಿಂದ ದೂರು ವಿಲೇವಾರಿ, ಸಂಸದೀಯ ಸಮಿತಿಗಳು ನೀಡಿದ ಭರವಸೆಗಳ ಬಾಕಿ ಅನುಷ್ಠಾನ ಹಾಗೂ ಸಾರ್ವಜನಿಕ ದೂರುಗಳನ್ನು ಕೂಡ ಆದ್ಯತೆಯ ಮೇಲೆ ಇತ್ಯರ್ಥಗೊಳಿಸಲು ಉದ್ದೇಶಿಸಿದೆ.

ಸಾರ್ವಜನಿಕ ದೂರುಗಳಿಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರಕಾರಗಳಲ್ಲಿ ಪ್ರತ್ಯೇಕ ಸಚಿವಾಲಯ ಅಥವಾ ವ್ಯವಸ್ಥೆಗಳಿದ್ದರೂ ದೂರುಗಳಿಗೆ ಕನಿಷ್ಠ ಸ್ಪಂದನೆಯೂ ಲಭಿಸುತ್ತಿಲ್ಲ ಎಂಬ ಆರೋಪ ಸಾರ್ವಜನಿಕ ರದ್ದಾಗಿದೆ. ಇನ್ನು ಈ ದೂರುಗಳ ವಿಲೇವಾರಿ, ಇತ್ಯರ್ಥಕ್ಕೆ ಸಂಬಂಧಿಸಿದಂತೆ ಸರಕಾರ ಹಲವಾರು ಸಮಿತಿಗಳನ್ನು ರಚಿಸಿ  ವರದಿಗಳನ್ನು ಪಡೆದು ಕೊಂಡಿದ್ದರೂ ಕಾರ್ಯಯೋಗ್ಯವಾದ ಶಿಫಾರಸುಗಳನ್ನು ಅನುಷ್ಠಾನ ಗೊಳಿಸಲು ಕೇಂದ್ರ ಮತ್ತು ರಾಜ್ಯ ಸರಕಾರಗಳು ನಿರಾಸಕ್ತಿ ವಹಿಸಿದುದರಿಂ ದಾಗಿ ಭಾರೀ ಸಂಖ್ಯೆಯ ದೂರುಗಳು ಪ್ರತಿಯೊಂದೂ ಸಚಿವಾಲಯ ಮತ್ತು ಇಲಾಖೆಗಳಲ್ಲಿ ರಾಶಿಬಿದ್ದಿವೆ. ಕಳೆದೆರಡು ವರ್ಷಗಳಿಂದೀಚೆಗೆ ದೇಶಾದ್ಯಂತ ಕೊರೊನಾ ವ್ಯಾಪಿಸಿದಾಗಿನಿಂದ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ ಈ ದೂರುಗಳನ್ನು ಕೇಳುವವರೇ ಇಲ್ಲದಂತಾಗಿದೆ.

ಕೆಲವೊಂದು ವಿಷಯಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ವಿವಿಧ ಸಚಿವಾಲಯ ಮತ್ತು ಇಲಾಖೆಗಳಿಗೆ ಸ್ಪಷ್ಟನೆ ಅಥವಾ ಪರಿಹಾರ ಕೋರಿ ದೂರುಗಳನ್ನು ನೀಡುವುದು ಸಾಮಾನ್ಯ. ಇವುಗಳಲ್ಲಿ ಕೆಲವೊಂದು ಅತ್ಯಂತ ಮಹತ್ವದ ಮತ್ತು ತ್ವರಿತ ಉತ್ತರ ಬಯಸುವ ದೂರುಗಳಾಗಿರುತ್ತವೆ. ಈ ದೂರುಗಳ ವಿಲೇವಾರಿಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರ ಹೊಂದಿ ರುವ ನಿಯಮಾವಳಿಗಳಲ್ಲಿ ಕಾಲಮಿತಿಯನ್ನು ನಿಗದಿಪಡಿಸಲಾಗಿದೆಯಾದರೂ ಬಹುತೇಕ ಪ್ರಕರಣಗಳಲ್ಲಿ ಇದನ್ನು ಪಾಲಿಸಲಾಗುತ್ತಿಲ್ಲ.

