ಲಂಚ ಪಡೆಯುತ್ತಿದ್ದ ಗುಡಸ ಗ್ರಾ.ಪಂ. ಕ್ಲರ್ಕ್ ಎಸಿಬಿ ಬಲೆಗೆ
Team Udayavani, Sep 27, 2021, 2:27 PM IST
ಬೆಳಗಾವಿ: ಹುಕ್ಕೇರಿ ತಾಲೂಕಿನ ಗುಡಸ ಗ್ರಾಮ ಪಂಚಾಯತ್ ನ ಕ್ಲರ್ಕ್ ಒಬ್ಬರು ಲಂಚ ಪಡೆಯುವಾಗ ಭ್ರಷ್ಟಾಚಾರ ನಿರ್ಮೂಲನಾ ದಳ (ಎಸಿಬಿ)ದ ಬಲೆಗೆ ಬಿದ್ದಿದ್ದಾರೆ.
ಪಂಚಾಯತಿ ಕ್ಲರ್ಕ್ ಹಾಗೂ ಬಿಲ್ ಕಲೆಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಸಿದಗೌಡ ಬಸವಣ್ಣಿ ನೇರ್ಲಿ ಅವರು 7,400 ರೂ. ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಇವರು ಆಸ್ತಿ ರಿಜಿಸ್ಟರ್ ನಲ್ಲಿ ಅರ್ಜಿದಾರರೊಬ್ಬರ ವಾರಸಾ ಹೆಸರು ದಾಖಲಿಸಲು ರೂ.7,400 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತಂತೆ ಅರ್ಜಿದಾರ ಭೀಮಪ್ಪ ಕಲಕುಟಗಿ ಎಸಿಬಿಗೆ ದೂರು ಸಲ್ಲಿಸಿದ್ದರು. ಆರೋಪಿಯನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ:ಕೋಟ: ನದಿಯಲ್ಲಿ ಮುಳುಗಿ ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿ ಸಾವು
ಎಸಿಬಿ ಎಸ್ಪಿ ಬಿ.ಎಸ್. ನ್ಯಾಮಗೌಡರ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಕರುಣಾಕರ ಶೆಟ್ಟಿ ನೇತೃತ್ವದಲ್ಲಿ ಇನ್ಸಪೆಕ್ಟರ್ ಗಳಾದ ಅಡಿವೇಶ ಗುದಿಗೊಪ್ಪ ಹಾಗೂ ಸುನಿಲಕುಮಾರ ಮತ್ತು ಸಿಬ್ಬಂದಿ ದಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
MUST WATCH
ಹೊಸ ಸೇರ್ಪಡೆ
Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.