10 ದಿನದಲ್ಲಿ ಕಲ್ಯಾಣ ಕರ್ನಾಟಕ ಮಂಡಳಿ: ಬಸವರಾಜ ಬೊಮ್ಮಾಯಿ
ಶೀಘ್ರ ಕಾಯಂ ಕಾರ್ಯದರ್ಶಿ ನೇಮಕ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ
Team Udayavani, Sep 24, 2021, 3:47 PM IST
ವಿಧಾನಸಭೆ: ಮುಂದಿನ 10 ದಿನದಲ್ಲಿ ಕಲ್ಯಾಣ ಕರ್ನಾಟಕ ಮಂಡಳಿ ರಚನೆ ಮಾಡಿ, ಕಾಯಂ ಕಾರ್ಯದರ್ಶಿ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕುರಿತು ನಡೆದ ಚರ್ಚೆಗೆ ಉತ್ತರಿಸಿ, ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಬದ್ಧವಾಗಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಪ್ರಸ್ತುತ ವರ್ಷದಲ್ಲಿ 1,500 ಕೋಟಿ ನೀಡಲಾಗುವುದು.
ಕಳೆದ ವರ್ಷದ ಬಾಕಿ 500 ಕೋಟಿ ಇದೆ. ಒಟ್ಟು ಎರಡು ಸಾವಿರ ರೂ. ಹಣ ಖರ್ಚು ಮಾಡಿದರೆ, ಹೆಚ್ಚುವರಿಯಾಗಿ 1500 ಕೋಟಿ ಹಣ ನೀಡಲಾಗುವುದು ಎಂದು ಹೇಳಿದರು.
ಕೋವಿಡ್ ಕಾರಣದಿಂದ ನೇಮಕಾತಿಗೆ ಇರುವ ನಿರ್ಬಂಧ ತೆರವುಗೊಳಿಸಿ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು. ತಕ್ಷಣ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ, ಅಗತ್ಯ ಹುದ್ದೆಗಳ ಸೃಷ್ಠಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಇದನ್ನೂ ಓದಿ:ದಾಂಪತ್ಯ ಬಿರುಕು ಸುದ್ದಿಯಿಂದ ನೋವಾಗಿದೆ : ನಟ ನಾಗಚೈತನ್ಯ
ಬೆಂಗಳೂರಿನಲ್ಲಿರುವ 371ಜೆ ಕೇಂದ್ರವನ್ನು ಕಲಬುರ್ಗಿಗೆ ಸ್ಥಳಾಂತರ ಮಾಡಲಾಗುವುದು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಒಂದು ಜವಳಿ ಪಾರ್ಕ್, ಐಟಿ ಪಾರ್ಕ್ ಬಂದಿದೆ. ಆದಷ್ಟು ಬೇಗ ಈ ಭಾಗದಲ್ಲಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳ ಲಾಗುವುದು. ಕಲ್ಯಾಣ ಕರ್ನಾಟಕ ಭಾಗದ ನೀರಾವರಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲು ಆ ಭಾಗದ ಅಧಿಕಾರಿಗಳ ಸಭೆ ಕರೆಯಲಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಆತ್ಮವಿಶ್ವಾಸ ಬರುವಂತೆ ನೋಡಿಕೊಳ್ಳುವುದಾಗಿ ಹೇಳಿದರು.
ಅವ್ಯವಹಾರ ತನಿಖೆ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ರಚನೆ ಮಾಡಿರುವ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘ ನಿಯಮ ಮೀರಿ ಹಣ ವ್ಯ¿å ಮಾಡಿದ್ದರೆ ಸೂಕ್ತ ತನಿಖೆ ನಡೆಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು. ಈ ಬಗ್ಗೆ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಚರ್ಚೆ ವೇಳೆ ಸದನದ ಗಮನಸೆಳೆದಿದ್ದರು.
ಸರ್ಕಾರದ ಪರವಾಗಿ ಉತ್ತರ ನೀಡಿ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘದಿಂದ ಪಾರದರ್ಶಕ ಕೆಲಸವಾಗು ತ್ತಿಲ್ಲ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಆ ಭಾಗದ ಎಲ್ಲ ಶಾಸಕರೊಂದಿಗೆ ಸಭೆ ನಡೆಸಿ ಯೋಜ ನೆಗಳನ್ನು ಅನುಷ್ಠಾನಗೊಳಿಸುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.