ಮಕ್ಕಳ ಸಂಖ್ಯೆ ಹೆಚ್ಚಳ: ಮೂಲಸೌಕರ್ಯ ಸಾಲುತ್ತಿಲ್ಲ!

ಸುಳ್ಕೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ

Team Udayavani, Sep 30, 2021, 6:44 AM IST

ಮಕ್ಕಳ ಸಂಖ್ಯೆ ಹೆಚ್ಚಳ: ಮೂಲಸೌಕರ್ಯ ಸಾಲುತ್ತಿಲ್ಲ!

ಕೊಲ್ಲೂರು: ಜಡ್ಕಲ್‌ ಗ್ರಾ.ಪಂ. ವ್ಯಾಪ್ತಿಯ ಸುಳ್ಕೋಡಿನ ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಸೌಕರ್ಯಗಳ ಕೊರತೆ ಇದ್ದು, ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡಲು ಸರಕಾರ ಮುಂದಾಗಬೇಕಾಗಿದೆ.

1967ರಲ್ಲಿ ಪ್ರಾರಂಭವಾದ ಸುಳ್ಕೋಡು ಹಿರಿಯ ಪ್ರಾಥಮಿಕ ಶಾಲೆ ಇಲ್ಲಿನ ಗ್ರಾಮಸ್ಥರ ನೆಚ್ಚಿನ ಶಾಲೆಯಾಗಿ ಮೂಡಿಬಂದಿದೆ.

ಹೊಸ ಕಟ್ಟಡ‌ ಅಗತ್ಯ
ಸುಮಾರು 50 ವರ್ಷಗಳ ಹಿಂದೆ ನಿರ್ಮಿಸಲಾಗಿರುವ ಶಾಲಾ ಕಟ್ಟಡ ಶಿಥಿಲಗೊಂಡಿದ್ದು, ಹಳೆಕಟ್ಟಡ ಕೆಡವಿ ಹೊಸದಾಗಿ ನಿರ್ಮಿಸಬೇಕಾದ ಅಗತ್ಯ ಕಂಡುಬಂದಿದೆ. ಗ್ರಾಮೀಣ ಪ್ರದೇಶದ ಈ ಶಾಲೆಯಲ್ಲಿ 1ನೇ ತರಗತಿಯಿಂದ 7ನೇ ತರಗತಿ ತನಕ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡಲಾಗುತ್ತಿದೆ.

ಶಾಲೆಯಲ್ಲಿರುವ ಸೌಲಭ್ಯಗಳು
ಸುವರ್ಣ ವಿದ್ಯಾನಿಧಿ ಸ್ಥಾಪನೆ, ಕಂಪ್ಯೂಟರ್‌ ಶಿಕ್ಷಣ, ಸ್ಮಾರ್ಟ್‌ ಕ್ಲಾಸ್‌, ಶಾಲೆಗೆ ಕಾಂಪೌಂಡ್‌ ಹಾಗೂ ರಸ್ತೆ ನಿರ್ಮಾಣವಾಗಿದೆ.

ವಿದ್ಯಾರ್ಥಿಗಳ ಸಂಖ್ಯೆ ಏರಿಕೆ
ಕಳೆದ ವರ್ಷ 1ರಿಂದ 7ನೇ ತರಗತಿ ತನಕ 103 ವಿದ್ಯಾರ್ಥಿಗಳಿದ್ದರು. ಈ ವರ್ಷ 123 ವಿದ್ಯಾರ್ಥಿಗಳಿದ್ದಾರೆ. 2020-21ನೇ ಸಾಲಿನ 1ನೇ ತರಗತಿಯಲ್ಲಿ 15 ವಿದ್ಯಾರ್ಥಿ ಗಳಿದ್ದು, 2021-22ನೇ ಸಾಲಿನಲ್ಲಿ 18 ವಿದ್ಯಾರ್ಥಿಗಳಿದ್ದಾರೆ. 2ನೇ ತರಗತಿಯಲ್ಲಿ ಕಳೆದ ವರ್ಷ 14, ಈ ವರ್ಷ 18, 3ನೇ ತರಗತಿಯಲ್ಲಿ ಈ ವರ್ಷ 14, 4ನೇ ತರಗತಿಯಲ್ಲಿ 20, 5ನೇ ತರಗತಿಯಲ್ಲಿ 18, 6ನೇ ತರಗತಿಯಲ್ಲಿ 23, 7ನೇ ತರಗತಿಯಲ್ಲಿ 12 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ.

