ಹಾನಗಲ್ಲ ಉಪಚುನಾವಣೆ| ಟಿಕೆಟ್‌ ಪಡೆಯಲು ಆಕಾಂಕ್ಷಿಗಳ ಪೈಪೋಟಿ

ಅಭ್ಯರ್ಥಿಗಳು ಯಾರೆಂಬ ಕುತೂಹಲ | ಗರಿಗೆದರಿದ ರಾಜಕೀಯ ಚಟುವಟಿಕೆ | ಮುಖಂಡರ ಮನೆಗಳಿಗೆ ಅಲೆದಾಟ

Team Udayavani, Sep 30, 2021, 4:07 PM IST

dfdsrew

ವರದಿ: ವೀರೇಶ ಮಡ್ಲೂರ

ಹಾವೇರಿ: ಜಿಲ್ಲೆಯ ಹಾನಗಲ್ಲ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಟಿಕೆಟ್‌ಗಾಗಿ ಆಕಾಂಕ್ಷಿಗಳು ರಾಜ್ಯ ಮುಖಂಡರ ಮನೆಗಳಿಗೆ ಅಲೆದಾಟ ಆರಂಭಿಸಿದ್ದು, ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿದೆ.

2018ರ ಚುನಾವಣೆಯಲ್ಲಿ ಹಾನಗಲ್ಲ ಕ್ಷೇತ್ರದಿಂದ ಗೆದ್ದಿದ್ದ ಸಿ.ಎಂ. ಉದಾಸಿ ಅವರು ಕಳೆದ ಜೂ. 8ರಂದು ನಿಧನರಾದ ಹಿನ್ನೆಲೆಯಲ್ಲಿ ಉಪಚುನಾವಣೆ ಘೋಷಣೆಯಾಗಿದೆ. ಅ. 30ರಂದು ಮತದಾನ ನಡೆಯಲಿದ್ದು, ಚುನಾವಣೆಗೆ ಬರೋಬ್ಬರಿ ಒಂದು ತಿಂಗಳಷ್ಟೇ ಬಾಕಿಯಿದೆ. ಆದ್ದರಿಂದ ಪಕ್ಷದ ಟಿಕೆಟ್‌ ಪಡೆಯಲು ಆಕಾಂಕ್ಷಿಗಳು ಮುಖಂಡರ ಮನೆಗಳ ಬಾಗಿಲು ತಟ್ಟುತ್ತಿದ್ದು, ಕ್ಷೇತ್ರದಲ್ಲಿ ತಮ್ಮ ಕಾರ್ಯ ಸಾಧನೆಗಳ ಬಗ್ಗೆ ಮುಖಂಡರಿಗೆ ಮನವರಿಕೆ ಮಾಡಲು ಮುಂದಾಗುತ್ತಿದ್ದಾರೆ. ಇತ್ತ ಮುಖಂಡರು ಆಕಾಂಕ್ಷಿಗಳಿಗೆ ಟಿಕೆಟ್‌ ನೀಡುವ ಭರವಸೆ ಕೊಟ್ಟು ಕಳಿಸುವ ಕೆಲಸ ಮಾಡುತ್ತಿದ್ದು, ಯಾವ ಪಕ್ಷ‌ದಿಂದ ಯಾರು ಅಭ್ಯರ್ಥಿಗಳಾಗುತ್ತಾರೆ ಎಂಬ ಕುತೂಹಲ ಮೂಡಿಸಿದೆ.

ಬಿಜೆಪಿಗೆ ಪ್ರತಿಷ್ಠೆಯ ಕಣ: ಹಾನಗಲ್ಲ ವಿಧಾನಸಭಾ ಕ್ಷೇತ್ರದಿಂದ ಸಿ.ಎಂ. ಉದಾಸಿ ಅವರು 6 ಬಾರಿ ಗೆದ್ದು ಇತಿಹಾಸ ನಿರ್ಮಿಸಿದ್ದರು. 2018ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಶ್ರೀನಿವಾಸ ಮಾನೆ ವಿರುದ್ಧ 6,514 ಮತಗಳ ಅಂತರದಿಂದ ಉದಾಸಿ ಗೆಲುವು ಸಾಧಿಸಿದ್ದರು. ಹೀಗಾಗಿ ಹಾನಗಲ್ಲ ಕ್ಷೇತ್ರ ಉದಾಸಿ ಹಾಗೂ ಬಿಜೆಪಿಯ ಭದ್ರ ಕೋಟೆಯೆಂದೇ ಪರಿಗಣಿತವಾಗಿತ್ತು. ಆದರೆ ಈ ಬಾರಿ ಬಿಜೆಪಿ ಉದಾಸಿ ಅವರ ಹೆಸರಿನ ಮೇಲೆ ಚುನಾವಣೆ ಎದುರಿಸುವಂತಾಗಿದೆ. ಅಲ್ಲದೇ ಸಿಎಂ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯಲ್ಲಿ ನಡೆಯುತ್ತಿರುವ ಚುನಾವಣೆಯಾಗಿದ್ದರಿಂದ ಬಿಜೆಪಿ ಪಾಲಿಗೆ ಪ್ರತಿಷ್ಠೆಯ ಕಣವಾಗಿ ಪರಿಣಮಿಸಿದೆ.

