ಚಡ್ಡಿದೋಸ್ತ್ ಮೊಗದಲ್ಲಿ ನಗು


Team Udayavani, Sep 22, 2021, 5:58 PM IST

ಚಡ್ಡಿದೋಸ್ತ್ ಮೊಗದಲ್ಲಿ ನಗು

“ಚಡ್ಡಿದೋಸ್ತ್ ಕಡ್ಡಿ ಅಲ್ಲಾಡುಸ್ಬುಟ್ಟ ‘- ಈ ಚಿತ್ರ ಕಳೆದ ವಾರ ಬಿಡುಗಡೆಯಾಗಿತ್ತು. ಈಗ ಚಿತ್ರತಂಡದ ಮೊಗದಲ್ಲಿ ನಗು ಮೂಡಿದೆ. ಅದಕ್ಕೆ ಕಾರಣ ಚಿತ್ರಕ್ಕೆ ಸಿಗುತ್ತಿರುವ ಪ್ರತಿಕ್ರಿಯೆ. ಈ ಖುಷಿಯನ್ನು ಹಂಚಿಕೊಳ್ಳಲೆಂದು ಇತ್ತೀಚೆಗೆ ಚಿತ್ರತಂಡ ಮಾಧ್ಯಮದ ಮುಂದೆ ಬಂದಿತ್ತು.

ರಿಸ್ಕ್ ತೆಗೆದುಕೊಂಡು ರಿಲೀಸ್‌ ಮಾಡಿದ್ದಕ್ಕೂ ಒಳ್ಳೆಯ ಪ್ರತಿಕ್ರಿಯೆ ಬಂದಿದೆ. ಪ್ರೇಕ್ಷಕರು ತುಂಬಾ ಎಂಜಾಯ್‌ ಮಾಡುತ್ತಿದ್ದಾರೆ. ರಿಲೀಸ್‌ ಹಿಂದಿನ ವಾರ ಗಾಂಧಿನಗರಕ್ಕೆ ಹೋದಾಗ ಜನ ಕಡಿಮೆ ಇತ್ತು. ಶ್ರಮದ ಪ್ರತಿಫ‌ಲವಾಗಿ ರಿಲೀಸ್‌ ದಿನ ಕಿಕ್ಕಿರಿದು ತುಂಬಿತ್ತು. ಕಥೆಯೊಂದಿಗೆ ಜನರಿಗೆ
ಮೆಸೇಜ್‌ ತಲುಪಿಸಿದ್ದೇನೆ’ ಎನ್ನುವುದು ನಿರ್ದೇಶಕ ಕೃಷ್ಣ ಮಾತು.

ನಿರ್ಮಾಪಕ ಹಾಗೂ ಚಿತ್ರದಲ್ಲಿ ವಿಲನ್‌ ಆಗಿ ನಟಿಸಿದ ಸೆವೆನ್‌ ರಾಜ್‌ ಮಾತನಾಡಿ, “ನನ್ನ ಕನಸಿನ ಚಿತ್ರವಿದು. ಬಿಡುಗಡೆಯಾದ ಎಲ್ಲಾ ಚಿತ್ರಮಂದಿರಗಳಿಂತ ವೀರೇಶ ಚಿತ್ರಮಂದಿರದಲ್ಲಿ ಉತ್ತಮ ಕಲೆಕ್ಷನ್‌ ಬರ್ತಿದೆ. ಹಾಗಾಗಿ ನಾಳೆಯಿಂದ ನಮ್ಮ ಸಿನಿಮಾ ನೋಡಲು ಬರುವ ಕನ್ನಡ ಅಭಿಮಾನಿಗಳಿಗೆ ವೀರೇಶ್‌ ಚಿತ್ರಮಂದಿರದಲ್ಲಿ ಗೋಲ್ಡ್‌ ಕಾಯಿನ್‌ ಕೊಡಲಿದ್ದೇವೆ. ಪ್ರತಿ ಷೋ ನೋಡಲು ಬರುವ ಪ್ರೇಕ್ಷಕರನ್ನು ಡ್ರಾ ಮೂಲಕ ಆಯ್ಕೆ ಮಾಡಲಾಗುತ್ತದೆ. ಒಬ್ಬ ವಿಜೇತರಿಗೆ ಬಂಗಾರದ ನಾಣ್ಯದ ಬಹುಮಾನವಿರುತ್ತದೆ’ ಎಂದರು.

