![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 30, 2021, 6:52 PM IST
ಬೆಂಗಳೂರು: ಕೃಷಿ ಉತ್ಪನ್ನಗಳ ಮಾರಾಟಕ್ಕೆ ಇ-ಕಾಮರ್ಸ್ ವೇದಿಕೆಯಲ್ಲಿ ಅವಕಾಶ ದೊರೆಯಬೇಕು ಹಾಗೂ ಇದರ ನೇರ ಲಾಭ ಉತ್ಪಾದಕರಿಗೆ ದೊರೆಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.
ಅವರು ಗುರುವಾರ ತಮ್ಮನ್ನು ಭೇಟಿಯಾದ ಫ್ಲಿಪ್ ಕಾರ್ಟ್ ಸಂಸ್ಥೆಯ ರಜನೀಶ್ ಕುಮಾರ್ ಅವರೊಂದಿಗೆ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಫ್ಲಿಪ್ ಕಾರ್ಟ್ ಸಂಸ್ಥೆಯು ರಾಜ್ಯದಲ್ಲಿ ಸಾವಿರಾರು ಜನರಿಗೆ ಉದ್ಯೋಗ ನೀಡಿರುವುದಲ್ಲದೆ, ರೈತರು, ಸಣ್ಣ ಉತ್ಪಾದಕರಿಗೆ, ಕರಕುಶಲ ವಸ್ತುಗಳ ವ್ಯಾಪಾರಕ್ಕೆ ಅವಕಾಶ ಒದಗಿಸಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ರೈತರಿಗೆ ಕೃಷಿ ಉತ್ಪನ್ನಗಳ ಮೌಲ್ಯ ವರ್ಧನೆಯೊಂದಿಗೆ ಇ-ಕಾಮರ್ಸ್ ವೇದಿಕೆ ಮೂಲಕ ಮಾರುಕಟ್ಟೆಯ ಬೇಡಿಕೆಗಳ ಕುರಿತು ಮಾಹಿತಿಯೂ ದೊರೆಯುವಂತಿರಬೇಕು. ಇದರಿಂದ ಅವರಿಗೆ ಅನುಕೂಲವಾಗುವುದು ಎಂದು ನುಡಿದರು.
ರಾಜ್ಯದಲ್ಲಿ ಕೃಷಿ ಉತ್ಪನ್ನಗಳು, ಕರಕುಶಲ ಕರ್ಮಿಗಳು, ನೇಕಾರರಿಗೆ ಹೆಚ್ಚಿನ ಬೆಂಬಲ ನೀಡುವಂತೆ ಸಲಹೆ ನೀಡಿದರು. ಹತ್ತು ಕೃಷಿ ಹವಾಮಾನ ವಲಯಗಳನ್ನು ಹೊಂದಿರುವ ರಾಜ್ಯದಲ್ಲಿ ಕಾಫಿ, ಸಂಬಾರ ಪದಾರ್ಥಗಳು, ಜೋಳ, ಎಣ್ಣೆ ಬೀಜ, ತೃಣಧಾನ್ಯಗಳು ಹೀಗಿ ವೈವಿಧ್ಯಮಯ ಉತ್ಪನ್ನಗಳು ಲಭ್ಯವಿದೆ. ಇವುಗಳಿಗೆ ಉತ್ತಮ ಮಾರುಕಟ್ಟೆ ಒದಗಿಸಲು ಕೈಜೋಡಿಸುವಂತೆ ಸಲಹೆ ನೀಡಿದರು. ಈ ಕುರಿತಂತೆ ರಾಜ್ಯ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಳ್ಳುವಂತೆ ತಿಳಿಸಿದರು.
ರಾಜ್ಯದಲ್ಲಿ ಉದ್ಯೋಗ ನೀತಿ ರೂಪಿಸುವ ಮೂಲಕ ಉದ್ಯೋಗ ಸೃಜನೆ ಆಧರಿಸಿ ವಾಣಿಜ್ಯೋದ್ಯಮಗಳಿಗೆ ಉತ್ತೇಜನ ನೀಡಲು ಕ್ರಮ ವಹಿಸಲಾಗುವುದು. ಇದು ದೇಶದಲ್ಲೇ ಮೊದಲ ಪ್ರಯತ್ನ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಕಾರ್ಯದರ್ಶಿ ಗಿರೀಶ್ ಹೊಸೂರ್ ಉಪಸ್ಥಿತರಿದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.