![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Sep 26, 2021, 7:35 AM IST
ಮೇಷ: ಸಂದರ್ಭಕ್ಕೆ ಸರಿಯಾದ ಆಲೋಚನೆಯಿಂದ ಕೂಡಿದ ನಡೆ. ದೂರ ವ್ಯವಹಾರದಿಂದ ಧನ ವೃದ್ಧಿ. ಉದ್ಯೋಗದಲ್ಲಿ ಉತ್ತಮ ಬೆಳವಣಿಗೆ. ಆರೋಗ್ಯ ಸ್ಥಿರ. ಗುರುಹಿರಿಯರನ್ನು ಅನುಸರಿಸುವುದರಿಂದ ಕ್ಷೇಮ.
ವೃಷಭ: ಪ್ರಯಾಣದಿಂದ ದೇಹಾಯಾಸ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಎಲ್ಲರ ಸಹಕಾರದಿಂದ ಅಭಿವೃದ್ಧಿ. ಧಾರ್ಮಿಕ ಕೆಲಸಗಳಿಂದ ಮಾನಸಿಕ ನೆಮ್ಮದಿ. ಗೃಹೋಪಕರಣ ವಸ್ತುಗಳ ಸಂಗ್ರಹಕ್ಕೆ ಧನವ್ಯಯ.
ಮಿಥುನ: ನಿರೀಕ್ಷಿತ ಸ್ಥಾನ ಪ್ರಾಪ್ತಿ. ಅಧ್ಯಯನಶೀಲರಿಗೆ ಉತ್ತಮ ಗೌರವ ಆದರಗಳು ಸಿಗುವ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಅಭಿವೃದ್ಧಿದಾಯಕ ಬದಲಾವಣೆ. ದೈಹಿಕವಾಗಿಯೂ ಮಾನಸಿಕವಾಗಿಯೂ ಆರೋಗ್ಯ ಸುದೃಢ.
ಕರ್ಕ: ದೈಹಿಕ ಆರೋಗ್ಯ ಉತ್ತಮವಿದ್ದರೂ ಮಾನಸಿಕ ಒತ್ತಡ ಸಂಭವ. ಉದ್ಯೋಗ ಕೆಲಸ ಕಾರ್ಯಗಳಲ್ಲಿ ಉನ್ನತಿ. ಉತ್ತಮ ಧನ ಸಮೃದ್ಧಿ. ಧಾರ್ಮಿಕ ಆಚರಣೆಯಲ್ಲಿ ಆಸಕ್ತಿ. ವಿದ್ಯಾರ್ಥಿಗಳಿಗೆ, ಹಿರಿಯರಿಗೆ ಅನುಕೂಲಕರ ಪರಿಸ್ಥಿತಿ.
ಸಿಂಹ: ಗೃಹೋಪಕರಣ ವಸ್ತುಗಳ ಸಂಗ್ರಹಕ್ಕಾಗಿ ಧನವ್ಯಯ. ಉದ್ಯೋಗ ವ್ಯವಹಾರಗಳಲ್ಲಿ ಅಧಿಕ ಒತ್ತಡ ಗಳಿದ್ದರೂ ಕಾರ್ಯ ಪೂರೈಸುವಿರಿ. ಧನಾರ್ಜನೆಗೆ ಕೊರತೆ ಕಾಣದು. ನೂತನ ಮಿತ್ರರ ಸಹಕಾರ. ಹಿರಿಯರ ಉತ್ತಮ ಮಾರ್ಗದರ್ಶನ.
ಕನ್ಯಾ: ಆರೋಗ್ಯ ಉತ್ತಮ. ಧನಾರ್ಜನೆ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಸರಿಯಾದ ಯೋಜನೆಯಿಂದ ಕೂಡಿದ ಕಾರ್ಯ ವೈಖರಿ. ಸಹೋದರ, ಸಹೋದ್ಯೋಗಿಗಳಿಂದ ಸಹಾಯ ಸಹಕಾರ ಪ್ರಾಪ್ತಿ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ.
