ಎಡಿಟಿಂಗ್ನಲ್ಲಿ ‘ಮಾರಾಯ’
Team Udayavani, Sep 28, 2021, 3:30 PM IST
“ಮಾರಾಯ’ ಎಂಬ ಸಿನಿಮಾವೊಂದು ಸದ್ದಿಲ್ಲದೇ ಚಿತ್ರೀಕರಣ ಮುಗಿಸಿದ್ದು, ಈಗ ಚಿತ್ರ ಡಬ್ಬಿಂಗ್ ಹಂತಕ್ಕೆ ಬಂದಿದೆ. ಈಗಾಗಲೇ ಎಡಿಟಿಂಗ್, ಸಿ.ಜಿ ಕೆಲಸ ಮುಗಿಸಿಕೊಂಡಿರುವ ಚಿತ್ರ ಶೀಘ್ರದಲ್ಲಿ ಬಿಡುಗಡೆಯಾಗಲಿದೆ.
ಇತ್ತೀಚೆಗೆ ಈ ಚಿತ್ರದ ಲಿರಿಕಲ್ ವಿಡಿಯೋ ಬಿಡುಗಡೆಯಾಗಿದೆ. ಈ ವಿಡಿಯೋಗೆ ಮೆಚ್ಚುಗೆ ವ್ಯಕ್ತವಾಗಿದ್ದು, ಎರಡು ಲಕ್ಷಕ್ಕೂ ಹೆಚ್ಚಿನ ವೀಕ್ಷಣೆ ಪಡೆದಿದೆ. ಈ ಚಿತ್ರವನ್ನು ಶ್ರೀ ಹೊನ್ನಾದೇವಿ ಗಂಗಾಧರೇಶ್ವರ ಪ್ರೊಡಕ್ಷನ್ಸ್ನಡಿ ಎನ್.ಜಿ.ಸುಜಾತಾ ನಂದನ್ ತುಮಕೂರು ನಿರ್ಮಿಸಿದ್ದಾರೆ.
ಚಿತ್ರವನ್ನು ಉದಯ್ ಪ್ರೇಮ್ ನಿರ್ದೇಶಿಸಿದ್ದಾರೆ. ಬಿಡುಗಡೆಯಾಗಿರುವ ಲಿರಿಕಲ್ ವಿಡಿಯೋನಲ್ಲಿ ನಿರ್ದೇಶಕರದ್ದೇ ಸಾಹಿತ್ಯವಿದೆ. ರಾಜೇಶ್ ಕೃಷ್ಣನ್ ಈ ಹಾಡನ್ನು ಹಾಡಿದ್ದಾರೆ.
ಇದೊಂದು ಔಟ್ ಅಂಡ್ ಔಟ್ ಕಮರ್ಷಿಯಲ್ ಸಿನಿಮಾವಾಗಿದ್ದು, ಇವತ್ತಿನ ಟ್ರೆಂಡ್ಗೆ ತಕ್ಕಂತೆ ಮಾಡಲಾಗಿದೆ. ಚಿತ್ರದಲ್ಲಿ ಕುಮಾರ್ ದೇವ್, ಶ್ರೇಯಾ, ಪೂಜಾ, ಸ್ನೇಹ, ವಿನಯ ಪ್ರಸಾದ್, ದಿವಾಕರ್, ಮಜಾ ಭಾರತದ ಕಲಾವಿದರು, ಡಿಂಗ್ರಿ ನಾಗರಾಜ್ ಸೇರಿದಂತೆ ಅನೇಕರು ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.