‘RSS ಕ್ಯಾನ್ಸರ್ ಇದ್ದಂತೆ’ ಎಂದ ಜಾವೇದ್ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ
Team Udayavani, Sep 23, 2021, 3:20 PM IST
ಮುಂಬೈ : ಆರ್‍ಎಸ್‍ಎಸ್ ವಿರುದ್ಧ ಹೇಳಿಕೆ ನೀಡಿದ ಆರೋಪದಲ್ಲಿ ಬಾಲಿವುಡ್ ಗೀತ ರಚನಾಕಾರ ಜಾವೇದ್ ಅಖ್ತರ್ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ವಕೀಲ ಸಂತೋಷ್ ದುಬೆ ಎಂಬುವವರು ಜಾವೇದ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
ವಕೀಲರೂ ಆಗಿರುವ ಮತ್ತೋರ್ವ ಆರ್‍ಎಸ್‍ಎಸ್ ಕಾರ್ಯಕರ್ತ ದೃಷ್ಟಿಮಾನ್ ಜೋಶಿ ಅವರು ಕ್ರಿಮಿನಲ್ ಅಖ್ತರ್ ದೂರು ನೀಡಿದ್ದಾರೆ. ‘ಸೆ.4ರಂದು ಜಾವೇದ್ ಅಖ್ತರ್ ಅವರು ಟಿವಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗ ಹಿಂದೂ ಸಂಘಟನೆಗಳನ್ನು ತಾಲಿಬಾನ್ಗೆ ಹೋಲಿಸಿದ್ದನ್ನು ನಾನು ಗಮನಿಸಿದ್ದೇನೆ. ಹಿಂದೂ ಧರ್ಮಕ್ಕಾಗಿ ಕೆಲಸ ಮಾಡುತ್ತಿರುವ ಸಂಘಟನೆಗಳ ಮಾನಹಾನಿ ಮಾಡುವ ಉದ್ದೇಶದಿಂದಲೇ ಜಾವೇದ್ ಅಖ್ತರ್ ಈ ರೀತಿ ಹೇಳಿಕೆಗಳನ್ನು ನೀಡಿದ್ದಾರೆ. ಆರ್‍ಎಸ್‍ಎಸ್ ಈ ಸಮಾಜದಲ್ಲಿ ಕ್ಯಾನ್ಸರ್ ಇದ್ದಂತೆ ಅಂತ ಅವರು ಹೇಳಿದ್ದಾರೆ. ಇದು ಪೂರ್ವನಿಯೋಜಿತ ಕೆಲಸ. ಆರ್ಎಸ್ಎಸ್ಗೆ ಸೇರುವವರನ್ನು ದಾರಿ ತಪ್ಪಿಸಲು ಇಂಥ ಹೇಳಿಕೆ ನೀಡಲಾಗಿದೆ’ ಎಂದು ದೂರಿನಲ್ಲಿ ಜೋಶಿ ಆರೋಪಿಸಿದ್ದಾರೆ.
‘ಯಾವುದೇ ಸಾಕ್ಷಿಗಳು ಇಲ್ಲದೇ ಆರ್‍ಎಸ್‍ಎಸ್ ಬಗ್ಗೆ ಜಾವೇದ್ ಅಖ್ತರ್ ಅವರು ಇಂಥ ಮಾತುಗಳನ್ನು ಆಡಿದ್ದಾರೆ. ಪ್ರಧಾನಮಂತ್ರಿ, ರಾಷ್ಟ್ರಪತಿ ಮತ್ತು ಕೇಂದ್ರದ ಅನೇಕ ಮಂತ್ರಿಗಳು ಆರ್‍ಎಸ್‍ಎಸ್ ಬೆಂಬಲಿಗರಾಗಿದ್ದಾರೆ. ಅಂಥ ಸಂಘಟನೆ ಬಗ್ಗೆ ಜಾವೇದ್ ಅಖ್ತರ್ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ’ ಎಂದು ದೃಷ್ಟಿಮಾನ್ ಜೋಶಿ ಹೇಳಿದ್ದಾರೆ. ಅ.30ರಂದು ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ
MUST WATCH
ಹೊಸ ಸೇರ್ಪಡೆ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.