65 ಗಂಟೆಗಳಲ್ಲಿ 20 ಸಭೆ ನಡೆಸಿದ ಮೋದಿ : ವಿಮಾನ ಪ್ರಯಾಣದ ವೇಳೆಯೂ 4 ಮೀಟಿಂಗ್‌

ಪ್ರಧಾನಿಯವರನ್ನು ಅದ್ಧೂರಿಯಾಗಿ ಬರಮಾಡಿಕೊಂಡ ಬಿಜೆಪಿ

Team Udayavani, Sep 26, 2021, 9:20 PM IST

65 ಗಂಟೆಗಳಲ್ಲಿ 20 ಸಭೆ ನಡೆಸಿದ ಮೋದಿ : ವಿಮಾನ ಪ್ರಯಾಣದ ವೇಳೆಯೂ 4 ಮೀಟಿಂಗ್‌

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಕ್ಕೆ ಪ್ರವಾಸ ಬೆಳೆಸಿದ 65 ಗಂಟೆಗಳಲ್ಲಿ 20 ಸಭೆಯಲ್ಲಿ ಭಾಗವಹಿಸಿದ್ದಾರೆ. ಅದರ ಜತೆ ವಿಮಾನ ಪ್ರಯಾಣದ ವೇಳೆ ನಾಲ್ಕು ಸಭೆ ನಡೆಸಿದ್ದಾರೆ. ಈ ಬಗ್ಗೆ ಕೇಂದ್ರ ಸರ್ಕಾರದ ಅಧಿಕಾರಿಗಳು ಭಾನುವಾರ ಮಾಹಿತಿ ನೀಡಿದ್ದಾರೆ.

ನವದೆಹಲಿಯಿಂದ ಬುಧವಾರ ಅಮೆರಿಕಕ್ಕೆ ವಿಮಾನದಲ್ಲಿ ಪ್ರಯಾಣಿಸುವಾಗ 2 ಸಭೆ ನಡೆಸಿ, ಅಮೆರಿಕದಲ್ಲಿ ಹೋಟೆಲ್‌ನಲ್ಲಿ 3 ಸಭೆ ನಡೆಸಿದ್ದಾರೆ. ಸೆ.23ರಂದು ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಜೊತೆಗೆ ಸಭೆ, ಜಪಾನ್‌ ಮತ್ತು ಆಸ್ಟ್ರೇಲಿಯಾ ಪ್ರತಿನಿಧಿಗಳ ಜತೆ ಎರಡು ದ್ವಿಪಕ್ಷೀಯ ಸಭೆ ಹಾಗೂ ವಿವಿಧ ಸಂಸ್ಥೆಗಳ ಸಿಇಒ ಜೊತೆಗೆ 5 ಸಭೆ ನಡೆಸಿದ್ದಾರೆ. ಅದರೊಂದಿಗೆ 3 ಆಂತರಿಕ ಸಭೆಗಳಲ್ಲಿ ಭಾಗವಹಿಸಿದ್ದಾರೆ. ಸೆ.24ರಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಅವರೊಂದಿಗೆ ಸಭೆ, ಕ್ವಾಡ್‌ ಸಭೆ ಹಾಗೂ 4 ಆಂತರಿಕ ಸಭೆ ನಡೆಸಿದ್ದಾರೆ. ಸೆ.25ರಂದು ಭಾರತಕ್ಕೆ ವಾಪಸಾಗುವಾಗ ವಿಮಾನದಲ್ಲಿಯೇ ಕುಳಿತು 2 ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ಪ್ರಮುಖ ರಾಷ್ಟ್ರದ ಮಾನ್ಯತೆ:

