ಲೋಕಕಲ್ಯಾಣಾರ್ಥ ಶತಚಂಡಿಕಾಯಾಗ ಆಯೋಜನೆ: ಪ್ರದೀಪ್‌ ಸಿ. ಶೆಟ್ಟಿ

ಬೊರಿವಲಿ ಜೈರಾಜ್‌ ನಗರದ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶತಚಂಡಿಕಾಯಾಗ

Team Udayavani, Sep 24, 2021, 1:42 PM IST

ಲೋಕಕಲ್ಯಾಣಾರ್ಥ ಶತಚಂಡಿಕಾಯಾಗ ಆಯೋಜನೆ: ಪ್ರದೀಪ್‌ ಸಿ. ಶೆಟ್ಟಿ

ಬೊರಿವಲಿ: ಬೊರಿವಲಿ ಪಶ್ಚಿಮದ ಜಯರಾಜ್‌ ನಗರದ ಪುಣ್ಯಕ್ಷೇತ್ರ ಮಹಿಷಮರ್ದಿನಿ ದೇವಸ್ಥಾನದಲ್ಲಿ ಆಡಳಿತ ಮಂಡಳಿ ವತಿಯಿಂದ ಬ್ರಹ್ಮಶ್ರೀ ಕೊಯ್ಯೂರು ನಂದಕುಮಾರ ತಂತ್ರಿಯವರ ನೇತೃತ್ವದಲ್ಲಿ ಸಕಲ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶತ ಚಂಡಿಕಾಯಾಗವು ಸೋಮವಾರ ಜರಗಿತು.

ಆಡಳಿತ ಮೊಕ್ತೇಸರ ಕಣಂಜಾರು ಕೊಳಕೆಬೈಲು ಪ್ರದೀಪ್‌ ಸಿ. ಶೆಟ್ಟಿ ಮಾತನಾಡಿ, ಸುವಾಸಿನಿ ಪೂಜೆ, ದಂಪತಿ ಪೂಜೆ, ಬ್ರಾಹ್ಮಣರಿಗೆ ಅನ್ನಸಂತರ್ಪಣೆ ಹಾಗೂ ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ಶತಚಂಡಿಕಾಯಾ ಗದ ವಿಶೇಷತೆಯಾಗಿದ್ದು, ಪ್ರಕೃತಿಯನ್ನು ಶುದ್ಧೀ ಕರಿಸುವ ಈ ಶತಚಂಡಿಕಾಯಾಗವು ಕ್ರಿಮಿ ಕೀಟಗಳನ್ನು ದೂರ ಮಾಡುವ ದೈವೀ ಸ್ವರೂಪ ಹೊಂದಿದೆ. ಕಳೆದ ಒಂದೂವರೆ ವರ್ಷದಿಂದ ದೇಶಾದ್ಯಂತ ಕೊರೊನಾ ಸಾಂಕ್ರಾಮಿಕದಿಂದ ಜನರು ಕಂಗೆಟ್ಟಿದ್ದು, ಅಪಾರ ಸಾವು-ನೋವು ಸಂಭವಿಸಿದೆ. ಜತೆಗೆ ಹಲವಾರು ಮಂದಿ ಉದ್ಯೋಗ-ವ್ಯವಹಾರ ಕಳೆದುಕೊಂಡಿದ್ದು, ಹಲವೆಡೆ ಆಮೆಗತಿಯಲ್ಲಿ ಸಾಗುತ್ತಿದೆ.

ಈ ನಿಟ್ಟಿನಲ್ಲಿ ಲೋಕಕಲ್ಯಾಣಾರ್ಥಕವಾಗಿ ಈ ಚಂಡಿಕಾ ಯಾಗವನ್ನು ಆಯೋಜಿಸಲಾಗಿದೆ. ದೇವಸ್ಥಾನದ ಆಡಳಿತ ಮಂಡಳಿ ಕಳೆದ ಒಂದೂವರೆ ವರ್ಷಗಳ ಹಿಂದೆ ಹರಕೆಯ ರೂಪದಲ್ಲಿ ಸಲ್ಲಿಸಲಾದ ಈ ಶತಚಂಡಿಕಾಯಾ ಗದ ಸಂಕಲ್ಪವು ಇಂದು ನೆರವೇರಿತು. ಕೋವಿಡ್‌ ಸಾಂಕ್ರಾಮಿಕ ದಿಂದ ಜನರು ಹಲವಾರು ರೀತಿಯ ತೊಂದರೆ ಅನುಭವಿಸಿದ್ದು, ಲಸಿಕೆ ಪಡೆದ ಎಲ್ಲ ಜನರಿಗೆ ಯಾವುದೇ ತೊಂದರೆಯಾಗದಂತೆ ಮತ್ತು ಎಲ್ಲರೂ ಯಥಾಸ್ಥಿತಿಯಲ್ಲಿ ಕಾರ್ಯ ನಿರ್ವಹಿಸುವಂತೆ ದೇವಿ ಮಹಿಷಮರ್ದಿ ನಿಯಲ್ಲಿ ಪ್ರಾರ್ಥಿಸಿ ದೃಢ ಸಂಕಲ್ಪದೊಂದಿಗೆ ಈ ಮಹಾ ಶತಚಂಡಿಕಾಯಾಗ ಆಯೋಜಿಸಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ:ತಂದೆಯಾದ ಖುಷಿಯಲ್ಲಿ ನಿಖಿಲ್| ಹೆಚ್‍ಡಿಕೆ ಮನೆಗೆ ಹೊಸ ಅತಿಥಿ ಆಗಮನ  

