ಚೊಚ್ಚಲ ಟೆಸ್ಟ್ ಶತಕ ಬಾರಿಸಿ ಮೆರೆದಾಡಿದ ಸ್ಮೃತಿ ಮಂಧನಾ
Team Udayavani, Oct 1, 2021, 11:12 AM IST
ಕ್ವೀನ್ಸ್ ಲ್ಯಾಂಡ್: ಅತಿಥೇಯ ಆಸ್ಟ್ರೇಲಿಯಾ ವನಿತೆಯರ ವಿರುದ್ಧದ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಭಾರತದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧನಾ ಭರ್ಜರಿ ಶತಕ ಬಾರಿಸಿ ಮೆರೆದಾಡಿದ್ದಾರೆ. ಈ ಮೂಲಕ ಪಿಂಕ್ ಬಾಲ್ ಟೆಸ್ಟ್ ನಲ್ಲಿ ಶತಕ ಬಾರಿಸಿದ ಮೊದಲ ಭಾರತೀಯ ಮಹಿಳಾ ಆಟಗಾರ್ತಿ ಎಂಬ ಗರಿಮೆಗೆ ಪಾತ್ರರಾದರು.
ಇಲ್ಲಿನ ಕರಾರಾ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ ಭಾರತ ಆರಂಭಿಕ ಗೌರವ ಸಂಪಾದನೆ ಮಾಡಿದೆ. ಮೊದಲ ದಿನದಾಟದ ಅಂತ್ಯಕ್ಕೆ ಒಂದು ವಿಕೆಟ್ ನಷ್ಟಕ್ಕೆ 132 ರನ್ ಗಳಿಸಿದ್ದ ಮಿಥಾಲಿ ಪಡೆ ಇಂದು ಮತ್ತೊಂದು ವಿಕೆಟ್ ಕಳೆದುಕೊಂಡರೂ ಉತ್ತಮ ಸ್ಥಿತಿಯಲ್ಲಿದೆ.
ಆರಂಭದಲ್ಲಿ ವೇಗವಾಗಿ ಬ್ಯಾಟ್ ಬೀಸಿದ್ದ ಮಂಧನಾ, ಮೊದಲ ವಿಕೆಟ್ ಬಿದ್ದ ಬಳಿಕ ಹೆಚ್ಚಿನ ಜಾಗರೂಕತೆಯಿಂದ ಆಟವಾಡಿದರು. ಮೊದಲ ದಿನದಾಟದ ಅಂತ್ಯಕ್ಕೆ ಅಜೇಯ 80 ರನ್ ಗಳಿಸಿದ್ದ ಸ್ಮೃತಿ ಇಂದು ಶತಕ ಪೂರೈಸಿದರು. ಒಟ್ಟು 2016 ಎಸೆತ ಎದುರಿಸಿದ ಮಂಧನಾ 127 ರನ್ ಗಳಿಸಿ ಔಟಾದರು. ಈ ಇನ್ನಿಂಗ್ಸ್ ನಲ್ಲಿ ಸ್ಮೃತಿ ಬೌಂಡರಿ ಮತ್ತು ಒಂದು ಸಿಕ್ಸರ್ ಬಾರಿಸಿದರು.
ಇದನ್ನೂ ಓದಿ:ಪಂಜಾಬ್ ಗೆ ದೊಡ್ಡ ಹಿನ್ನಡೆ: ಐಪಿಎಲ್ ನಿಂದ ಹೊರಗುಳಿಯಲು ಗೇಲ್ ನಿರ್ಧಾರ
70 ಓವರ್ ಗಳ ಅಂತ್ಯಕ್ಕೆ ಭಾರತ ತಂಡ ಎರಡು ವಿಕೆಟ್ ನಷ್ಟಕ್ಕೆ 197 ರನ್ ಗಳಿಸಿದೆ. ಪೂನಂ ರಾವತ್ ಅಜೇಯ 31 ಮತ್ತು ನಾಯಕಿ ಮಿಥಾಲಿ ರಾಜ್ 1 ರನ್ ಗಳಿಸಿ ಆಡುತ್ತಿದ್ದಾರೆ.
Well Played #SmritiMandhana. Maiden Test Century and what also the first Indian to score century in Pink ball test. Proud moment. This is just an start. Way to go ?#INDvsAUS pic.twitter.com/lAVqTtoFwD
— Himanshu kumar (@himanshukk18) October 1, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Singapore: ಇಂದಿನಿಂದ ವಿಶ್ವ ಚೆಸ್: ಗುಕೇಶ್-ಲಿರೆನ್ ಮುಖಾಮುಖಿ
Australia: ಪರ್ತ್‌ಗೆ ಆಗಮಿಸಿದ ರೋಹಿತ್ ಶರ್ಮ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.