ಸಿ.ಎಂ. ಉದಾಸಿ ಅವರ ಪುತ್ರ ಶಿವಕುಮಾರ ಉದಾಸಿ ಸಂಸದರಾಗಿರುವುದರಿಂದ ಪಕ್ಷ‌ದ ಅಭ್ಯರ್ಥಿಯನ್ನು ಹಾಗೂ ಅಪ್ಪ ಪ್ರತಿನಿಧಿಸುತ್ತಿರುವ ಕ್ಷೇತ್ರದಲ್ಲಿ ಮತ್ತೂಮ್ಮೆ ಬಿಜೆಪಿ ಬಾವುಟ ಹಾರಿಸುವುದು ಅವರಿಗೂ ಅನಿವಾರ್ಯವಾಗಿದೆ. ಆದ್ದರಿಂದ ಸೂಕ್ತ ಅಭ್ಯರ್ಥಿ ಕಣಕ್ಕಿಳಿಸಲು ಬಿಜೆಪಿ ತಯಾರಿ ನಡೆಸಿದೆ.

ಅನುಕಂಪದ ಲಾಭ ಪಡೆಯಲು ಉದಾಸಿ ಕುಟುಂಬದವರಿಗೇ ಟಿಕೆಟ್‌ ನೀಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ಸಿ.ಎಂ.ಉದಾಸಿ ಅವರ ಸೊಸೆ, ಸಂಸದ ಉದಾಸಿ ಅವರ ಪತ್ನಿ ರೇವತಿ ಉದಾಸಿಯವರನ್ನೇ ಕಣಕ್ಕಿಳಿಸುವ ಸಾಧ್ಯತೆ ಬಗ್ಗೆ ಕೇಳಿ ಬರುತ್ತಿದೆ. ಇದರ ಜೊತೆಗೆ ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ಧರಾಜ ಕಲಕೋಟಿ, ಮಾಜಿ ಶಾಸಕ ಶಿವರಾಜ ಸಜ್ಜನರ, ಕುರಿ ಹಾಗೂ ಉಣ್ಣೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ‌ ಭೋಜರಾಜ ಕರೂದಿ, ಸಿ.ಆರ್‌. ಬಳ್ಳಾರಿ, ಮಾಲತೇಶ ಸೊಪ್ಪಿನ, ಕಲ್ಯಾಣಕುಮಾರ ಶೆಟ್ಟರ, ಬಸವರಾಜ ಹಾದಿಮನಿ ಸೇರಿದಂತೆ ಅನೇಕರು ಟಿಕೆಟ್ ಗಾಗಿ ಪ್ರಯತ್ನ ನಡೆಸಿದ್ದಾರೆ.

ಟಾಪ್ ನ್ಯೂಸ್

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra Poll: ವಿಪಕ್ಷಗಳ ದೂರವಾಣಿ ಕದ್ದಾಲಿಕೆ-ಪೊಲೀಸ್‌ ವರಿಷ್ಠಾಧಿಕಾರಿ ವರ್ಗಾವಣೆ!

Maharashtra Poll: ವಿಪಕ್ಷಗಳ ದೂರವಾಣಿ ಕದ್ದಾಲಿಕೆ-ಪೊಲೀಸ್‌ ವರಿಷ್ಠಾಧಿಕಾರಿ ವರ್ಗಾವಣೆ!

Maharashtra Election:ಕೈತಪ್ಪಿದ ಟಿಕೆಟ್-ಶಿಂಧೆ ಸೇನಾ ಶಾಸಕ ವಂಗಾ ನಾಪತ್ತೆ, ಪೊಲೀಸರ ಶೋಧ!

Maharashtra Election:ಕೈತಪ್ಪಿದ ಟಿಕೆಟ್-ಶಿಂಧೆ ಸೇನಾ ಶಾಸಕ ವಂಗಾ ನಾಪತ್ತೆ, ಪೊಲೀಸರ ಶೋಧ!

Maharashtra Assembly Elections: Congress released list of 23 candidates

Maharashtra Assembly Elections: 23 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

Zeeshan Siddique: ಬಾಬಾ ಸಿದ್ದಿಕಿ ಪುತ್ರ ಝೀಶಾನ್ ಸಿದ್ದಿಕಿ ಎನ್‌ಸಿಪಿಗೆ ಸೇರ್ಪಡೆ…

Zeeshan Siddique: ಬಾಬಾ ಸಿದ್ದಿಕಿ ಪುತ್ರ ಝೀಶಾನ್ ಸಿದ್ದಿಕಿ ಎನ್‌ಸಿಪಿಗೆ ಸೇರ್ಪಡೆ…

ಕಾನೂನು ಸಮರದಲ್ಲಿ ಪವಾರ್‌ ಗೆ ಕೈ ಕೊಟ್ಟ “ಗಡಿಯಾರ”, ಸುಪ್ರೀಂನಲ್ಲಿ ಅಜಿತ್‌ ಬಣಕ್ಕೆ ಮೇಲುಗೈ

ಕಾನೂನು ಸಮರದಲ್ಲಿ ಪವಾರ್‌ ಗೆ ಕೈ ಕೊಟ್ಟ “ಗಡಿಯಾರ”, ಸುಪ್ರೀಂನಲ್ಲಿ ಅಜಿತ್‌ ಬಣಕ್ಕೆ ಮೇಲುಗೈ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.