ಪ್ರಧಾನಿ ನರೇಂದ್ರ ಮೋದಿಯವರು ವಿಶ್ವದ ರಾಷ್ಟ್ರಗಳ ಪೈಕಿ ಭಾರತಕ್ಕೆ ಮಹತ್ವದ ಸ್ಥಾನ ಕಲ್ಪಿಸಿಕೊಟ್ಟಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರಧಾನಿಯವರಿಗೆ ಅಭಿನಂದನೆ ಸಲ್ಲಿಸಲು ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಭಾರತವನ್ನು ಜಗತ್ತಿನಲ್ಲಿ ಪ್ರಮುಖ ರಾಷ್ಟ್ರಗಳ ಸಾಲಿಗೆ ಸೇರಲು ಕಾರಣರಾದ ಪ್ರಧಾನಿ ನರೇಂದ್ರ ಮೋದಿ ಜಗತ್ತಿನ ನಾಯಕ’ ಎಂದು ಬಣ್ಣಿಸಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬೈಡೆನ್‌, ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌, ಕ್ವಾಡ್‌ ರಾಷ್ಟ್ರಗಳ ಮುಖಂಡರ ಜತೆಗೆ ಸಭೆಯನ್ನೂ ನಡೆಸಿದ್ದಾರೆ ಎಂದರು.

ಇದನ್ನೂ ಓದಿ :ನನ್ನ ರಾಜೀನಾಮೆಗೆ ಪ್ರಧಾನಿ ಮೋದಿ ಕೂಡ ಆಶ್ಚರ್ಯ ಪಟ್ಟಿದ್ರು ; ಮಾಜಿ ಮುಖ್ಯಮಂತ್ರಿ ಬಿಎಸ್ ವೈ

ಅದ್ಧೂರಿ ಸ್ವಾಗತ:

ಮೂರು ದಿನಗಳ ಅಮೆರಿಕ ಪ್ರವಾಸ ಮುಗಿಸಿ ಭಾರತಕ್ಕೆ ವಾಪಸಾದ ಪ್ರಧಾನಿ ನರೇಂದ್ರ ಮೋದಿಯವರನ್ನು ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಉಪಾಧ್ಯಕ್ಷ ವಿರೇಂದ್ರ ಸಚ್ದೇವ್, ಮುಖ್ಯ ಕಾರ್ಯದರ್ಶಿ ಅರುಣ್‌ ಸಿಂಗ್‌, ಕೇಂದ್ರ ಸಚಿವ ರಾಜನಾಥ್‌ ಸಿಂಗ್‌, ಮಾಜಿ ಸಚಿವ  ಹರ್ಷ ವರ್ಧನ್‌ ಸೇರಿದಂತೆ ಪ್ರಮುಖರಿದ್ದರು.

ಬಿಡುವಿಲ್ಲದ ಕಾರ್ಯಕ್ರಮಗಳೇ ಗುಟ್ಟು

ನಿರಂತರವಾಗಿ ಪ್ರಯಾಣ, ಸಭೆ ನಡೆಸುವ ಪ್ರಧಾನಿ ಮೋದಿಯವರಿಗೆ ಆಯಾಸ ಆಗುವುದಿಲ್ಲವೇ ಎನ್ನುವುದು ಹಲವರ ಅಚ್ಚರಿ. ಈ ಕೌತುಕಕ್ಕೆ ಹಿರಿಯ ಅಧಿಕಾರಿಗಳು ಪರಿಹಾರವನ್ನೂ ನೀಡಿದ್ದಾರೆ. ಆಯಾಸವಾದಂತೆ ತಡೆಯುವ ನಿಟ್ಟಿನಲ್ಲಿ ಪ್ರಧಾನಿಯವರು ನಿರಂತರವಾಗಿ ಸಭೆ, ಪರಾಮರ್ಶೆಗಳನ್ನು ನಡೆಸುತ್ತಾರೆ ಎಂದು ಹೇಳಿದ್ದಾರೆ. 1990ರ ದಶಕದಲ್ಲಿ ಮೋದಿಯವರು ಪದೇ ಪದೆ ಅಮೆರಿಕಕ್ಕೆ ಭೇಟಿ ನೀಡುತ್ತಿದ್ದ ವೇಳೆ ವಿಮಾನಯಾನ ಸಂಸ್ಥೆಯೊಂದು ಅವರಿಗೆ ಟಿಕೆಟ್‌ನಲ್ಲಿ ರಿಯಾಯಿತಿ ನೀಡಿ, ತಿಂಗಳ ಪಾಸ್‌ ಅನ್ನೂ ನೀಡಿತ್ತು.

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.