ಬಾನಂಗಳದಲ್ಲಿ ಇಂದು ಗೋಚರಿಸಲಿದೆ ವಿಶೇಷ ವಿದ್ಯಮಾನ “ಶರದ್ವಿಷುವ’
Team Udayavani, Sep 23, 2021, 6:30 AM IST
ಖಗೋಳ ವಿದ್ಯಮಾನಗಳು ಎಂದಾಕ್ಷಣ, ಅದು ರಾತ್ರಿ ಆಕಾಶಕ್ಕೆ ಮಾತ್ರ ಸೀಮಿತವಲ್ಲ, ಕೆಲವೊಂದು ವಿದ್ಯಮಾನಗಳನ್ನು ಹಗಲಿನ ಸಮಯ ದಲ್ಲಿಯೂ ನೋಡಿ ಆನಂದಿಸಬಹುದು. ಅಂತಹ ಒಂದು ವಿಶೇಷ ವಿದ್ಯ ಮಾನ ಶರದ್ವಿಷುವ. ಪ್ರತೀ ವರ್ಷ ನಡೆ ಯುವ ಭೂಮಿ- ಸೂರ್ಯನ ಬಂಧನ ದಿಂದ ಸಂಭವಿಸುವ ಈ ವಿದ್ಯಮಾನ ಈ ಬಾರಿ ಸೆ. 23ರಂದು ಸಂಭವಿಸಲಿದೆ.
ವಿಷುವತ್ ಸಂಕ್ರಾಂತಿ ಒಂದು ವಿಶೇಷ ಖಗೋಳ ವಿದ್ಯ ಮಾನವಾಗಿದ್ದು, ಈ ದಿನ ಭೂಮಿಯ ಮೇಲೆ ಹಗಲು ಹಾಗೂ ರಾತ್ರಿಯ ಅವಧಿ ಸಮನಾಗಿರುತ್ತದೆ. ವರ್ಷ ಕ್ಕೆರಡು ಬಾರಿ ಮಾರ್ಚ್ ಮತ್ತು ಸೆಪ್ಟಂಬರ್‌ನಲ್ಲಿ ಈ ವಿದ್ಯಮಾನ ಸಂಭ ವಿಸುತ್ತದೆ. ವಿಷುವತ್ ಸಂಕ್ರಾಂತಿಯಂದು ಸೂರ್ಯನು ನಿಖರವಾಗಿ ಪೂರ್ವ ದಿಕ್ಕಿನಲ್ಲಿ ಉದಯಿಸಿ, ಪಶ್ಚಿಮ ದಿಕ್ಕಿನಲ್ಲಿ ಅಸ್ತವಾಗುತ್ತಾನೆ. ಈ ದಿನ ಸೂರ್ಯನ ಬೆಳಕು ಭೂಮಿಯ ಸಮ ಭಾಜಕ ವೃತ್ತದ ಮೇಲೆ ನೇರವಾಗಿ ಬೀಳುತ್ತದೆ.
ಶರದ್ವಿಷುವ ಸಂಕ್ರಾಂತಿ ದಿನದಂದು, ಸೂರ್ಯನು ಉತ್ತರ ದಿಕ್ಕಿನಿಂದ ದಕ್ಷಿಣ ದಿಕ್ಕಿನೆಡೆಗೆ ಚಲಿಸಲು ಪ್ರಾರಂಭಿಸುವುದರಿಂದ, ಉತ್ತರ ಗೋಳಾರ್ಧದಲ್ಲಿ ಶರತ್‌ಋತು ಆರಂಭವಾಗುತ್ತದೆ. ಅಲ್ಲದೆ ಈ ದಿನ ಸೂರ್ಯನ ಕೇಂದ್ರ ಬಿಂದುವು ದಿಗಂತದ ಮೇಲೆ 12 ಗಂಟೆ, ದಿಗಂತದ ಕೆಳಗೆ 12 ಗಂಟೆಗಳ ಕಾಲ ಇರುತ್ತದೆ. ಆದರೆ ವಿಷುವತ್ ಸಂಕ್ರಾತಿಯ ದಿನದಂದು ಸಮಭಾಜಕ ವೃತ್ತದಲ್ಲಿ ಹಗಲು ಹಾಗೂ ರಾತ್ರಿ ಸಮಯವು ಸಮಾನವಾಗಿ ಇರುವುದಿಲ್ಲ. ಹಗಲಿನ ಅವಧಿಯು ರಾತ್ರಿಯ ಸಮಯಕ್ಕಿಂತ ಸ್ವಲ್ಪ ದೀರ್ಘವಾಗಿರುತ್ತದೆ. ಯಾಕೆಂದರೆ ದಿನದ ಅವಧಿಯು ಸೂರ್ಯನ ವೃತ್ತದ ಮೇಲು¤ದಿಯ ಉದಯ ಹಾಗೂ ಅಸ್ತದ ನಡುವಿನ ಅವಧಿಯಾಗಿರುತ್ತದೆ.
