ಕರಾವಳಿ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 3 ದಿನ ಭಾರೀ ಮಳೆ
Team Udayavani, Sep 26, 2021, 8:19 AM IST
ಬೆಂಗಳೂರು : ರಾಜ್ಯದಲ್ಲಿ ಕರಾವಳಿ ಸೇರಿದಂತೆ ಮೂರು ದಿಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಕಲಬುರಗಿ, ರಾಯಚೂರು, ಯಾದಗಿರಿ ಮತ್ತು ಧಾರವಾಡ ಜಿಲ್ಲೆಯಲ್ಲಿ ವರುಣಾರ್ಭಟ ಜೋರಿದೆಯಂತೆ.
ಇನ್ನು ನಿನ್ನೆ (ಶನಿವಾರ) ಬೆಂಗಳೂರಿನಲ್ಲಿ ಕೆಲವೆಡೆ ಭಾರೀ ಮಳೆಯಾಗಿದೆ. ಅಲ್ಲದೆ ಇಂದು ಕೂಡ ಸಿನಿಕಾನ್ ಸಿಟಿಯಲ್ಲಿ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಕಳೆದ ವಾರದಿಂದ ಬೆಂಗಳೂರಿನಲ್ಲಿ ಮಳೆಯಾಗುತ್ತಿದೆ.
ನೈಋತ್ಯ ಮುಂಗಾರು ಇನ್ನೂ 10 ದಿನಗಳ ಕಾಲ ಮಂದುವರೆಯಬಹುದು ಎಂದು ಅಂದಾಜಿಸಲಾಗಿದ್ದು ಮಹಾರಾಷ್ಟ್ರದಲ್ಲಿ ಮಳೆ ಸುರಿದ ಕಾರಣ ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹದ ಭೀತಿ ಎದುರಾಗಿತ್ತು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.