ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಖಾಯಂ
Team Udayavani, Sep 29, 2021, 4:03 PM IST
ಬೆಂಗಳೂರು : ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಖಾಯಂ ಗೊಳಿಸಿ ಬುಧವಾರ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದ್ದು, ಕ್ಷಮಾದಾನದ ಅರ್ಜಿಯನ್ನು ತಿರಸ್ಕರಿಸಿದೆ.
ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಎರೋರ್ ಮತ್ತು ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಪೀಠ , ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸಲು ಮನವಿ ಮಾಡಿ ಉಮೇಶ್ ರೆಡ್ಡಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿ ಈ ತೀರ್ಪು ನೀಡಿದೆ.
ವಕೀಲ ಬಿ ಎನ್. ಜಗದೀಶ್ ಮೂಲಕ ಅರ್ಜಿ ಸಲ್ಲಿಸಿದ್ದ ಉಮೇಶ್ ರೆಡ್ಡಿ, 10 ವರ್ಷಗಳ ಕಾಲ ನನ್ನನ್ನು ಒಂಟಿಸೆರೆಯಲ್ಲಿಡಲಾಗಿತ್ತು, ಕ್ಷಮಾದಾನ ಅರ್ಜಿ ಇತ್ಯರ್ಥ ವಿಳಂಬಿಸಲಾಗಿತ್ತು. ನಾನು ತೀವ್ರ ಮಾನಸಿಕ ಯಾತನೆ ಅನುಭವಿಸಿದ್ದಾಗಿ ವಾದ ಮುಂದಿಟ್ಟಿದ್ದ. ಆದರೆ ಕೋರ್ಟ್ ವಾದವನ್ನು ತಳ್ಳಿಹಾಕಿ, ”ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ವಿಳಂಬ ಮಾಡಿಲ್ಲ. ಒಂಟಿ ಸೆರೆವಾಸದಲ್ಲಿದ್ದ ಎನ್ನಲಾಗದು” ಎಂದು ಅಭಿಪ್ರಾಯಪಟ್ಟಿದೆ.
ಸಮಯಾಕಾಶವನ್ನು ಕೋರಿದ್ದ ಉಮೇಶ್ ರೆಡ್ಡಿ ಮನವಿಯನ್ನು ಒಪ್ಪಿದ ಕೋರ್ಟ್, ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲು 6 ವಾರ ಕಾಲಾವಕಾಶ ನೀಡಿದೆ . ‘6 ವಾರ ಉಮೇಶ್ ರೆಡ್ಡಿಯನ್ನು ಗಲ್ಲಿಗೇರಿಸುವಂತಿಲ್ಲ. ಗಲ್ಲು ಶಿಕ್ಷೆಯಾದ ಕಾರಣ ಈ ಕಾಲಾವಕಾಶ ನೀಡುತ್ತಿದೆ’ ಎಂದಿದೆ.
ಸದ್ಯ ಉಮೇಶ್ ರೆಡ್ಡಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾನೆ .
ಚಿತ್ರದುರ್ಗ ಮೂಲದ ಉಮೇಶ್ ರೆಡ್ಡಿ ಬೆಂಗಳೂರು ಸೇರಿದಂತೆ ಹಲವೆಡೆ ಸುಮಾರು 20 ಕ್ಕೂ ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಹತ್ಯೆಗೈದು ‘ವಿಕೃತ ಕಾಮಿ’ ಎಂಬ ಕುಖ್ಯಾತಿಗೆ ಪಾತ್ರನಾಗಿದ್ದ.
ಜಯಶ್ರೀ ಎಂಬ ಮಹಿಳೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನ ಅಧೀನ ನ್ಯಾಯಾಲಯ 2006ರಲ್ಲಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. ಹೈಕೋರ್ಟ್ನ ವಿಭಾಗೀಯ ಪೀಠ ಅಧೀನ ನ್ಯಾಯಾಲಯ ನೀಡಿದ್ದ ಗಲ್ಲು ಶಿಕ್ಷೆಯನ್ನು 2007ರಲ್ಲಿ ಖಾಯಂಗೊಳಿಸಿತ್ತು. ಸುಪ್ರೀಂಕೋರ್ಟ್ ಕೂಡ 2011ರಲ್ಲಿ ಹೈಕೋರ್ಟ್ನ ತೀರ್ಪನ್ನು ಎತ್ತಿಹಿಡಿದಿತ್ತು.
ಉಮೇಶ್ ರೆಡ್ಡಿ ರಾಜ್ಯಪಾಲರು ಹಾಗೂ ರಾಷ್ಟ್ರಪತಿಗಳಿಗೆ ಹಲವು ಬಾರಿ ಕ್ಷಮಾದಾನ ಅರ್ಜಿ ಸಲ್ಲಿಸಿದ್ದರೂ ವಜಾಗೊಂಡಿದ್ದವು. ಆನಂತರ ರೆಡ್ಡಿ ಸುಪ್ರೀಂಕೋರ್ಟ್ನಲ್ಲಿ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯೂ ವಜಾಗೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Puttur: ಇದು ಅಜಿತರ ಸಾಹಸ : ರಬ್ಬರ್ ತೋಟದಲ್ಲಿ ಕಾಫಿ ಘಮ ಘಮ
Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.