ಹಿಂದುಳಿದ ವರ್ಗಗಳ ಜಾತಿ ಗಣತಿ: ಸಿದ್ದರಾಮಯ್ಯ ಸುಳ್ಳು ಹೇಳಿದ್ದಾರೆ


Team Udayavani, Sep 30, 2021, 5:22 PM IST

jagadeesh-shettar

ಹುಬ್ಬಳ್ಳಿ: ಹಿಂದುಳಿದ ವರ್ಗಗಳ ನಾಯಕರೆಂದು ಕರೆಯಿಸಿಕೊಳ್ಳುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಸಿದ್ದವಾಗಿದ್ದ ಹಿಂದುಳಿದ ವರ್ಗಗಳ ಜಾತಿ ಗಣತಿ ವರದಿ ಬಿಡುಗಡೆ ಮಾಡಲು ಹಿಂದೇಟು ಹಾಕಿ ಇದೀಗ ಬಿಜೆಪಿ ಸರಕಾರದ ಮೇಲೆ ಒತ್ತಡ ಹಾಕುವ ಕೆಲಸ ಮಾಡುತ್ತಿದ್ದು, ತಮ್ಮ ಅವಧಿಯಲ್ಲಿ ಯಾಕೆ ಬಿಡುಗಡೆ ಮಾಡಲಿಲ್ಲ. ಇದೀಗ ಬಿಡುಗಡೆ ಮಾಡಬೇಕೋ ಬೇಡವೋ ಎನ್ನುವುದು ಸರಕಾರಕ್ಕೆ ಬಿಟ್ಟ ವಿಚಾರ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದ್ದಾರೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘2013ರಲ್ಲಿ ಹಿಂದುಗಳಿದ ವರ್ಗಗಳ ಜಾತಿಗಣತಿಗೆ ಆದೇಶಿಸಿದರು. 1931ರ ನಂತರ ಮೊದಲ ಬಾರಿಗೆ ಜಾತಿ ಗಣತಿ ಎಂದು ಬಿಂಬಿಸಿಕೊಂಡಿದ್ದರು. 2015 ರಲ್ಲಿ ವರದಿ ಸಿದ್ದವಾಯಿತು. ಆದರೆ ಆಯೋಗದಿಂದ ವರದಿಯನ್ನು ಸರಕಾರ ಪಡೆಯಲಿಲ್ಲ. ಬಿಡುಗಡೆಗೆ ತಮ್ಮ ಪಕ್ಷದಲ್ಲಿ ಸಾಕಷ್ಟು ವಿರೋಧಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಬಿಡುಗಡೆ ಮಾಡಲಿಲ್ಲ. ಹಿಂದೆ ಸಮ್ಮಿಶ್ರ ಸರಕಾರದ ಸಂದರ್ಭದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಒತ್ತಾಯ ಮಾಡಲಿಲ್ಲ. ಇದೀಗ ಟ್ವೀಟ್‌ಗಳ ಮೂಲಕ ಹಿಂದುಗಳಿದ ವರ್ಗಗಳ ಬಗ್ಗೆ ಡೋಂಗಿ ಕಾಳಜಿ ತೋರುತ್ತಿದ್ದಾರೆ. ಅಲ್ಲದೆ ಮುಖ್ಯಮಂತ್ರಿ ಚಂದ್ರು ಅವರ ಮೂಲಕ ಪಿಐಎಲ್ ಹಾಕಿಸಿದ್ದು, ಅದರಲ್ಲಿ 2015 ರಲ್ಲಿ ಪೂರ್ಣಗೊಂಡ ವರದಿ ಬಿಡುಗಡೆ ಆದೇಶ ಮಾಡುವಂತೆ ಕೋರ್ಟ್‌ನ್ನು ಕೋರಿದ್ದಾರೆ. ಸುಳ್ಳುಗಳನ್ನು ಹೇಳುವುದರಲ್ಲಿ ಸಿದ್ದರಾಮಯ್ಯ ನಿಸ್ಸೀಮರಾಗಿದ್ದಾರೆ’ಎಂದರು.

ನಿರ್ಧಾರ ಸರಕಾರಕ್ಕೆ ಬಿಟ್ಟಿದ್ದು
‘ಹಿಂದುಳಿದ ವರ್ಗಗಳ ವರದಿ ಬಿಡುಗಡೆ ಬಗ್ಗೆ ಸುಳ್ಳು ಹೇಳುತ್ತಿರುವ ಸಿದ್ದರಾಮಯ್ಯ ಅವರ ಬಣ್ಣ ಬಯಲು ಮಾಡಬೇಕಿತ್ತು. ಆದರೆ ವರದಿ ಬಿಡುಗಡೆ ಮಾಡುವುದು ಸರಕಾರಕ್ಕೆ ಹಾಗೂ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ವರದಿಯಲ್ಲಿ ಏನಿದೆ ಎನ್ನುವುದರ ಕುರಿತಾಗಿ ನನಗೆ ಯಾವುದೇ ಮಾಹಿತಿಯಿಲ್ಲ. ಮುಖ್ಯಮಂತ್ರಿಗಳು, ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷರು ಇದರ ಬಗ್ಗೆ ಚಿಂತನೆ ಮಾಡಿ ನಿರ್ಧಾರ ತೆಗೆದುಕೊಳ್ಳಬೇಕು. ಸರಕಾರದ ಯಾವ ಹುದ್ದೆಯಲ್ಲಿ ನಾನು ಇಲ್ಲದಿರುವುದರಿಂದ ನಾನು ಈ ಬಗ್ಗೆ ಉತ್ತರಿಸುವುದು ಸೂಕ್ತವಲ್ಲ. ವರದಿ ಬಗ್ಗೆ ಪಕ್ಷದೊಳಗೆ ಯಾವುದೇ ಚರ್ಚೆಗಳು ಆಗಿಲ್ಲ. ಸಿದ್ದಾಮಯ್ಯ ಅವರು ಸುಳ್ಳು ಹೇಳಿದ್ದಾರೆ ಎನ್ನುವುದನ್ನು ಹೊರಹಾಕುವುದಷ್ಟೇ ನಮ್ಮ ಉದ್ದೇಶ’ ಎಂದರು.

 

ಟಾಪ್ ನ್ಯೂಸ್

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ರಾಜ್ಯಸಭೆ ಬಹುಮತದತ್ತ ಬಿಜೆಪಿ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

school

KPS ಹೆಚ್ಚುವರಿ ಎಲ್‌ಕೆಜಿ, 1ನೇ ತರಗತಿ ತೆರೆಯಲು ಅವಕಾಶ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Police

Manya: ಭಜನ ಮಂದಿರದಿಂದ ಕಳವು ಆರೋಪಿಗಳಿಂದ ಮಾಹಿತಿ ಸಂಗ್ರಹ

Suside-Boy

Putturu: ಬಡಗನ್ನೂರು: ನೇಣು ಬಿಗಿದು ಆತ್ಮಹ*ತ್ಯೆ

school

KPS ಹೆಚ್ಚುವರಿ ಎಲ್‌ಕೆಜಿ, 1ನೇ ತರಗತಿ ತೆರೆಯಲು ಅವಕಾಶ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

Modi-Tour

Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.