ಇದನ್ನೂ ಓದಿ:ಭೀಕರ ಕಾರು ಅಪಘಾತ: ಪ್ರಸಿದ್ಧ ಮರಾಠಿ ಚಿತ್ರನಟಿ ಈಶ್ವರಿ ದೇಶಪಾಂಡೆ ಸಾವು

“ನಮ್ಮದು ಕಲಾವಿದರ ಹಿನ್ನೆಲೆಯ ಕುಟುಂಬ. ಹುಟ್ಟಿ-ಬೆಳೆದಿದ್ದು ಎಲ್ಲವೂ ಬೆಂಗಳೂರಿನಲ್ಲಿ. ನಂತರ ಓದಿಗಾಗಿ ಚೆನ್ನೈನತ್ತ ಮುಖ ಮಾಡಬೇಕಾಯ್ತು. ಚೆನ್ನೈ ಡಿಪ್ಲೊಮೋ ಇನ್‌ ಪೆಂಟಿಂಗ್‌, ಚೆನ್ನೈನ ಕಾಲೇಜ್‌ ಆಫ್ ಆರ್ಟ್ಸ್ ಆ್ಯಂಡ್‌ ಕ್ರಾಫ್ ನಲ್ಲಿ ಡಿಪ್ಲೊಮೋ ಇನ್‌ ಪೈಂಟಿಂಗ್‌ನಲ್ಲಿ ಪದವಿ ಪಡೆದ ನಂತರ ಸಿನಿಮಾದ ಕಡೆಗೆ ಹೆಚ್ಚಿ ಆಸಕ್ತಿ ಬೆಳೆಯಿತು. ನನಗೆ ಸಿನಿಮಾರಂಗದಲ್ಲಿ ಒಳ್ಳೆಯ ವಿಲನ್‌ ಆಗಿ ಗುರುತಿಸಿಕೊಳ್ಳಬೇಕು ಎಂಬ ಕನಸಿದೆ. ಅದಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದ್ದೇನೆ. ಈಗಾಗಲೇ ಕನ್ನಡದ ಜೊತೆಗೆ ಬೇರೆ ಬೇರೆ ಭಾಷೆಗಳಲ್ಲೂ ಒಂದಷ್ಟು ಸಿನಿಮಾಗಳಲ್ಲಿ ವಿಲನ್‌ ಆಗಿ ನಟಿಸಲು ಆಫ‌ರ್ ಬರುತ್ತಿದೆ. ಮುಂದಿನ ದಿನಗಳಲ್ಲಿ ನನ್ನದೇ “ರೆಡ್‌ ಆ್ಯಂಡ್‌ ವೈಟ್‌’ ಬ್ಯಾನರ್‌ನಲ್ಲಿ ಹೊಸಥರದ ಸಿನಿಮಾಗಳನ್ನು ನಿರ್ಮಿಸುವುದರ ಜೊತೆಗೆ, ಡಿಫ‌ರೆಂಟ್‌ ಗೆಟಪ್‌ನಲ್ಲಿ ವಿಲನ್‌ ಆಗಿ ಆಡಿಯನ್ಸ್‌ ಮುಂದೆ ಬರುತ್ತೇನೆ’ ಎನ್ನುವುದು ಸೆವೆನ್‌ ರಾಜ್‌ ಮಾತು. ಚಿತ್ರದಲ್ಲಿ ನಟಿಸಿದ ಲೋಕೇಂದ್ರ ಸೂರ್ಯ, ನಾಯಕಿ ಗೌರಿ ತಮ್ಮ ಅನುಭವ ಹಂಚಿಕೊಂಡರು. ­

ಟಾಪ್ ನ್ಯೂಸ್

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipur: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

DK-Shivakumar

Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್‌

MNG-hosp

Mangaluru: ವೆನ್ಲಾಕ್‌ ಆಸ್ಪತ್ರೆ 10 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ: ಸಚಿವ ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kiran Raj will be a superhero in next film

Kiran Raj: ಸೂಪರ್‌ ಹೀರೋ ಆಗಲಿದ್ದಾರೆ ಕಿರಣ್‌ ರಾಜ್‌

Daali dhananjay starrer Zebra movie

Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್‌ ಸಾಥ್‌

priyanka upendra in life is beautiful movie

Priyanka Upendra: ಬ್ಯೂಟಿಫುಲ್‌ ಲೈಫ್‌ ನಲ್ಲಿ ಪ್ರಿಯಾಂಕಾ

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Gowri Shankara: ಸೆಟ್ಟೇರಿತು ಹೊಸಬರ ಗೌರಿ ಶಂಕರ

Gowri Shankara: ಸೆಟ್ಟೇರಿತು ಹೊಸಬರ ಗೌರಿ ಶಂಕರ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipur: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.