ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣ: ವಿಚಾರಣೆ ಮುಂದೂಡಿದ ಹೈಕೋರ್ಟ್
Team Udayavani, Sep 28, 2021, 10:31 AM IST
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 7ಕ್ಕೆ ಮುಂದೂಡಿದೆ.
ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿ ನಗರ ಪೊಲೀಸ್ ಆಯುಕ್ತರು ಹೊರಡಿಸಿರುವ ಆದೇಶ ಪ್ರಶ್ನಿಸಿ ವಕೀಲೆ ಗೀತಾ ಮಿಶ್ರಾ, ಸಂತ್ರಸ್ತ ಯುವತಿ ಸೇರಿ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ ಚಂದ್ರ ಶರ್ಮಾ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ನಡೆಸಿತು.
ಈ ವೇಳೆ ಅಡ್ವೋಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ, ಹೈಕೋರ್ಟ್ ಅನುಮತಿ ಇಲ್ಲದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ನಡೆಸಿರುವ ತನಿಖೆಯ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸುವಂತಿಲ್ಲ. ಹೀಗಾಗಿ ಹೈಕೋರ್ಟ್ ನ ಮುಂದಿನ ಆದೇಶಕ್ಕೆ ಒಳಪಟ್ಟು ತನಿಖಾ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲು ಅನುಮತಿ ನೀಡಬೇಕು. ಈ ಸಂಬಂಧ ನ್ಯಾಯಾಲಯ ಹಿಂದೆ ಹೊರಡಿಸಿರುವ ಮಧ್ಯಂತರ ಆದೇಶವನ್ನು ತೆರವುಗೊಳಿಸಬೇಕೆಂದು ಮನವಿ ಮಾಡಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಯುವತಿ ಪರ ವಕೀಲೆ ಇಂದಿರಾ ಜೈಸಿಂಗ್, ಎಸ್‌ಐಟಿ ರಚನೆಯ ಸಿಂಧುತ್ವವನ್ನೇ ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದೆ. ಒಂದು ವೇಳೆ ನ್ಯಾಯಾಲಯ ಎಸ್‌ಐಟಿ ರಚನೆಯನ್ನೇ ಅಸಿಂಧುಗೊಳಿಸಿದರೆ, ಎಲ್ಲವೂ ನಿರರ್ಥಕವಾಗಲಿದೆ. ಆದ್ದರಿಂದ ಎಸ್‌ಐಟಿ ರಚನೆಯ ಕಾನೂನಾತ್ಮಕ ಮತ್ತು
ಸಾಂವಿಧಾನಿಕ ಸಿಂಧುತ್ವವನ್ನು ನಿರ್ಧಾರ ಮಾಡಬೇಕಿದೆ. ಹಾಗೆಯೇ, ಎಸ್‌ಐಟಿಮುಖ್ಯಸ್ಥರು ತನಿಖೆ ವೇಳೆ ರಜೆಯಲ್ಲಿದ್ದರು. ವರದಿ ಪರಿಶೀಲಿಸಲು ನಿರಾಕರಿಸಿದ್ದಾರೆ. ಹೀಗಾಗಿ ಎಸ್‌ಐಟಿ ಮುಖ್ಯಸ್ಥರ ಗೈರಿನಲ್ಲಿ ತನಿಖೆ ಮುಂದುವರಿಯಬಹುದೇ ಎಂಬುದನ್ನೂ ಪರಿಶೀಲಿಸಬೇಕಿದೆ ಎಂದರು.
ಅಲ್ಲದೇ, ಎಸ್‌ಐಟಿ ರಚಿಸಲು ಗೃಹ ಸಚಿವರು ಆದೇಶಿಸಿದ್ದರು. ಗೃಹ ಸಚಿವರು ತಮಗೆ ವರದಿ ಸಲ್ಲಿಸುವಂತೆ ಆದೇಶ ಮಾಡಿರುವಾಗ ಆ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬಹುದೇ? ಹೀಗಾಗಿ, ವಿಚಾರಣಾ ನ್ಯಾಯಾಲಯಕ್ಕೆ ವರದಿ ಸಲ್ಲಿಸಲು ಅವಕಾಶ ನೀಡಿ ಎಂದು ಕೋರುವುದು ಸೂಕ್ತವಲ್ಲ ಎಂದು ಆಕ್ಷೇಪಿಸಿದರು.
ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಪೀಠ, ವಿಚಾರಣಾ ನ್ಯಾಯಾಲಯದಲ್ಲಿ ವರದಿ ಸಲ್ಲಿಸಲು ಅನುಮತಿ ನೀಡುವ ಮುನ್ನ ಹಲವು ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟು, ವಿಚಾರಣೆಯನ್ನು ಅ.7ಕ್ಕೆ ಮುಂದೂಡಿಕೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.