ದಾಂಡೇಲಿಯಲ್ಲಿ ಭಾರತ್ ಬಂದ್ ಬೆಂಬಲಿಸಿ ಪ್ರತಿಭಟನೆ
Team Udayavani, Sep 27, 2021, 2:28 PM IST
ದಾಂಡೇಲಿ : ಕೃಷಿ ಕಾಯ್ದೆಗಳ ತಿದ್ದುಪಡಿಯನ್ನು ವಿರೋಧಿಸಿ ಹಾಗೂ ಬೆಲೆ ಏರಿಕೆಯನ್ನು ವಿರೋಧಿಸಿ ರೈತ ಸಂಘಟನೆಗಳು ನೀಡಿರುವ ಭಾರತ್ ಬಂದ್ ಬೆಂಬಲಿಸಿ ಸೋಮವಾರ ನಗರದ ಸೋಮಾನಿ ವೃತ್ತದಲ್ಲಿ ನಗರದ ಡಿವೈಎಫ್ಐ, ಸಿಐಟಿಯೂ, ರೈತಸಂಘ, ಜನವಾದಿ ಮಹಿಳಾ ಸಂಘಟನೆಗಳು ಹಾಗೂ ಅಂಗನವಾಡಿ ನೌಕರರ ಸಂಘವು ಜಂಟಿಯಾಗಿ ಪ್ರತಿಭಟನೆಯನ್ನು ನಡೆಸಿತು.
ಈ ಸಂದರ್ಭದಲ್ಲಿ ಮಾತನಾಡಿದ ಡಿವೈಎಫ್ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಸ್ಯಾಮಸನ್ ಅವರು ರೈತರ ಭೂಮಿ ಕಬಳಿಸಲು ಅನುವುಗೊಳಿಸುವ ತಿದ್ದುಪಡಿಗಳನ್ನು ಕೇಂದ್ರ ಸರಕಾರ ಮಾಡಲು ಹೊರಟಿರುವುದು ಸರಿಯಾದ ಕ್ರಮವಲ್ಲ. ಎ.ಪಿ.ಎಂ.ಸಿ ಕಾಯ್ದೆ ತಿದ್ದುಪಡಿ ಮಾಡಿ ಕಾರ್ಪೋರೆಟ್ ಕಂಪೆನಿಗಳಿಗೆ ರೈತರ ಉತ್ಪನ್ನಗಳ ಲೂಟಿಗೆ ಅನುವುಗೊಳಿಸಿದೆ. ಕೃಷಿ ಕಾಯ್ದೆ ತಿದ್ದುಪಡಿಯಿಂದ ದೇಶದ ರೈತರ ಸ್ಥಿತಿ ತೀವ್ರ ಗಂಭೀರವಾಗಲಿದೆ. ಈ ನಿಟ್ಟಿನಲ್ಲಿ ಕೃಷಿ ಕಾಯ್ದೆ ತಿದ್ದುಪಡಿಯನ್ನು ಹಿಂಪಡೆಯಬೇಕು ಹಾಗೂ ಗಗನಕ್ಕೇರಿರುವ ಅಗತ್ಯ ವಸ್ತುಗಳ ಬೆಲೆಯನ್ನು ಕಡಿಮೆ ಮಾಡಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮುಖಂಡರುಗಳಾದ ಸಿಐಟಿಯು ಮುಖಂಡ ಝಡ್ ದೇವರಾಜು, ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವಿಭಾಗಗಳ ಅಧ್ಯಕ್ಷ ವಿನಾಯಕ ಬಾರಕೇರ, ಜನವಾದಿ ಮಹಿಳಾ ಸಂಘಟನೆಯ ಅಧ್ಯಕ್ಷೆ ರತ್ನಾದೀಪ ಎಂ ಮೊದಲಾದವರು ಕೇಂದ್ರ ಸರಕಾರದ ರೈತ ವಿರೋಧಿ ನೀತಿಯನ್ನು ಬಲವಾಗಿ ಖಂಡಿಸಿದರು. ಕೃಷಿ ಕಾಯ್ದೆಗಳ ತಿದ್ದುಪಡಿಯನ್ನು ವಾಪ್ಸು ಪಡೆದುಕೊಳ್ಳಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಆಲೂರು ಗ್ರಾಮ ಪಂಚಾಯ್ತು ಅಧ್ಯಕ್ಷ ಲಕ್ಷ್ಮಣ ಜಾಧವ್, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಾಫರ್ ಮಸನಕಟ್ಟಿ, ಸಂಘಟನೆಯ ಮುಖಂಡರುಗಳಾದ ಇಮ್ರಾನ್ ಖಾನ್, ಪದ್ಮಾ ಕಾಳೆ, ಮಹಮ್ಮದ ಬಿಚ್ಚಣ್ಣವರ, ಮ್ಯಾಥ್ಯೂ, ರಾಮಾಂಜನೇಯ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.