ಇಂಥ ದೂರುಗಳ ವಿಲೇವಾರಿಯಲ್ಲಾಗುತ್ತಿರುವ ವಿಳಂಬವನ್ನು ಹೋಗಲಾಡಿಸಲು, ಪ್ರಕ್ರಿಯೆಯನ್ನು ತ್ವರಿತ ಮತ್ತು ಸರಳಗೊಳಿಸಲು ಕೇಂದ್ರ ಮತ್ತು ರಾಜ್ಯ ಸರಕಾರಗಳಿಂದ ನಿರಂತರ ಹೊಸ ಹೊಸ ಯೋಜನೆ, ವಿಧಾನ ಅನುಸರಿಸಲಾಗುತ್ತ ಬಂದಿದ್ದರೂ ಇವ್ಯಾವುವೂ ನಿರೀಕ್ಷಿತ ಯಶ ಸ್ಸನ್ನು ಕಂಡಿಲ್ಲ. ಸರಕಾರಿ ಕೆಲಸ ಕಾರ್ಯಗಳೆಲ್ಲವೂ ಇದೀಗ ಮೊಬೈಲ್‌ ಮೂಲಕ ಅಂಗೈಯಲ್ಲಿಯೇ ನಡೆಯುವಂತಾಗಿದ್ದರೂ ದೂರು ಗಳ ಇತ್ಯರ್ಥ ಮಾತ್ರ ಇನ್ನೂ ಆಮೆಗತಿಯಲ್ಲಿ ಸಾಗುತ್ತಿರುವುದು ತೀರಾ ವಿಪ ರ್ಯಾಸ.  ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಂಡಲ್ಲಿ ಇಂತಹ ವಿಳಂಬವನ್ನು ಸಾಕಷ್ಟು ಕಡಿಮೆಗೊಳಿಸಬಹುದಾಗಿದೆ. ಇವೆಲ್ಲದರ ಹಿನ್ನೆಲೆ ಯಲ್ಲಿ ಕೇಂದ್ರ ಸರಕಾರ ಇದೀಗ ದೂರುಗಳ ವಿಲೇವಾರಿಗೆ ಕಡತ ಯಜ್ಞದ ಮಾದರಿಯಲ್ಲಿ ಅಭಿಯಾನವನ್ನು ನಡೆಸಲು ನಿರ್ಧರಿಸಿರುವುದು ಸ್ವಾಗತಾರ್ಹ. ಆದರೆ ಈ ಅಭಿಯಾನವೂ ಕೇವಲ ಆರಂಭಶೂರತನಕ್ಕೆ ಸೀಮಿತವಾಗದಿರಲಿ. ವಿಲೇವಾರಿ ಪ್ರಕ್ರಿಯೆ ನಿರಂತರವಾಗಿ ನಡೆಯು ವಂತಾದಲ್ಲಿ ಈ ಅಭಿಯಾನದ ನೈಜ ಉದ್ದೇಶ ಈಡೇರಿದಂತಾಗಲಿದೆ. ಈ ನಿಟ್ಟಿನಲ್ಲಿ ಸರಕಾರದ ಎಲ್ಲ ಇಲಾಖೆಗಳ ಅಧಿಕಾರಿಗಳ ಇಚ್ಛಾಶಕ್ತಿ ಮತ್ತು ಬದ್ಧತೆ ಪ್ರಮುಖ. ಇಷ್ಟು ಮಾತ್ರವಲ್ಲದೆ ಸಾರ್ವಜನಿಕರೂ ಕೂಡ ಸಣ್ಣಪುಟ್ಟ ವಿಚಾರಗಳಿಗೆಲ್ಲ ದೂರು ನೀಡುವ ಚಾಳಿಯಿಂದ ಹೊರಬಂದು ಜನಹಿತಕ್ಕೆ ಪೂರಕವಾದ ದೂರುಗಳನ್ನು ಮಾತ್ರವೇ ಸಲ್ಲಿಸಿದಲ್ಲಿ ಅಧಿಕಾರಿಗಳ ಶ್ರಮ ಮತ್ತು ಸಮಯ ಎರಡೂ ಉಳಿತಾಯವಾಗಲು ಸಾಧ್ಯ.

ಟಾಪ್ ನ್ಯೂಸ್

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.