![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
Team Udayavani, Sep 22, 2021, 3:07 PM IST
ಬೆಳಗಾವಿ: ಅಥಣಿಯ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಹಾಗೂ ಕಚೇರಿಯ ಮ್ಯಾನೇಜರ್ ಇಬ್ಬರೂ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಭ್ರಷ್ಟಾಚಾರ ನಿರ್ಮೂಲನಾ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ.
ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಾಜೇಂದ್ರ ಇಂದ್ರಪ್ಪ ಪರಣಾಕರ ಹಾಗೂ ಮ್ಯಾನೇಜರ್ ದೀಪಕ ಕೃಷ್ಣಾಜಿ ಕುಲಕರ್ಣಿ ಇವರು ಗುತ್ತಿಗೆದಾರ ಒಬ್ಬರಿಂದ ರೂ. 68,000 ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಎಸಿಬಿಯಿಂದ ಇಬ್ಬರೂ ಅಧಿಕಾರಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.
ಇಲಾಖೆ ಜಲಜೀವನ ಮಿಷನ್ ಯೋಜನೆ ಅಡಿಯಲ್ಲಿ ಕಾಮಗಾರಿ ಗುತ್ತಿಗೆ ಪಡೆದ ಬೆಳಗಾವಿಯ ಗುತ್ತಿಗೆದಾರ ಒಬ್ಬರಿಂದ ಇಬ್ಬರೂ ಅಧಿಕಾರಿಗಳು ಶೇ.3 ರಷ್ಟು ಲಂಚದ ಬೇಡಿಕೆ ಇಟ್ಟಿದ್ದರು. ಈ ಕುರಿತಂತೆ ಗುತ್ತಿಗೆದಾರ ಎಸಿಬಿಗೆ ದೂರು ನೀಡಿದ್ದರು. ದೂರಿನ ಅನ್ವಯ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು.
ಇದನ್ನೂ ಓದಿ :ಮನೆ ನಿರ್ಮಾಣಕ್ಕೆ ಆಗ್ರಹಿಸಿ ಮಳೆಯನ್ನೂ ಲೆಕ್ಕಿಸದೇ ಡಿಸಿ ಕಛೇರಿ ಎದುರು ಮಹಿಳೆಯರ ಪ್ರತಿಭಟನೆ
ಎಸಿಬಿ ಎಸ್ಪಿ ಬಿ.ಎಸ್.ನ್ಯಾಮಗೌಡರ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಕರುಣಾಕರ ಶೆಟ್ಟಿ ನೇತೃತ್ವದಲ್ಲಿ ಇನ್ಸಪೆಕ್ಟರ್ ಗಳಾದ ಅಡಿವೇಶ ಗುದಿಗೊಪ್ಪ ಹಾಗೂ ಸುನಿಲಕುಮಾರ ಹಾಗೂ ಸಿಬ್ಬಂದಿ ದಾಳಿ ನಡೆಸಿದರು.
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ
You seem to have an Ad Blocker on.
To continue reading, please turn it off or whitelist Udayavani.