ತುಲಾ: ಆಸ್ತಿ, ವಾಹನಾದಿ ವಿಚಾರಗಳಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಗುರುಹಿರಿಯರಿಂದ ಸಂತೋಷ ವೃದ್ಧಿ. ಪರಸ್ಪರ ಸಹಕಾರ. ಸಹೋದ್ಯೋಗಿಗಳಿಂದ ಪ್ರೋತ್ಸಾಹ. ಹೆಚ್ಚಿದ ಧನಲಾಭ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಪ್ರಗತಿ.
ವೃಶ್ಚಿಕ: ದೀರ್ಘ ಪ್ರಯಾಣದಿಂದ ದೇಹಾಯಾಸ ಸಂಭವ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಿಸಿ. ದೂರದ ವ್ಯವಹಾರಗಳಲ್ಲಿ ಪರಾವಲಂಬನೆ ಅನಿವಾರ್ಯವಾದೀತು. ಪಾರದರ್ಶಕತೆಗೆ ಆದ್ಯತೆ ನೀಡಿ. ಧನಾರ್ಜನೆಯಲ್ಲಿ ಪ್ರಗತಿ.
ಧನು: ದೈಹಿಕವಾಗಿಯೂ ಮಾನಸಿಕವಾಗಿಯೂ ಆರೋಗ್ಯ ಸುದೃಢ. ದೂರದ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಗುರುಹಿರಿಯರ ಮೇಲಾಧಿಕಾರಿಗಳ ಗಣ್ಯರ ಸಹಕಾರ ಪ್ರೋತ್ಸಾಹ. ಭೂಮ್ಯಾದಿ ಆಸ್ತಿ ವಿಚಾರಗಳಲ್ಲಿ ಮುನ್ನಡೆ.
ಮಕರ: ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣ ಸಂಭವ. ಸಮಾಜದಲ್ಲಿ ಗೌರವ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಜವಾಬ್ದಾರಿಯುತ ಬದಲಾವಣೆ. ಬಂಧುಮಿತ್ರ ರೊಂದಿಗೆ ಚರ್ಚಿಸಿ ಅವಕಾಶ ನೀಡದಿರಿ. ನಿರೀಕ್ಷಿತ ಧನಾರ್ಜನೆ.
ಕುಂಭ: ಹಣಕಾಸಿನ ವಿಚಾರದಲ್ಲಿ ಅಪೇಕ್ಷಿಸಿದಂತೆ ಉತ್ತಮ ಪ್ರತಿಫಲ. ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಅಧಿಕಾರ ಗೌರವಾದಿ ಪ್ರಾಪ್ತಿ. ಗುರುಹಿರಿಯರ ಆರೋಗ್ಯ ಸುದೃಢ. ಬಂಧುಮಿತ್ರರಿಂದ ಜವಾಬ್ದಾರಿಯುತ ಸಹಕಾರ.
ಮೀನ: ನಿರೀಕ್ಷಿತ ಸ್ಥಾನ ಗೌರವಾದಿ ಸುಖ ಪ್ರಾಪ್ತಿ. ಆರೋಗ್ಯ ವೃದ್ಧಿ. ಹಣಕಾಸಿನ ವಿಚಾರದಲ್ಲಿ ಸರಿಯಾದ ದಾಖಲಾತಿಗಳೊಂದಿಗೆ ವ್ಯವಹರಿಸಿ. ಸಾಲ ಖಾತೆಗೆ ಒಳಗಾಗದಂತೆ ಎಚ್ಚರಿಕೆ ಇರಲಿ. ಮಾತಿನಲ್ಲಿ ದಾಕ್ಷಿಣ್ಯತೆ ತೋರದಿರಿ.
Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ
Horoscope: ಹೇಗಿದೆ ಇಂದಿನ ರಾಶಿಫಲ
Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ
Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.
Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ
You seem to have an Ad Blocker on.
To continue reading, please turn it off or whitelist Udayavani.