27ರಂದು ಕರ್ನಾಟಕ ಬಂದ್‌ಗೆ ನಿರ್ಧಾರ

ಕೇಂದ್ರ ಸರ್ಕಾರ ಸ್ಪಂದಿಸದಿದ್ದರೆ ನ.26ರಂದು ದೆಹಲಿಯಲ್ಲಿ ರೈತರ ಸಮಾವೇಶ: ಕುರುಬೂರು

Team Udayavani, Sep 24, 2021, 5:29 PM IST

23-dvg-16

ದಾವಣಗೆರೆ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆ ರದ್ಧುಪಡಿಸುವುದು ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಂಯುಕ್ತ ಕಿಸಾನ್‌ ಮೋರ್ಚಾ ಕರೆ ನೀಡಿರುವ ಭಾರತ್‌ ಬಂದ್‌ಗೆ ಬೆಂಬಲವಾಗಿ ಸೆ.27 ರಂದು ಕರ್ನಾಟಕ ಬಂದ್‌ ನಡೆಸಲಾಗುವುದು ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗೆ ಮರಣ ಶಾಸನವಾಗಿರುವ ಮೂರು ಕೃಷಿ ಕಾಯ್ದೆ ರದ್ದುಪಡಿಸಬೇಕು. ಕನಿಷ್ಠ ಬೆಂಬಲ ಬೆಲೆ ಯೋಜನೆಗೆ ಕಾನೂನು ಮಾನ್ಯತೆ, ವಿದ್ಯುತ್‌ ಖಾಸಗೀಕರಣಕ್ಕೆ ತಡೆ, ಕಬ್ಬಿಗೆ ನಿಗದಿಪಡಿಸಿರುವ ಎಫ್‌ ಆರ್‌ಪಿ ದರ ಪುನರ್‌ ಪರಿಶೀಲನೆ ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಶಾಂತಿಯುತವಾಗಿ ಕರ್ನಾಟಕ ಬಂದ್‌ ಮಾಡಲಾಗುವುದು ಎಂದರು.

ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆಯಬೇಕು ಎಂದು ಒತ್ತಾಯಿಸಿ ಸಂಯುಕ್ತ ಕಿಸಾನ್‌ ಮೋರ್ಚಾ ನೇತೃತ್ವದಲ್ಲಿ 500ಕ್ಕೂ ಹೆಚ್ಚು ರೈತ ಸಂಘಟನೆಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿವೆ. 600ಕ್ಕೂ ಹೆಚ್ಚು ರೈತರು ಹುತಾತ್ಮರಾಗಿದ್ದಾರೆ. ಕೇಂದ್ರ ಸರ್ಕಾರ ರೈತರೊಂದಿಗೆ ಮಾತುಕತೆ ನಡೆಸುವ ಸೌಜನ್ಯವನ್ನೂ ತೋರುತ್ತಿಲ್ಲ ಎಂದು ದೂರಿದರು. ದೇಶದ ಅನ್ನದಾತರು ನಡೆಸುತ್ತಿರುವ ಹೋರಾಟ ನ. 22ಕ್ಕೆ ಒಂದು ವರ್ಷವಾಗುತ್ತಿದೆ. ಹೋರಾಟವನ್ನ ಇನ್ನೂ ಹೆಚ್ಚು ತೀವ್ರಗೊಳಿಸುವ ಉದ್ದೇಶದಿಂದ ಭಾರತ್‌ ಬಂದ್‌ ನಡೆಸಲಾಗುವುದು. ಸರ್ಕಾರ ಭಾರತ್‌ ಬಂದ್‌ ಗೂ ಸ್ಪಂದಿಸದೇ ಇದ್ದಲ್ಲಿ ನ. 26 ರಂದು ದೆಹಲಿಯಲ್ಲಿ ಕೋಟಿ ರೈತರ ಸಮಾವೇಶ ನಡೆಸಲಾಗುವುದು ಎಂದು ತಿಳಿಸಿದರು. ಕೇಂದ್ರ ಸರ್ಕಾರ ಪ್ರತಿ ಕ್ವಿಂಟಲ್‌ ಕಬ್ಬಿಗೆ 5 ರೂಪಾಯಿ ಹೆಚ್ಚಿಸಿದೆ. ಎರಡು ವರ್ಷಗಳ ನಂತರ 5 ರೂಪಾಯಿ ಹೆಚ್ಚಿಸುವಂತಹ ನಿರ್ಧಾರ ಮಾಡಿದೆ. ಸರ್ಕಾರ ಕಬ್ಬಿಗೆ ನಿಗದಿಪಡಿಸಿರುವ ಎಫ್‌ಆರ್‌ಪಿ ದರ ಪುನರ್‌ ಪರಿಶೀಲನೆ ಮಾಡಬೇಕು. ಇಲ್ಲವಾದಲ್ಲಿ ಸರ್ಕಾರ ನೀಡಿರುವ 5 ರೂಪಾಯಿ ನಮಗೆ ಬೇಡ. ನಾವೇ ಸರ್ಕಾರಕ್ಕೆ 50 ರೂಪಾಯಿ ಕೊಡುತ್ತೇವೆ ಎಂಬ ಘೋಷಣೆಯೊಂದಿಗೆ ಅ. 5 ರಂದು ವಿಧಾನ ಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.

