ಬ್ರಿಟನ್ ಸಂಸತ್ನಲ್ಲಿ ಕಾಶ್ಮೀರದ ಚರ್ಚೆ: ಭಾರತ ಖಂಡನೆ
Team Udayavani, Sep 24, 2021, 10:00 PM IST
ಸಾಂದರ್ಭಿಕ ಚಿತ್ರ..
ನವದೆಹಲಿ: ಬ್ರಿಟನ್ ಸಂಸತ್ತಿನ ಸರ್ವಪಕ್ಷೀಯ ಸಂಸದರ ಸಮೂಹ(ಎಪಿಪಿಜಿ)ದ ಸದಸ್ಯರು ಕಾಶ್ಮೀರ ವಿಚಾರವಾಗಿ ಅಲ್ಲಿನ ಸಂಸತ್ನಲ್ಲಿ ಚರ್ಚೆ ನಡೆಸಿರುವ ವಿಚಾರ ಬೆಳಕಿಗೆ ಬಂದಿದ್ದು, ಈ ನಡೆಯನ್ನು ಭಾರತ ತೀವ್ರವಾಗಿ ಖಂಡಿಸಿದೆ. “ಕಾಶ್ಮೀರದಲ್ಲಿ ಮಾನವ ಹಕ್ಕು’ ಎನ್ನುವ ನಿರ್ಣಯವೊಂದರ ಕುರಿತು ಬ್ರಿಟನ್ ಸಂಸತ್ನಲ್ಲಿ ಚರ್ಚೆ ನಡೆದಿತ್ತು.
ಅಲ್ಲದೇ, ಬ್ರಿಟನ್ನಲ್ಲಿನ ಪಾಕ್ ಮೂಲದ ಸಂಸದ ನಾಝ್ ಶಾ ಸೇರಿದಂತೆ ಹಲವರು ಕಾಶ್ಮೀರದ ವಿಚಾರದಲ್ಲಿ ಮೂಗುತೂರಿಸಿದ್ದಲ್ಲದೇ, ಪ್ರಧಾನಿ ನರೇಂದ್ರ ಮೋದಿ ಅವರ ಕುರಿತೂ ಆಕ್ಷೇಪಾರ್ಹವಾಗಿ ಮಾತನಾಡಿದ್ದರು.
ಇದನ್ನೂ ಓದಿ:ಕೋವಿಡ್ ಅಂಕಿ-ಅಂಶ ಮುಚ್ಚಿಡುವ ಅವಶ್ಯಕತೆ ಸರ್ಕಾರಕ್ಕಿಲ್ಲ: ಡಾ.ಕೆ.ಸುಧಾಕರ್
ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಲಂಡನ್ನಲ್ಲಿರುವ ಭಾರತೀಯ ಹೈಕಮಿಷನ್ನ ಸಚಿವರು, “ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ದೇಶವೊಂದರ ಚುನಾಯಿತ ನಾಯಕರೊಬ್ಬರ ಕುರಿತು ಅವಹೇಳನಕಾರಿಯಾಗಿ ಮಾತನಾಡಲು ಮತ್ತೂಂದು ಪ್ರಜಾಸತ್ತಾತ್ಮಕ ರಾಷ್ಟ್ರದ ಸಂಸತ್ ಅನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಅಲ್ಲದೇ, ಭಾರತದ ಅವಿಭಾಜ್ಯ ಅಂಗವಾದ ಕಾಶ್ಮೀರದ ಕುರಿತು ಯಾವುದೇ ಆಧಾರವಿಲ್ಲದೇ ಮಾತನಾಡಿರುವುದನ್ನು ನಾವು ಖಂಡಿಸುತ್ತೇವೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
SPB: ಎಸ್ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.