ಶಿಕ್ಷಕರ ಅರ್ಹತಾ ಪರೀಕ್ಷೆ : ಬ್ಲೂಟೂತ್ ಶೂ ಧರಿಸಿ ಮೋಸ ಮಾಡುವ ಯತ್ನ
Team Udayavani, Sep 26, 2021, 10:25 PM IST
ಜೈಪುರ: ರಾಜಸ್ಥಾನದಲ್ಲಿ ಭಾನುವಾರದಂದು ನಡೆದ ಶಿಕ್ಷಕರ ಅರ್ಹತಾ ಪರೀಕ್ಷೆ(ರೀಟ್)ಯಲ್ಲಿ ಬ್ಲೂಟೂತ್ ಶೂ ಧರಿಸಿ ಮೋಸ ಮಾಡುವ ಯತ್ನ ನಡೆದಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಐವರನ್ನು ಬಂಧಿಸಲಾಗಿದೆ.
ಅಜ್ಮರ್ನಲ್ಲಿ ಮೊದಲಿಗೆ ಈ ಮೋಸ ಪತ್ತೆಯಾಗಿದೆ. ನಂತರ ಬಿಕಾನೇರ್ ಮತ್ತು ಸಿಕರ್ನಲ್ಲಿ ಶೂ ಧರಿಸಿದ್ದ ಇಬ್ಬರು ಸಿಕ್ಕಿಬಿದ್ದಿದ್ದಾರೆ. ಶೂನಲ್ಲಿ ಮೊಬೈಲ್ ಮತ್ತು ಬ್ಲೂಟೂತ್ ಅಳವಡಿಸಲಾಗಿದ್ದು, ಅಭ್ಯರ್ಥಿಗಳ ಕಿವಿಗೆ ಹಾಕಿಕೊಳ್ಳಲು ಇನ್ನೊಂದು ಡಿವೈಸ್ ಕೊಡಲಾಗಿದೆ. ದೂರದಲ್ಲೆಲ್ಲೋ ಕುಳಿತ ವ್ಯಕ್ತಿ ಇವರಿಗೆ ಪರೀಕ್ಷೆ ಬರೆಯಲು ಬ್ಲೂಟೂತ್ ಮೂಲಕ ಸಹಾಯ ಮಾಡುತ್ತಿದ್ದ. ಒಟ್ಟು 25 ಮಂದಿಗೆ 6 ಲಕ್ಷ ರೂ. ವೆಚ್ಚದಲ್ಲಿ ಶೂ ಮಾರಾಟ ಮಾಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಪೂರ್ತಿ ತೋಳಿರುವ ಶರ್ಟ್ ಧರಿಸಿ ಬರಬಾರದು ಎನ್ನುವ ನಿಯಮವಿದ್ದರೂ ಹಲವೆಡೆ ಅಭ್ಯರ್ಥಿಗಳು ಪೂರ್ತಿ ತೋಳಿನ ಶರ್ಟ್ ಧರಿಸಿ ಬಂದಿದ್ದು, ಪರೀಕ್ಷಾ ಕೇಂದ್ರದೊಳಗೆ ಕಳುಹಿಸುವ ಮೊದಲು ಶರ್ಟ್ನ ತೋಳನ್ನು ಕತ್ತರಿಸಿ ಕಳುಹಿಸಿರುವ ಘಟನೆಯೂ ನಡೆದಿದೆ.
ಇದನ್ನೂ ಓದಿ :ಲಡಾಖ್ನ ಪೂರ್ವ ಭಾಗದಲ್ಲಿ ಚೀನಾ ಸೇನೆಯ ಡ್ರೋನ್ ಹಾರಾಟ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.