ಉಸಿರು ಚೆಲ್ಲಿದೆ ಗಂಗೆ | ಸಕ್ರೆಬೈಲು ಬಿಡಾರದಲ್ಲಿ ಶೋಕ
Team Udayavani, Sep 26, 2021, 6:41 PM IST
ಶಿವಮೊಗ್ಗ: ಸಕ್ರೆಬೈಲು ಬಿಡಾರದ ಹಿರಿಯ ಆನೆ ಗಂಗೆ ಕೊನೆಯುಸಿರೆಳೆದಿದೆ. ಅನಾರೋಗ್ಯಕ್ಕೀಡಾಗಿದ್ದ ಗಂಗೆ ಆನೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ.
ಕೆಲವು ತಿಂಗಳಿಂದ ಗಂಗೆಯ ಆರೋಗ್ಯ ಹದಗೆಟ್ಟಿತ್ತು. ಈ ಹಿನ್ನೆಲೆಯಲ್ಲಿ ಬಿಡಾರದಲ್ಲೇ ಚಿಕಿತ್ಸೆ ನೀಡಲಾಗುತಿತ್ತು. ಕಳೆದ ಎರಡು ವಾರದಿಂದ ಆರೋಗ್ಯ ಮತ್ತಷ್ಟು ಬಿಗಡಾಯಿಸಿತ್ತು. ಇಂದು ಉಸಿರು ಚೆಲ್ಲಿದೆ.
ಬಿಡಾರದಲ್ಲಿ ಶೋಕ :
ಸಕ್ರೆಬೈಲು ಬಿಡಾರದ ಅತ್ಯಂತ ಹಿರಿಯ ಆನೆ ಗಂಗೆ. 1971ರಲ್ಲಿ ಕಾಕನಕೋಟೆಯಲ್ಲಿ ಈ ಆನೆಯನ್ನು ಸೆರೆ ಹಿಡಿಯಲಾಗಿತ್ತು. ಅಲ್ಲಿಂದ ಶಿವಮೊಗ್ಗದ ಸಕ್ರೆಬೈಲು ಬಿಡಾರಕ್ಕೆ ಕಳುಹಿಸಲಾಗಿತ್ತು. ಆಗಿನಿಂದಲೂ ಬಿಡಾರದ ಪ್ರಮುಖ ಆನೆಗಳಲ್ಲಿ ಒಂದಾಗಿತ್ತು.
ಖೆಡ್ಡಾ ಕಾರ್ಯಾಚರಣೆಯಲ್ಲಿ ನೈಪುಣ್ಯ
ಗಂಗೆಯು ಹೆಣ್ಣಾನೆಗಳಲ್ಲಿ ಸ್ಪುರದ್ರೂಪಿ ಎನ್ನುವ ಹೆಗ್ಗಳಿಕೆ ಪಡೆದಿತ್ತು. ಅಲ್ಲದೆ ಖೆಡ್ಡಾ ಕಾರ್ಯಾಚರಣೆಯಲ್ಲಿ ನೈಪುಣ್ಯ ಹೊಂದಿತ್ತು. ರಾಜ್ಯದ ವಿವಿಧೆಡೆ ಪುಂಡಾನೆಗಳನ್ನು ಖೆಡ್ಡಾಗೆ ಕೆಡವುವ ಕಾರ್ಯಾಚರಣೆಯಲ್ಲಿ ಗಂಗೆ ಪಾಲ್ಗೊಂಡು ಯಶಸ್ವಿಯಾಗಿದೆ. ಕಾರ್ಯಾಚರಣೆ ವೇಳೆ ಗಂಗೆಯನ್ನು ಕಂಡು ಪುಂಡಾನೆಗಳು ಬಳಿಗೆ ಬರುತ್ತಿದ್ದವು. ಈ ವೇಳೆ ಅವುಗಳನ್ನು ಖೆಡ್ಡಾಗೆ ಕೆಡವಿಕೊಳ್ಳಲಾಗುತಿತ್ತು.
ಬಿಡಾರದ ಹಿರಿಯಜ್ಜಿಯಾಗಿದ್ದ ಗಂಗೆ
ಗಂಗೆಯು ಸಕ್ರೆಬೈಲು ಬಿಡಾರದ ಹಿರಿಯಜ್ಜಿಯಾಗಿದ್ದಳು. ಈಕೆಯ ಆರು ಮರಿಗಳು ಇದೆ ಬಿಡಾರದ ಸದಸ್ಯರು. ಅಲ್ಲದೆ ಈ ಬಿಡಾರದಲ್ಲಿ ಯಾವುದೆ ಆನೆ ಮರಿ ಹಾಕಿದರೂ ಆರೈಕೆಗೆ ಗಂಗೆಯನ್ನು ಬಿಡಲಾಗುತಿತ್ತು. ಅಲ್ಲದೆ ತಾಯಿ ಆನೆಯಿಂದ ಮರಿಯನ್ನು ಬೇರ್ಪಡಿಸುವ ವೀನಿಂಗ್ ಪ್ರಕ್ರಿಯೆ ಸಂದರ್ಭದಲ್ಲೂ ಗಂಗೆ ಪ್ರಮುಖ ಪಾತ್ರ ವಹಿಸುತ್ತಿದ್ದಳು.
ಗಂಗೆ ಆನೆಯನ್ನು ಕಳೆದುಕೊಂಡು ಸಕ್ರೆಬೈಲು ಬಿಡಾರ ದುಃಖದಲ್ಲಿದೆ. ಗಂಗೆಗೆ ಸರ್ಕಾರಿ ಗೌರವದೊಂದಿಗೆ ಅಂತ್ಯ ಸಂಸ್ಕಾರ ನೆರವೇರಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
MUST WATCH
ಹೊಸ ಸೇರ್ಪಡೆ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.