Breaking news | ನಾಡ ಹಬ್ಬ ಮೈಸೂರು ದಸರಾ ಉದ್ಘಾಟಕರ ಹೆಸರು ಘೋಷಣೆ
Team Udayavani, Sep 28, 2021, 6:36 PM IST
ಮೈಸೂರು: ನಾಡ ಹಬ್ಬ ದಸರಾ ಉದ್ಘಾಟಕರ ಹೆಸರು ಘೋಷಣೆಯಾಗಿದೆ. ಈ ಬಾರಿ ನಡೆಯಲಿರುವ ದಸರಾ ಹಬ್ಬವನ್ನು ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರು ಉದ್ಘಾಟಿಸಲಿದ್ದಾರೆ.
ಇಂದು (ಸೆ.28) ಸಂಜೆ ದಸರಾ ಹಬ್ಬದ ಸಿದ್ಧತೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಯಿತು. ಅಕ್ಟೋಬರ್ 7ರಿಂದ ಆರಂಭವಾಗಲಿರುವ ನಾಡಹಬ್ಬ ದಸರಾ ಮಹೋತ್ಸವವನ್ನು ಉದ್ಘಾಟಿಸಲು ಹಿರಿಯ ಮುತ್ಸದ್ಧಿ, ಮಾಜಿ ಮುಖ್ಯಮಂತ್ರಿ ಶ್ರೀ ಎಸ್.ಎಂ.ಕೃಷ್ಣ ರವರಿಗೆ ಆಹ್ವಾನ ನೀಡಲು ರಾಜ್ಯಸರ್ಕಾರ ನಿರ್ಧರಿಸಿದೆ.
ಅಕ್ಟೋಬರ್ 7 ರಿಂದ ಪ್ರಾರಂಭವಾಗಲಿರುವ ದಸರಾ ಹಬ್ಬಕ್ಕೆ ಸಾಂಸ್ಕೃತಿಕ ಮೈಸೂರು ಸರ್ವರೀತಿಯಲ್ಲಿ ಸಜ್ಜುಗೊಳ್ಳುತ್ತಿದೆ. ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಬೆಳಕಿನಲ್ಲಿ ಕಂಗೊಳಿಸಲು ಅರಮನೆ ವಿದ್ಯುತ್ ಬಲ್ಬ್‌ಗಳು ರೆಡಿಯಾಗುತ್ತಿವೆ.
ಅರಮನೆ ದೀಪಾಲಂಕಾರ ದಸರಾದ ಪ್ರಮುಖ ಆಕರ್ಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಅರಮನೆಯ ವಿದ್ಯುತ್ ದೀಪಗಳ ದುರಸ್ತಿ ಕಾರ್ಯ ಆರಂಭವಾಗಿದೆ. ವಿದ್ಯುತ್ ದೀಪ ಹೊತ್ತಿಸಿ, ಬಲ್ಬ್, ಹೋಲ್ಡರ್, ವೈರಿಂಗ್ ಅನ್ನು ಎಲೆಕ್ಟ್ರಿಷಿಯನ್ಸ್ ಸರಿಪಡಿಸುತ್ತಿದ್ದಾರೆ. ಕ್ರೇನ್ ಸಹಾಯದಿಂದ ವಿದ್ಯುತ್ ದೀಪಗಳ ದುರಸ್ತಿ ಕಾರ್ಯ ನಡೆಯುತ್ತಿದೆ. ಒಡೆದು ಹೋಗಿರುವ ಬಲ್ಬ್‌ಗಳನ್ನು ತೆರವುಗೊಳಿಸಿ ಹೊಸ ಬಲ್ಬ್‌ಗಳನ್ನು ಅಳವಡಿಸಲಾಗುತ್ತಿದೆ.
ಅಕ್ಟೋಬರ್ 7ರಿಂದ ಆರಂಭವಾಗಲಿರುವ #ನಾಡಹಬ್ಬದಸರಾ ಮಹೋತ್ಸವವನ್ನು ಉದ್ಘಾಟಿಸಲು ಹಿರಿಯ ಮುತ್ಸದ್ಧಿ, ಮಾಜಿ ಮುಖ್ಯಮಂತ್ರಿ ಶ್ರೀ ಎಸ್.ಎಂ.ಕೃಷ್ಣ ರವರಿಗೆ ಆಹ್ವಾನ ನೀಡಲು ರಾಜ್ಯಸರ್ಕಾರ ನಿರ್ಧರಿಸಿದೆ. ದಸರಾ ಹಬ್ಬದ ಸಿದ್ಧತೆ ಕುರಿತು ಚರ್ಚಿಸಲು ಮುಖ್ಯಮಂತ್ರಿ @BSBommai ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಯಿತು
— CM of Karnataka (@CMofKarnataka) September 28, 2021
ಅ.1ಕ್ಕೆ ಸಿಂಹಾಸನ ಜೋಡಣೆ
ಅಕ್ಟೋಬರ್ 1 ಶುಕ್ರವಾರ ಅಭಿಜಿತ್ ಲಗ್ನದಲ್ಲಿ ಸಿಂಹಾಸನ ಜೋಡಣೆ ಕಾರ್ಯ ನಡೆಯಲಿದ್ದು, ಅದಕ್ಕೂ ಮುನ್ನ ಹೋಮ ಹವನ ನಡೆಯಲಿದೆ. ಇನ್ನು ಖಾಸಗಿ ದರ್ಬಾರ್ ಹಾಲ್ ನಲ್ಲಿ ಈ ಜೋಡಣೆ ಕಾರ್ಯ ನಡೆಯಲಿದ್ದು, ಪ್ರವಾಸಿಗರಿಗೆ, ಸಾರ್ವಜನಿಕರಿಗೆ ಅಂದು ಅರಮನೆ ಪ್ರವೇಶ ನಿರ್ಬಂಧ ಹೇರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.