ಮಂದಿರದ ಸ್ಥಾಪಕ ವಂಶಸ್ಥ ಮೋಕ್ತೇಸರ ಕಲ್ಲಮುಂಡ್ಕೂರು ಹರಿಯಾಲ ಗುತ್ತು ಜಯರಾಜ ಶ್ರೀಧರ ಶೆಟ್ಟಿ ದಂಪತಿ, ಶಾಲಿನಿ ಪ್ರದೀಪ್‌ ಶೆಟ್ಟಿ, ಮೋಕ್ತೇಸರರಾದ ಜಯಪಾಲಿ ಅಶೋಕ್‌ ಶೆಟ್ಟಿ ಹಾಗೂ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ, ಪ್ರಸ್ತುತ ಸಮಿತಿ ಜತೆ ಕೋಶಾಧಿಕಾರಿ ಮುಂಡಪ್ಪ ಎಸ್‌. ಪಯ್ಯಡೆ, ಸಮಾಜ ಸೇವಕ ಡಾ| ವಿರಾರ್‌ ಶಂಕರ್‌ ಶೆಟ್ಟಿ , ಬಾಲಕೃಷ್ಣ ರೈ, ಬಂಟರ ಸಂಘ ಜೋಗೇಶ್ವರಿ-ದಹಿಸರ್‌ ಪ್ರಾದೇಶಿಕ ಸಮಿತಿಯ ಸಂಚಾಲಕ ವಿಜಯ್‌ ಆರ್‌. ಭಂಡಾರಿ, ಕಾರ್ಯಾಧ್ಯಕ್ಷ ನಿಟ್ಟೆ ಎಂ. ಜಿ. ಶೆಟ್ಟಿ , ಉಪಕಾರ್ಯಾಧ್ಯಕ್ಷ ಕೊಂಡಾಡಿ ಪ್ರೇಮ್‌ನಾಥ್‌ ಶೆಟ್ಟಿ, ನಿಕಟಪೂರ್ವ ಕಾರ್ಯಾಧ್ಯಕ್ಷ ರವೀಂದ್ರ ಎಸ್‌. ಶೆಟ್ಟಿ, ಜಗದೀಶ್‌ ಶೆಟ್ಟಿ, ಸುರೇಶ್‌ ಚೌಟ, ರವಿ ಶೆಟ್ಟಿ ವೆಜ್‌ ಸ್ಟ್ರೀಟ್‌, ಮಾಜಿ ನಗರ ಸೇವಕ ಶಿವಾನಂದ ಶೆಟ್ಟಿ , ದಿವಾಕರ್‌ ಮಾತ್ರೆ ಮತ್ತಿತರ ಗಣ್ಯರು ಹಾಗೂ ಪರಿಸರದ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಭಕ್ತರು ಉಪಸ್ಥಿತರಿದ್ದರು.

ದೇವಸ್ಥಾನದ ಅರ್ಚಕ ವೃಂದ ಹಾಗೂ ಬಿ. ವೆಂಕಟರಮಣ ತಂತ್ರಿ, ಮಹಿಷಮರ್ದಿನಿ ಆಡಳಿತ ಮಂಡಳಿ ಸದಸ್ಯರು ಮತ್ತು ಮಹಿಷಮರ್ದಿನಿ ಭಜನ ಮಂಡಳಿಯ ಸದಸ್ಯರು ಉಪಸ್ಥಿತಿಯಲ್ಲಿ ಕಾರ್ಯಕ್ರಮವು ಸರಕಾರದ ಕೋವಿಡ್‌ ನಿಯಮದ ಕಟ್ಟುನಿಟ್ಟಿನ ಪಾಲನೆಯೊಂದಿಗೆ ಜರಗಿತು. ಕಾರ್ಯಯಕ್ರಮದಲ್ಲಿ ಭಕ್ತರಿಗೆ ಅನ್ನಸಂತರ್ಪಣೆ ಆಯೋಜಿಸಲಾಗಿತ್ತು.

ಚಿತ್ರ-ವರದಿ: ರಮೇಶ್‌ ಉದ್ಯಾವರ್‌

ಟಾಪ್ ನ್ಯೂಸ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

1(1

Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್‌ ದೀಪಗಳಿಂದ ಶೃಂಗಾರ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.