ಕಾಪು ಮಯೂರ ಹೊಟೇಲ್ ಮಾಲಕ ಸಂತೋಷ್ ಆರ್. ಶೆಟ್ಟಿ ವಿಧಿವಶ
Team Udayavani, Sep 28, 2021, 2:57 PM IST
ಕಾಪು: ಕಳತ್ತೂರು ಬರ್ಪಾಣಿ ದಿ. ರಘುರಾಮ ಶೆಟ್ಟಿ ಅವರ ಪುತ್ರ, ಕಾಪು ಮಯೂರ ಹೊಟೇಲ್ ನ ಮಾಲಕ ಸಂತೋಷ್ ಆರ್. ಶೆಟ್ಟಿ (51) ಅವರು ಸೆ. 28ರಂದು ಅನಾರೋಗ್ಯದಿಂದಾಗಿ ಮಣಿಪಾಲ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಮೃತರು ಪತ್ನಿ, ಪುತ್ರ ಮತ್ತು ಪುತ್ರಿ ಹಾಗೂ ನಾಲ್ಕು ಮಂದಿ ಸಹೋದರ – ಮೂರು ಮಂದಿ ಸಹೋದರಿಯರನ್ನು ಮತ್ತು ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ.
ಹೊಟೇಲು ಉದ್ಯಮಿಯಾಗಿ ಕಳೆದ 27 ವರ್ಷಗಳಿಂದ ಮಯೂರಾ ಹೊಟೇಲ್ ನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಬರುತ್ತಿದ್ದ ಅವರು, ಸಮಾಜ ಸೇವಾಸಕ್ತರಾಗಿದ್ದು ವಿವಿಧ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ತನ್ನದೇ ಆದ ರೀತಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಕೊರೊನಾ ಲಾಕ್ ಡೌನ್ ಸಂದರ್ಭಗಳಲ್ಲಿ ಸಮಾಜದ ಬಡ ವರ್ಗದ ಜನರ ನೋವಿಗೆ ಸ್ಪಂಧಿಸಿ ವಿವಿಧ ಸಹಕಾರ ನೀಡಿದ್ದ ಅವರು ತನ್ನ ಹೊಟೇಲ್ ನ ಸಿಬಂದಿಗಳು ಮತ್ತು ಅವರ ಕುಟುಂಬದದವರ ಕಷ್ಟದ ಪರಿಸ್ಥಿತಿಯನ್ನು ನೋಡಿ ಅವರಿಗೆ ಪಡಿತರ ಕಿಟ್ ಮತ್ತು ಆರ್ಥಿಕ ಧನಸಹಾಯ ನೀಡುವ ಮೂಲಕ ಇತರರಿಗೆ ಮಾದರಿಯಾಗಿದ್ದರು.
ಗಣ್ಯರ ಸಂತಾಪ : ಹೊಟೇಲು ಉದ್ಯಮಿ ಸಂತೋಷ್ ಆರ್. ಶೆಟ್ಟಿ ಅವರ ನಿಧನಕ್ಕೆ ಉಡುಪಿ ಶ್ರೀ ಪುತ್ತಿಗೆ ಮಠಾಧೀಶರು, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸುರೇಶ್ ಪಿ. ಶೆಟ್ಟಿ ಗುರ್ಮೆ, ಯಶಪಾಲ್ ಸುವರ್ಣ, ದೇವಿಪ್ರಸಾದ್ ಶೆಟ್ಟಿ, ಯೋಗೀಶ್ ಶೆಟ್ಟಿ ಬಾಲಾಜಿ, ನವೀನ್ ಚಂದ್ರ ಶೆಟ್ಟಿ ಸಹಿತ ಹಲವು ಮಂದಿ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.
ಇಂದು ರಾತ್ರಿ ಅಂತ್ಯಕ್ರಿಯೆ : ಮೃತ ಸಂತೋಷ್ ಶೆಟ್ಟಿ ಅವರ ಅಂತ್ಯ ಸಂಸ್ಕಾರವು ಇಂದು (ಸೆ.28) ರಾತ್ರಿ 8.30 ಕ್ಕೆ ಕಳತ್ತೂರು ಮಯೂರ ಹೌಸ್ ನಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕರಾವಳಿಯಲ್ಲಿ ಕಾಶ್ಮೀರಿ ಕೇಸರಿ ಬೆಳೆದ ಟೆಕ್ಕಿಗಳು; ಹೊಸ ಪ್ರಯೋಗದಲ್ಲಿ ಮೊದಲ ಯಶಸ್ಸು !
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
ಆನ್‌ಲೈನ್‌ನಲ್ಲಿ ಅಧಿಕ ಲಾಭಾಂಶದ ಆಮಿಷ: ಬ್ಯಾಂಕ್ ಮ್ಯಾನೇಜರ್‌ಗೆ ಲಕ್ಷಾಂತರ ರೂ. ವಂಚನೆ
Udupi: ಹೂಡೆ ಬೀಚ್‌ನಲ್ಲಿ ಪ್ರವಾಸಿಗರ ಮೇಲೆ ಸ್ಥಳೀಯರಿಂದ ಹಲ್ಲೆ
Hiriydaka: ಒಟಿಪಿ ನೀಡಿ 5 ಲಕ್ಷ ರೂ. ಕಳೆದುಕೊಂಡ ಯುವತಿ
MUST WATCH
ಹೊಸ ಸೇರ್ಪಡೆ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.