ಇದನ್ನೂ ಓದಿ:ಪಂಜಾಬ್ ರಾಜಕೀಯ ಬೆಳವಣೆಗೆಗೆ ಬಿಗ್ ಟ್ವಿಸ್ಟ್ | ಕುತೂಹಲ ಮೂಡಿಸಿದ ಶಾ-ಕ್ಯಾಪ್ಟನ್ ಭೇಟಿ   

ಕೊರತೆಗಳು ಹಲವು
ಹೈಟೆಕ್‌ ಶೌಚಾಲಯದ ಕೊರತೆ ಇದೆ. 2000ನೇ ಇಸವಿಯಲ್ಲಿ ಸರ್ವಶಿಕ್ಷಣ ಅಭಿಯಾನದಡಿ ನಿರ್ಮಾಣಗೊಂಡ ಶೌಚಾಲಯವಿದ್ದು, ಅದನ್ನು ಬದಲಾಯಿಸುವ ಅಗತ್ಯ ಇದೆ. ಕಚೇರಿ ಹಾಗೂ ಕಂಪ್ಯೂಟರ್‌ ಕೊಠಡಿ ಕೊರತೆ ಇದೆ. ಪೀಠೊಪಕರಣಗಳ ಕೊರತೆ ಇದ್ದು, ವಾಚನಾಲಯದ ಅಗತ್ಯತೆ ಇದೆ. ಪ್ರಯೋಗಾಲಯ ನಿರ್ಮಿಸಿದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವುದು. ಪರಿಸರದ ಕಾನ್ಕಿ,ಹುಲಿಪಾರೆ, ಬೀಸಿನಪಾರೆ, ನಂದಿಗದ್ದೆ, ಗೋಳಿಗುಡ್ಡೆ, ಹೆಮ್ಮಕ್ಕಿ, ಹರ್ಕೋಡು ಪರಿಸರದಿಂದ ವಿದ್ಯಾರ್ಥಿಗಳು ಇಲ್ಲಿಗೆ ಆಗಮಿಸುತ್ತಾರೆ.

ಶಿಕ್ಷಕರ ಕೊರತೆ
ಕನಿಷ್ಠ 6 ಶಿಕ್ಷಕರಿರಬೇಕಾದ ಈ ಶಾಲೆಯಲ್ಲಿ ಕೇವಲ 3 ಶಿಕ್ಷಕರಿದ್ದಾರೆ. ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರ ಸಂಖ್ಯೆಯನ್ನು ಹೆಚ್ಚಿಸಬೇಕಾಗಿದೆ.

ಅಭಿವೃದ್ಧಿ ಕಾರ್ಯಗಳು ನಡೆದಿವೆ
ಸುಳ್ಕೋಡು ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಶಾಸಕರು ಹಾಗೂ ವಿದ್ಯಾಭಿಮಾನಿಗಳ ಸಹಕಾರದಿಂದ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಇನ್ನಷ್ಟು ಮೂಲಸೌಕರ್ಯಗಳಿಗೆ ಬೇಡಿಕೆಗಳಿದ್ದು, ಅವುಗಳನ್ನು ಈಡೇರಿಸಿದಲ್ಲಿ ಅನುಕೂಲವಾದೀತು.
– ಭಾಸ್ಕರ್‌ ನಾಯ್ಕ, ಮುಖ್ಯ ಶಿಕ್ಷಕರು

ಇನ್ನಷ್ಟು ಬೇಡಿಕೆ
ಶಾಲಾಭಿವೃದ್ಧಿಗೆ ಪೂರಕವಾದ ಅನೇಕ ಕಾರ್ಯಗಳು ನಡೆದಿವೆ. ಇನ್ನಷ್ಟು ಸೌಕರ್ಯಗಳಿಗೆ ಬೇಡಿಕೆಗಳಿದ್ದು, ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.
-ಮಾಲತಿ ಗೋಪಾಲ ನಾಯ್ಕ,
ಎಸ್‌.ಡಿ.ಎಂ.ಸಿ. ಅಧ್ಯಕ್ಷೆ

-ಡಾ| ಸುಧಾಕರ ನಂಬಿಯಾರ್‌

ಟಾಪ್ ನ್ಯೂಸ್

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.