ಖಗೋಳ ಸಮಭಾಜಕ ವೃತ್ತವನ್ನು (ವಿಷುವದ್ವೃತ್ತ) ಕ್ರಾಂತಿವೃತ್ತವು ಎರಡು ಬಿಂದುಗಳಲ್ಲಿ ಛೇದಿಸುತ್ತದೆ. ಈ ಬಿಂದುಗಳೇ ವಿಷುವದ್ಬಿಂದು ಗಳು. ಈ ಬಿಂದುವನ್ನು ಈಶಾದಿ ಬಿಂದು ಎಂದು ಕರೆಯುತ್ತಾರೆ. ಭೂಮಿಯ ಅಕ್ಷದ ಅಪ್ರದಕ್ಷಿಣೆ ಯಿಂದಾಗಿ, ಈಗ ಈ ಬಿಂದುವು ಕನ್ಯಾ ನಕ್ಷತ್ರ ಪುಂಜವನ್ನು ತಲುಪಿದೆ. ಸೂರ್ಯನು ಈಶಾದಿ ಬಿಂದುವನ್ನು ಸಂಕ್ರಮಿಸಿ, ಪ್ರತಿದಿನ ಆಕಾಶದಲ್ಲಿ ದಕ್ಷಿಣದ ಕಡೆ ಚಲಿಸುವುದನ್ನು ನೋಡಬಹುದು. ವಿಶ್ವದಾದ್ಯಂತ ವಿಷುವತ್ ಸಂಕ್ರಾಂತಿಯನ್ನು ಸೆಪ್ಟಂಬರ್ ಈಕ್ವಿನಾಕ್ಸ್ ಎಂದು ಕರೆಯುತ್ತಾರೆ. ಭೂಗೋಳಾರ್ಧದ ಮೇಲ್ಭಾಗದವರು ಈ ದಿನವನ್ನು ಆಟಂನಲ್ ಈಕ್ವಿನಾಕ್ಸ್ ಎಂದೂ ಕರೆಯುತ್ತಾರೆ.
ಪ್ರಯೋಗಕ್ಕೆ ಅವಕಾಶ :
ವಿಷುವತ್ ದಿನವನ್ನು ಉಪಯೋಗಿಸಿಕೊಂಡು ನಾವಿರುವ ಸ್ಥಳದ ಅಕ್ಷಾಂಶವನ್ನು ಕಂಡು ಹಿಡಿಯಬಹುದು. ಈ ಪ್ರಯೋಗವನ್ನು ವಿದ್ಯಾರ್ಥಿಗಳು ಸುಲಭವಾಗಿ ಮಾಡಬಹುದು. ಮೇಲಿನಿಂದ ಕೆಳಕ್ಕೆ ಸಮಾನ ಗಾತ್ರ ಹೊಂದಿರುವ ವಸ್ತುವನ್ನು ನೆಲದ ಮೇಲೆ ನೇರವಾಗಿ ಇರಿಸಿ ಆ ವಸ್ತುವಿನ (ಉದಾ: ಮೇಣದ ಬತ್ತಿ) ಅತೀ ಸಣ್ಣ ನೆರಳಿನ ಉದ್ದವನ್ನು ಅಳೆಯುವ ಮೂಲಕ ನಮ್ಮ ನೆರಳನ್ನೂ ಅಳೆಯಬಹುದು. ವಸ್ತು ಹಾಗೂ ಅದರ ನೆರಳಿನಿಂದ ಉಂಟಾಗುವ ಲಂಬಕೋನ ತ್ರಿಭುಜದಲ್ಲಿ ವಸ್ತುವು ತ್ರಿಭುಜದ ಅಡಿಪಾಯವೆಂದು ಪರಿಗಣಿಸಿದರೆ, ಅದರ ನೆರಳು ತ್ರಿಭುಜದ ಅಭಿಮುಖ ಬಾಹು ಆಗಿರುತ್ತದೆ. ಈ ಎರಡು ಬಾಹುಗಳಿಂದಾದ ಕೋನವು ಸ್ಥಳದ ಅಕ್ಷಾಂಶವನ್ನು ನೀಡುತ್ತದೆ.
- ಅತುಲ್ ಭಟ್, ಉಡುಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
Tribute Dr.Singh: ಆರ್ಥಿಕ ಭಾಗ್ಯ ವಿಧಾತ…ಡಾ.ಮನಮೋಹನ್ ಸಿಂಗ್
Tribute Dr.Singh: ಡಾ.ಮನಮೋಹನ್ ಸಿಂಗ್ ಆಡಳಿತದ ಜನಪರ ಯೋಜನೆಗಳು
A.B.Vajpayee Birth Century: ಭವಿಷ್ಯದ ಭಾರತಕ್ಕೆ ಅಟಲ್ ಬಿಹಾರಿ ವಾಜಪೇಯಿ ಭದ್ರ ಬುನಾದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.