ಪ್ರಧಾನಿ ನರೇಂದ್ರ ಮೋದಿಯವರು 2022ಕ್ಕೆ ರೈತರ ಆದಾಯ ದ್ವಿಗುಣ ಮಾಡಲಾಗುವುದು ಎಂದು ಹೇಳಿದ್ದಾರೆ. ಇನ್ನೂ ಮೂರು ತಿಂಗಳು ಮಾತ್ರ ಕಾಲಾವಕಾಶ ಇದೆ. ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಈಗ ಯೋಜನೆ ರೂಪಿಸಲಾಗುತ್ತಿದೆ ಎನ್ನುತ್ತಿದ್ದಾರೆ. ಇದೆಲ್ಲವೂ ರೈತರ ಕಣ್ಣೊರೆಸುವ ತಂತ್ರ ಎಂದು ಟàಕಿಸಿದರು. ವೀರನಗೌಡ ಪಾಟೀಲ್‌, ಪತ್ರಹಳ್ಳಿ ದೇವರಾಜ್‌, ಅಂಜಿನಪ್ಪ ಪೂಜಾರ್‌, ಹನುಮೇಗೌಡ, ಶಂಕರ್‌ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಶಾಂತಿಯುತ ಬಂದ್‌

ಸೆ.27ರ ಭಾರತ್‌ ಬಂದ್‌ ಹಿನ್ನೆಲೆಯಲ್ಲಿ ದಾವಣಗೆರೆ ಬಂದ್‌ ನಡೆಸುವ ಕುರಿತಂತೆ ರೈತ ಸಂಘ, ಕನ್ನಡ, ಪ್ರಗತಿಪರ ಸಂಘಟನೆಗಳೊಡನೆ ಚರ್ಚಿಸಿ, ರೂಪುರೇಷೆ ಸಿದ್ಧಪಡಿಸಲಾಗುವುದು. ಬಂದ್‌ ಶಾಂತಿಯುತವಾಗಿರಲಿದೆ ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯ ಉಪಾಧ್ಯಕ್ಷ ತೇಜಸ್ವಿ ಪಟೇಲ್‌ ತಿಳಿಸಿದರು. ಕೇಂದ್ರ ಸರ್ಕಾರಕ್ಕೆ ಕಾಯ್ದೆಗಳ ಬಗ್ಗೆ ಖಾತರಿ ಇದ್ದಲ್ಲಿ ಜಿಲ್ಲಾವಾರು ರೈತರೊಂದಿಗೆ ಸಂವಾದ ಸಭೆ ನಡೆಸಿ ಅನುಕೂಲಗಳ ಬಗ್ಗೆ ಮಾಹಿತಿ ನೀಡಲಿ. ನಾವು ರೈತರು ಕಾಯ್ದೆಗಳ ಅನಾನುಕೂಲಗಳ ಬಗ್ಗೆ ಸರ್ಕಾರಕ್ಕೆ ತಿಳಿಸುತ್ತೇವೆ. ಸರ್ಕಾರಕ್ಕೆ ರೈತರನ್ನು ಎದುರಿಸುವ ಶಕ್ತಿಯೇ ಇಲ್ಲ. ಒಂದೊಮ್ಮೆ ರೈತರ ಹೋರಾಟ ಪ್ರಾಯೋಜಕತ್ವದ್ದಾಗಿದ್ದರೆ ಕೃಷಿ ಸಚಿವರು ಯಾವ ಕಾರಣಕ್ಕೆ ಸಭೆ ನಡೆಸುತ್ತಿದ್ದರು, ಸರ್ಕಾರ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ತಾಕೀತು ಮಾಡಿದರು.

ಟಾಪ್ ನ್ಯೂಸ್

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ

ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ

Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…

Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…

suicide (2)

Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ

Jagdish-Shetter

Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್

Basavarj-horatti

ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.